ಪಾಕ್, ದ.ಆಫ್ರಿಕ ವಿರುದ್ಧ ಹಗಲು-ರಾತ್ರಿ ಟೆಸ್ಟ್: ಆಸ್ಟ್ರೇಲಿಯ ಸಿದ್ಧತೆ
ಸಿಡ್ನಿ, ಎ.7: ಕಳೆದ ವರ್ಷ ಅಡಿಲೇಡ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ಗುಲಾಬಿ ಬಣ್ಣದ ಚೆಂಡಿನಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಯೋಜಿಸಿ ಯಶಸ್ಸು ಸಾಧಿಸಿರುವ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿ ಪ್ರವಾಸಿ ದೇಶಗಳಾದ ದಕ್ಷಿಣ ಆಫ್ರಿಕ ಹಾಗೂ ಪಾಕಿಸ್ತಾನದ ವಿರುದ್ಧ ಇನ್ನೆರಡು ಹಗಲು-ರಾತ್ರಿ ಪಂದ್ಯಗಳನ್ನು ಆಯೋಜಿಸಲು ಸಜ್ಜಾಗಿದೆ ಎಂದು ‘ಸಿಡ್ನಿ ಮಾರ್ನಿಂಗ್ ಹೆರಾಲ್ಡ್’ ಪತ್ರಿಕೆ ವರದಿ ಮಾಡಿದೆ.
ಆಸ್ಟ್ರೇಲಿಯ ತಂಡ ಅಡಿಲೇಡ್‌ನಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಹಾಗೂ ಬ್ರಿಸ್ಬೇನ್‌ನ ಗಾಬಾ ಸ್ಟೇಡಿಯಂನಲ್ಲಿ ಪಾಕಿಸ್ತಾನದ ವಿರುದ್ಧ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಲಿದೆ ಎಂದು ದಿನಪತ್ರಿಕೆ ತಿಳಿಸಿದೆ.
ಕ್ರಿಕೆಟ್ ಆಸ್ಟ್ರೇಲಿಯ ಈ ತಿಂಗಳಾಂತ್ಯದಲ್ಲಿ 2016-17ರ ಋತುವಿನ ಅಂತಾರಾಷ್ಟ್ರೀಯ ಹಾಗೂ ದೇಶೀಯ ವೇಳಾಪಟ್ಟಿಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.
Next Story





