Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಜೆಕಾರು : ಹಾಡಿಯಂಗಡಿ ಬಸದಿ ವಿಗ್ರಹಗಳು...

ಅಜೆಕಾರು : ಹಾಡಿಯಂಗಡಿ ಬಸದಿ ವಿಗ್ರಹಗಳು ಅಂಡಾರು ಬಳಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ8 April 2016 9:00 PM IST
share
ಅಜೆಕಾರು : ಹಾಡಿಯಂಗಡಿ ಬಸದಿ ವಿಗ್ರಹಗಳು ಅಂಡಾರು ಬಳಿ ಪತ್ತೆ

ಅಜೆಕಾರು, ಎ.8: ಕಳೆದ ಫೆ.20-21ರ ರಾತ್ರಿ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಅನಂತನಾಥ ಸ್ವಾಮಿ ಬಸದಿಯಿಂದ ಕಳವು ಮಾಡಲಾದ ಲಕ್ಷಾಂತರ ರೂ. ವೌಲ್ಯದ ದೇವರ ವಿಗ್ರಹ ಹಾಗೂ ಸೊತ್ತುಗಳಲ್ಲಿ ಐದು ವಿಗ್ರಹಗಳು ಇಂದು ಬೆಳಗ್ಗೆ ಅಂಡಾರು ಗ್ರಾಮದ ಮಂಗಪಾಡಿ ಬಳಿಯ ಕಾಡುಹೊಳೆ ಮೋರಿಯ ಬದಿಯಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿವೆ.


ಕಾಡಿನ ಮಧ್ಯದಲ್ಲಿರುವ ಸಣ್ಣ ತೊರೆಗೆ ನಿರ್ಮಿಸಲಾದ ಮೋರಿಯ ಬದಿಯಲ್ಲಿ ಗೋಣಿಚೀಲದಲ್ಲಿ ಇರಿಸಿದ ಮೂರ್ತಿಗಳನ್ನು ಸ್ಥಳೀಯರಾದ ಶ್ರೀಧರ ಆಚಾರಿ ಎಂಬವರು ಬೆಳಗ್ಗೆ 10 ಗಂಟೆ ಸುಮಾರಿಗೆ ಗಮನಿಸಿ ಊರಿನವರಿಗೆ ಹಾಗೂ ಅಜೆಕಾರು ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದರು. ಹಾಡಿಯಂಗಡಿ ಬಸದಿಯಿಂದ ಕಳವು ಮಾಡಲಾದ ಪುರಾತನ ವಿಗ್ರಹಗಳಲ್ಲಿ ಐದನ್ನು ಮಾತ್ರ ಕಳ್ಳರು ಒಂದೂವರೆ ತಿಂಗಳ ಬಳಿಕ ಯಾಕೆ ಇಲ್ಲಿಟ್ಟು ಹೋದರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ದವಸ್ತುಗಳಲ್ಲಿ ಸುಮಾರು 75,000ರೂ. ವೌಲ್ಯದ ಆದಿನಾಥ ಸ್ವಾಮಿಯ ಪಂಚಲೋಹದಮೂರ್ತಿ, ಭರತ ಸ್ವಾಮಿಯ ಪಂಚಲೋಹದ ಮೂರ್ತಿ, ಬಾಹುಬಲಿ ಸ್ವಾಮಿಯ ಪಂಚಲೋಹದ ಮೂರ್ತಿ, ಅನಂತಸ್ವಾಮಿಯ ಪಂಚಲೋಹದ ಮೂರ್ತಿ ಹಾಗೂ ಇನ್ನೊಂದು ಶೆರ್ವಾಣಿ ಯಕ್ಷಿ ತಾಮ್ರದ ಮೂರ್ತಿಗಳನ್ನು ಗೋಣಿಚೀಲದಲ್ಲಿ ತುಂಬಿಸಿ ಇಟ್ಟು ಹೋಗಿದ್ದಾರೆ. ಆದರೆ ಇನ್ನೂ ಒಂದೂವರೆ ಲಕ್ಷ ರೂ.ಗಳಿಗೂ ಅಧಿಕ ವೌಲ್ಯದ ಪದ್ಮಾವತಿ ಅಮ್ಮನ ಪಂಚ ಲೋಹದ ಮೂರ್ತಿ, ಚಿನ್ನದ ಮುಖವಾಡ, ಬೆಳ್ಳಿಯ ಕವಚ, ಚಿನ್ನದ ಬಂಧಿ, 4 ಬೆಳ್ಳಿಯ ಪಕ್ಕಿ ನಿಶಾನೆ, ಬೆಳ್ಳಿಯ ಸತ್ತಿಗೆ, 2 ಚಿನ್ನದ ಕರಿಮಣಿ, ಚಿನ್ನದ ಬಳೆ, ಅನಂತನಾಥ ಸ್ವಾಮಿಯ ಬೆಳ್ಳಿಯ ಪ್ರಭಾವಳಿ, ಬೆಳ್ಳಿಯ ಸತ್ತಿಗೆ ಯನ್ನು ಕಳ್ಳರು ಫೆ.20-21ರಂದು ಕದ್ದೊಯ್ದಿದ್ದು, ಅವುಗಳು ಪತ್ತೆಯಾಗಿಲ್ಲ. ಫೆ.21ರ ಬೆಳಗ್ಗೆ 6:30ಸುಮಾರಿಗೆ ಬಸದಿಯ ಅರ್ಚಕ ಶ್ರೀಕಾಂತ ಇಂದ್ರ ಪೂಜೆಗೆಂದು ಬಂದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿತ್ತು. ಗರ್ಭಗುಡಿಯ ಪೂರ್ವ ದಿಕ್ಕಿನಲ್ಲಿರುವ ಬಾಗಿಲು ಮತ್ತು ಕಬ್ಬಿಣದ ಗ್ರೀಲ್‌ಗೆ ಹಾಕಿದ ಬೀಗ ಮುರಿದು ಒಳನುಗ್ಗಿದ ಕಳ್ಳರು ದಿನನಿತ್ಯ ಪೂಜೆ ಮಾಡುವ ದೇವರ ಮೂರ್ತಿಗಳನ್ನು ಕಳವುಗೈದಿದ್ದರು. ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಸುಮನ ಹಾಗೂ ಅಜೆಕಾರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೋಣಿಚೀಲವನ್ನು ಇರಿಸಿ ಹೋಗುವ ವ್ಯಕ್ತಿಯನ್ನು ತುಂಬಾ ದೂರದಿಂದ ನೋಡಿರುವುದಾಗಿ ಸ್ಥಳೀಯರೊಬ್ಬರು ತಿಳಿಸಿದ್ದರೂ, ಆತನ ಬಗ್ಗೆ ಯಾವುದೇ ಕುರುಹು ನೀಡಲು ಅಸಮರ್ಥರಾಗಿದ್ದಾರೆ.
ಅಜೆಕಾರು ಪೊಲೀಸರು ಪ್ರಕರಣದ ತನಿಖೆ ನಡೆಸುತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X