ಐಪಿಎಲ್ ಪಂದ್ಯಗಳ ಸ್ಥಳಾಂತರ ವಿಚಾರ: ಹೊಸ ಅರ್ಜಿ ಸಲ್ಲಿಕೆಗೆ ಕರ್ನಾಟಕ ಹೈಕೋರ್ಟ್ ಸೂಚನೆ
ಬೆಂಗಳೂರು, ಎ.7: ರಾಜ್ಯದಲ್ಲಿ ಭೀಕರ ಬರಗಾಲ ತಲೆ ದೋರಿರುವ ಹಿನ್ನಲೆಯಲ್ಲಿ ಐಪಿಎಲ್ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಮತ್ತೊಮ್ಮೆ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಅರ್ಜಿದಾರರಿಗೆ ತಿಳಿಸಿದೆ.
ನೀರಿನ ಸಮಸ್ಯೆ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಐಪಿಎಲ್‌ನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಬಿಸಿಸಿಐಗೆ ಸೂಚಿಸುವಂತೆ ಹೈಕೋರ್ಟ್‌ಗೆ ಮೊರೆ ಹೋಗಿದ್ದೇನೆ. ಐಪಿಎಲ್ ಆಯುಕ್ತರನ್ನು ಪ್ರತಿವಾದಿಯಾಗಿ ಹೆಸರಿಸದಂತೆ ಕೋರ್ಟ್ ತನಗೆ ಸೂಚಿಸಿದೆ. ಎ.11 ರಂದು ಹೊಸ ಅರ್ಜಿ ಸಲ್ಲಿಸಲು ಕೋರ್ಟ್ ತಿಳಿಸಿದೆ ಎಂದು ಅರ್ಜಿದಾರ ವಕೀಲ ದಿವಾಕರ್ ಹೇಳಿದ್ದಾರೆ.
Next Story





