Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಳಿಗಾ ಹತ್ಯೆ ಪ್ರಕರಣ: ನಿಧಾನಗತಿಯ...

ಬಾಳಿಗಾ ಹತ್ಯೆ ಪ್ರಕರಣ: ನಿಧಾನಗತಿಯ ತನಿಖೆಗೆ ಗೃಹ ಸಚಿವರ ಸೂಚನೆ: ನರೇಂದ್ರ ನಾಯಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ8 April 2016 7:11 PM IST
share
ಬಾಳಿಗಾ ಹತ್ಯೆ ಪ್ರಕರಣ: ನಿಧಾನಗತಿಯ ತನಿಖೆಗೆ ಗೃಹ ಸಚಿವರ ಸೂಚನೆ: ನರೇಂದ್ರ ನಾಯಕ್ ಆರೋಪ

ಮಂಗಳೂರು, ಎ. 8: ಆರ್‌ಟಿಐ ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಅವರ ಹತ್ಯೆಯನ್ನು ನಿಧಾನಗೊಳಿಸಲು ಬ್ರಾಹ್ಮಣ ಸ್ವಮೀಜಿಯೊಬ್ಬರ ಆದೇಶದ ಮೇರೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ. ಇದರಿಂದಲೇ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನರೇಶ್ ಶೆಣೈ ಅವರನ್ನು ಎರಡು ವಾರಗಳ ಬಳಿಕವೂ ಬಂಧಿಸಿಲ್ಲ ಎಂದು ರಾಷ್ಟ್ರೀಯ ವಿಚಾರವಾದಿ ಸಂಘಟನೆಯ ಅಧ್ಯಕ್ಷ ನರೇಂದ್ರ ನಾಯಕ್ ಆರೋಪಿಸಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಬಾಳಿಗಾರ ಹತ್ಯೆಯಾಗಿ ಎರಡು ವಾರ ಕಳೆದರೂ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಇದು ಕಾಂಗ್ರೆಸ್ ನೇತೃತ್ವದ ಸರಕಾರ ಇತರ ಕೋಮುವಾದಿ ಪಕ್ಷಗಳಿಗಿಂತ ಭಿನ್ನವಾಗಿಲ್ಲ ಎಂಬುದನ್ನು ತೋರಿಸುತ್ತದೆ. ಅಲ್ಲದೆ, ಇದು ರಾಜಕೀಯ ಮತ್ತು ಧರ್ಮದ ನಡುವಿನ ಅಪವಿತ್ರ ಮೈತ್ರಿಯನ್ನು ತೋರಿಸುತ್ತದೆ. ಈ ವರ್ತನೆಯನ್ನು ರಾಷ್ಟ್ರೀಯ ವಿಚಾರವಾದಿ ಸಂಘಗಳ ಒಕ್ಕೂಟ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಬಾಳಿಗಾ ಹತ್ಯೆ ಕೈವಾಡ ಇರುವ ಬಗ್ಗೆ ಆರೋಪ ಕೇಳಿ ಬಂದಿರುವ ನರೇಶ್ ಶೆಣೈ ಅವರ ಪರವಾಗಿ ನಿಯೋಗವೊಂದು ದೇವಮಾನವ ಬ್ರಾಹ್ಮಣ ಸ್ವಾಮೀಜಿಯೊಬ್ಬರ ಬಳಿ ತೆರಳಿ ಮನವಿ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿರುವುದಾಗಿ ತಿಳಿಸಿದ ಅವರು, ಈ ಮನವಿಯ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ತನಗೆ ನಿಕಟವರ್ತಿ ಎನ್ನಲಾದ ರಾಜ್ಯದ ಗೃಹ ಸಚಿವ ಪರಮೇಶ್ವರ್ ಅವರನ್ನು ಸಂಪರ್ಕಿಸಿ ತನಿಖೆಯನ್ನು ನಿಧಾನಗೊಳಿಸುವಂತೆ ತಿಳಿಸಿದ್ದಾರೆಂದು ಹೇಳಲಾಗಿದ್ದು, ಅದರಂತೆ ಗೃಹ ಸಚಿವರು ನಗರ ಪೊಲೀಸ್ ಆಯುಕ್ತರಿಗೆ ತನಿಖೆಯನ್ನು ನಿಧಾನಗೊಳಿಸುವಂತೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ನರೇಂದ್ರ ನಾಯಕ್ ಹೇಳಿದ್ದಾರೆ.

15ರಂದು ಪ್ರತಿಭಟನೆ

ಈ ಹಿನ್ನೆಲೆಯಲ್ಲಿ ಎಪ್ರಿಲ್ 15ರಂದು ಬೆಳಗ್ಗೆ 10 ಗಂಟೆಗೆ ದೇಶಪ್ರೇಮಿ ಸಂಘಟನೆಗಳ ವೇದಿಕೆಯ ವತಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನರೇಂದ್ರ ನಾಯಕ್ ತಿಳಿಸಿದ್ದಾರೆ.

ಬಾಳಿಗಾ ಅವರನ್ನು ಮಾರ್ಚ್ 21ರಂದು ಪಿವಿಎಸ್ ಬಳಿಯ ಅವರ ನಿವಾಸದ ಬಳಿ ಕೊಚ್ಚಿ ಕೊಲೆ ಮಾಡಲಾಗಿತ್ತು. ನಗರದಲ್ಲಿರುವ ಕೆಲವು ಅಕ್ರಮ ಕಟ್ಟಡಗಳ ಬಗ್ಗೆ ಹಾಗೂ ನಗರದ ಕಾರ್‌ಸ್ಟ್ರೀಟ್‌ನ ದೇವಸ್ಥಾನವೊಂದರ ಅವ್ಯಹಾರವನ್ನು ಬಾಳಿಗಾ ಅವರು ಮಾಹಿತಿ ಹಕ್ಕಿನಡಿ ಮಾಹಿತಿಯನ್ನು ಕಲೆ ಹಾಕಿದ್ದರು. ಇದೇ ಅವರ ಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆಯ ಕೆಲವೇ ದಿನಗಳಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಬಾಳಿಗಾ ಹತ್ಯೆಯ ಬಳಿಕ ನಮೋ ಬ್ರಿಗೇಡ್‌ನ ಸಂಸ್ಥಾಪ ನರೇಶ್ ಶೆಣೈ ತಲೆಮರೆಸಿಕೊಂಡಿದ್ದರು. ಕೊಲೆಯಲ್ಲಿ ನರೇಶ್ ಶೆಣೈ ಕೈವಾಡ ಇರುವ ಬಗ್ಗೆ ಗುಮಾನಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನರೇಶ್ ಶೆಣೈಯನ್ನು ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜಲಾಗುವಂತೆ ಸೂಚಿಸಿದ್ದರು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಮಾರ್ಚ್ 31ರಂದು ಪೊಲೀಸ್ ತನಿಖಾ ತಂಡವು ನರೇಶ್ ಶೆಣೈ ಅವರ ಮನೆಗೆ ದಾಳಿ ನಡೆಸಿ ಶೋಧ ನಡೆಸಿದಾಗಲೂ ಅವರು ಮನೆಯಲ್ಲಿ ಪತ್ತೆಯಾಗಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X