Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಸ್ಥ ಸಮಾಜ ನಿರ್ಮಾಣಕ್ಕೆ...

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ: ಮಂಜುಳಾ ಮಾನಸ

ವಾರ್ತಾಭಾರತಿವಾರ್ತಾಭಾರತಿ7 April 2016 10:17 PM IST
share
ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ: ಮಂಜುಳಾ ಮಾನಸ

ಮಡಿಕೇರಿ ಎ.7: ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು ಕರೆ ನೀಡಿದ್ದಾರೆ. ಸುಂಟಿಕೊಪ್ಪದ ದಿ ಕೂರ್ಗ್ ಫೌಂಡೇಷನ್ ಪಾಲಿಬೆಟ್ಟ ಹಾಗೂ ಸ್ವಸ್ಥ ಶಾಲೆ ಇವರ ವತಿಯಿಂದ ಸುಂಟಿಕೊಪ್ಪ ಸ್ವಸ್ಥ ಶಾಲೆಯ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳೆಯರು ಮತ್ತು ವಿಕಲಚೇತನ ಮಹಿಳೆಯರೊಂದಿಗೆ ಸಂವಾದ ಹಾಗೂ ಪಾಲಕರೊಡನೆ ಸಮಾಲೋಚನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾನವ ಸಂಘ ಜೀವಿಯಾಗಿದ್ದು, ಹುಟ್ಟು ಮತ್ತು ಬದುಕಿನ ನಡುವಿನ ಅವಧಿಯಲ್ಲಿ ಹುಟ್ಟಿನಿಂದ ಕಿವುಡರು, ಮೂಗರು ಹೀಗೆ ನಾನಾ ರೀತಿಯ ವಿಕಲತೆಗೆ ತುತ್ತಾಗಿ ನೋವನ್ನು ಅನುಭವಿಸುತ್ತಾರೆ. ಇಂತಹ ವಿಕಲಚೇತನ ಮಕ್ಕಳಿಗೆ ಇತರರಂತೆ ಸ್ವಸ್ಥ ಬದುಕು ರೂಪಿಸಲು ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದು ಹೇಳಿದರು. ಸರಕಾರ ವಿಕಲಚೇತನರಿಗಾಗಿ ಹಲವು ಕಾರ್ಯಕ್ರಮಗಳನ್ನು ತಲುಪಿಸಲು ಪ್ರಯತ್ನಿಸುತ್ತಿದೆ. ಆ ದಿಸೆಯಲ್ಲಿ ಸರಕಾರೇತರ ಸಂಸ್ಥೆಗಳು ಸಹ ಕೈಜೋಡಿಸಿ ವಿಕಲಚೇತನರ ಬದುಕು ಹಸನು ಮಾಡಲು ಮುಂದಾಗಬೇಕಿದೆ. ಆ ನಿಟ್ಟಿನಲ್ಲಿ ಸ್ವಸ್ಥ ಸಂಸ್ಥೆ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದಲ್ಲಿ ಉಳ್ಳವರು ಮತ್ತು ಇಲ್ಲದವರ ನಡುವೆ ಅಜಗಜಾಂತರ ವ್ಯತ್ಯಾಸ ಕಂಡುಬರುತ್ತಿದೆ. ಈ ರೀತಿ ಆಗದೆ ಸಮಾಜದಲ್ಲಿ ಉಳ್ಳವರು, ಇಲ್ಲದವರಿಗೆ ಸಹಾಯ ಹಸ್ತ ಚಾಚುವಂತಾಗಬೇಕು. ಜೊತೆಗೆ ಅವರನ್ನು ಶಿಕ್ಷಣ, ಆರೋಗ್ಯ ನೀಡುವತ್ತ ವಿಶೇಷ ಆಸಕ್ತಿ ವಹಿಸಬೇಕು. ಮೂಲನಿವಾಸಿ ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರಲು ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಎಂದು ಮಂಜುಳಾ ಮಾನಸ ಅವರು ಸಲಹೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಮಾತನಾಡಿ, ಸಮಾಜದಲ್ಲಿ ಹಲವು ಜನ ವರ್ಗಗಳು ಬದುಕು ಸವೆಸುತ್ತಿದ್ದಾರೆ. ಯಾವುದೇ ಕ್ಷೇತ್ರದಲ್ಲಿ ವ್ಯಕ್ತಿ ಆಧಾರಿತಕ್ಕೆ ಮಹತ್ವ ನೀಡಲಾಗುತ್ತಿದೆ. ಇದು ತೊಲಗಿ, ವಿಷಯಾಧಾರಿತ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು. ವಿಷಯಾಧಾರಿತ ಚರ್ಚೆಗಳು ನಡೆಯುವುದರಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಸಮಾಜದಲ್ಲಿ ವಿಕಲಚೇತನರು, ಬಡವರು, ನಿರ್ಗತಿಕರಿಗೆ ಸರಕಾರದ ಸೌಲಭ್ಯಗಳು ತಲುಪಬೇಕಿದೆ ಎಂದು ಅವರು ಹೇಳಿದರು. ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಶಾರದಾ ರಾಮನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಆದರೂ ಗಿರಿಜನ ಬುಡಕಟ್ಟು ಸಮುದಾಯದಲ್ಲಿ ಬಾಲ್ಯ ವಿವಾಹಗಳು ನಿರಂತರವಾಗಿ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ ಎಂದರು. ಕಾರ್ಪೊರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರಾದ ನಾಗೇಂದ್ರ, ಸ್ವಸ್ಥ ಸಂಸ್ಥೆಯ ಉಪ ನಿರ್ದೇಶಕರಾದ ಆರತಿ ಸೋಮಯ್ಯ ಅವರು ಮಾತನಾಡಿದರು. ಸ್ವಸ್ಥ ಸಂಸ್ಥೆಯ ನಿರ್ದೇಶಕರಾದ ಗಂಗಾ ಚಂಗಪ್ಪ, ವಿಕಲಚೇತನರ ಅಧಿಕಾರಿ ಎನ್.ಎಂ.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X