Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾಸಂಸ್ಥೆಗಳಲ್ಲಿ ಪಠ್ಯ-ಕ್ರೀಡೆಗೆ...

ವಿದ್ಯಾಸಂಸ್ಥೆಗಳಲ್ಲಿ ಪಠ್ಯ-ಕ್ರೀಡೆಗೆ ಸಮಾನ ಪ್ರಾಮುಖ್ಯತೆ ಅಗತ್ಯ: ಜಾವಗಲ್ ಶ್ರೀನಾಥ್

ವಾರ್ತಾಭಾರತಿವಾರ್ತಾಭಾರತಿ7 April 2016 11:46 PM IST
share
ವಿದ್ಯಾಸಂಸ್ಥೆಗಳಲ್ಲಿ ಪಠ್ಯ-ಕ್ರೀಡೆಗೆ ಸಮಾನ ಪ್ರಾಮುಖ್ಯತೆ ಅಗತ್ಯ: ಜಾವಗಲ್ ಶ್ರೀನಾಥ್

ನಿಟ್ಟೆ ‘ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣ’ ಉದ್ಘಾಟನೆ

ನಿಟ್ಟೆ, ಎ.7: ವಿದ್ಯಾಸಂಸ್ಥೆಗಳು ಪಠ್ಯ ಮತ್ತು ಕ್ರೀಡೆಗೆ ಸಮಾನವಾದ ಪ್ರಾಮುಖ್ಯತೆಯನ್ನು ನೀಡಬೇಕು. ಕ್ರೀಡೆಯಲ್ಲಿ ಕೇವಲ ಕೌಶಲ್ಯ ಇದ್ದರೆ ಸಾಲದು. ಅದಕ್ಕೆ ಬೇಕಾದ ಮೂಲಭೂತ ಸೌಕರ್ಯ ಹಾಗೂ ಉತ್ತಮ ಶಿಕ್ಷಕರನ್ನು ಒದಗಿಸುವ ಕಾರ್ಯವಾಗಬೇಕು. ಇದರಿಂದ ಮಾತ್ರ ಪರಿಪೂರ್ಣ ಕ್ರೀಡಾಪಟುಗಳ ಸೃಷ್ಟಿ ಸಾಧ್ಯ. ಇದು ಶಿಕ್ಷಣಕ್ಕೂ ಅನ್ವಯವಾಗುತ್ತದೆ ಎಂದು ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಹೇಳಿದ್ದಾರೆ.

ನಿಟ್ಟೆ ಶಿಕ್ಷಣ ಸಂಸ್ಥೆಯು ತನ್ನ ನಿಟ್ಟೆ ಕ್ಯಾಂಪಸ್‌ನಲ್ಲಿ ನೂತನವಾಗಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯ ಹಾಗೂ ಮೂಲಭೂತ ಸೌಕರ್ಯಗಳನ್ನೊಳಗೊಂಡ ‘ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣ’ವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

14-28 ವರ್ಷ ವಯಸ್ಸಿನ ಮಧ್ಯೆ ಒಬ್ಬ ವ್ಯಕ್ತಿ ಸಾಕಷ್ಟು ಸ್ಪರ್ಧೆಗಳನ್ನು ಎದುರಿಸಬೇಕಾಗುತ್ತದೆ. ಈ ಸ್ಪರ್ಧೆಯ ಒತ್ತಡದಿಂದ ವಿಮುಕ್ತಿ ಪಡೆಯಲು ಪ್ರತಿದಿನ ಎರಡು ಗಂಟೆಗಳ ಕಾಲ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಮನಸ್ಸು ಉಲ್ಲಾಸ ಪಡೆದುಕೊಳ್ಳುತ್ತದೆ ಎಂದರು.

ಬದುಕಿನಲ್ಲಿ ಸೋಲು-ಗೆಲುವನ್ನು ಯಾವ ರೀತಿ ಸ್ವೀಕರಿಸಬೇಕೆಂಬುದನ್ನು ಕ್ರೀಡೆ ಕಲಿಸಿಕೊಡುತ್ತದೆ. ಪರೀಕ್ಷೆ ಸಂದರ್ಭದಲ್ಲಿ ಓದಲು ಸಮಯ ಇಲ್ಲ ಎಂಬ ಕಾರಣ ನೀಡಿ ವಿದ್ಯಾರ್ಥಿಗಳು ಕ್ರೀಡೆಯಿಂದ ದೂರ ಇರುತ್ತಾರೆ. ಆದರೆ ಪರೀಕ್ಷೆ ಸಂದರ್ಭದಲ್ಲೂ ಒಂದು ಗಂಟೆಗಳ ಕಾಲ ಕ್ರೀಡೆಯಲ್ಲಿ ತೊಡಗಿಕೊಂಡರೆ ರಕ್ತ ಸಂಚಲನ ಸರಿಯಾಗಿ ತಾಜಾತನ ಮೂಡಿ ಆತ್ಮ ವಿಶ್ವಾಸ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.

ಅಂತಾರಾಷ್ಟ್ರೀಯ ಮಟ್ಟದ 50 ಮೀ. ಉದ್ದದ ಈಜುಕೊಳಕ್ಕೆ ಸಾಂಕೇತಿಕವಾಗಿ ಶಿಲಾನ್ಯಾಸ ನೆರವೇ ರಿಸಿದ ಕರ್ನಾಟಕದ ಮಾಜಿ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ ಮಾತನಾಡಿ, ವಿದ್ಯೆ ಮತ್ತು ಕ್ರೀಡೆ ಜೊತೆಯಾಗಿ ಸಾಗಿದರೆ ಮಾತ್ರ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ ಎಂದು ಹೇಳಿದರು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ದೇಶದಲ್ಲೇ ಅತ್ಯಂತ ಹೆಚ್ಚು ಇಂಜಿನಿಯರಿಂಗ್ ಕಾಲೇಜು ಗಳಿರುವುದು ಕರ್ನಾಟಕದಲ್ಲಿ. ಎಲ್ಲ ಕಾಲೇಜುಗಳು ಕ್ರೀಡೆಗೆ ಆದ್ಯತೆ ನೀಡಿದರೆ, ಕರ್ನಾಟಕವು ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯ ಎಂದರು.

ನಿಟ್ಟೆ ವಿವಿಯ ಚಾನ್ಸಲರ್ ಅಧ್ಯಕ್ಷ ಎನ್.ವಿನಯ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಚಿಪ್ಳೂಣ್‌ಕರ್ ಸ್ವಾಗತಿಸಿದರು. ರಿಜಿಸ್ಟ್ರಾರ್ ಯೋಗೇಶ್ ಹೆಗ್ಡೆ ವಂದಿಸಿದರು. ರೋಶನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X