ಮಂಗಳೂರು : ಎಪ್ರಿಲ್ 10ರಂದು ಕೆ.ಸಿ.ನಗರದಲ್ಲಿ ಸಲಫಿ ಸಮಾವೇಶ
ಮಂಗಳೂರು, ಎ.8: ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್‌ನ ಸಂದೇಶ ಪ್ರಚಾರ ಅಭಿಯಾನದ ಅಂಗವಾಗಿ ಎಪ್ರಿಲ್ 10ರಂದು ಮಗ್ರಿಬ್ ನಮಾಝಿನ ಬಳಿಕ ತಲಪಾಡಿ ಸಮೀಪದ ಕೆ.ಸಿ.ನಗರ ಜಂಕ್ಷನ್‌ನಲ್ಲಿ ಸಲಫಿ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ವೌಲವಿ ಸಜ್ಜಾದ್ ಸಖಾಫಿ 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಿಷಯದಲ್ಲಿ ಪ್ರವಚನ ನೀಡಲಿದ್ದಾರೆ. ಸಲಫಿ ಮೂವ್‌ಮೆಂಟ್‌ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯೀಲ್ ಶಾಫಿ ಸಮಾವೇಶವನ್ನು ಉದ್ಘಾಟಿಸಲಿದ್ದು, ತಲಪಾಡಿಯ ಅಬ್ರಾರ್ ಮಸೀದಿಯ ಆಡಳಿತ ಸಮಿತಿ ಅಧ್ಯಕ್ಷ ಅಬ್ಬಾಸ್ ತಲಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





