Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭಾರತ್ ಮಾತಾ ಕಿ ಜೈ’ ಬಗ್ಗೆ ಫತ್ವಾದ...

‘ಭಾರತ್ ಮಾತಾ ಕಿ ಜೈ’ ಬಗ್ಗೆ ಫತ್ವಾದ ಅಗತ್ಯವಿಲ್ಲ

ಮುಸ್ಲಿಂ ಧಾರ್ಮಿಕ ವಿದ್ವಾಂಸ ಖಾಲಿದ್ ರಶೀದ್

ವಾರ್ತಾಭಾರತಿವಾರ್ತಾಭಾರತಿ8 April 2016 11:12 PM IST
share

ಲಕ್ನೋ,ಎ.8: ‘ಭಾರತ್ ಮಾತಾ ಕಿ ಜೈ’ ಘೋಷಣೆಯ ಕುರಿತು ವಿವಾದಗಳು ಭುಗಿಲೆದ್ದಿರುವ ನಡುವೆಯೇ ಪ್ರಸಿದ್ಧ ಮುಸ್ಲಿಂ ಧಾರ್ಮಿಕ ವಿದ್ವಾಂಸ ಹಾಗೂ ಅಖಿಲ ಭಾರತ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನ ಸದಸ್ಯ ಖಾಲಿದ್ ರಶೀದ್ ಫರಂಗಿಮಹಲ್ ಅವರು ದಾರುಲ್ ಉಲೂಮ್‌ನಂತಹ ಧಾರ್ಮಿಕ ಸಂಸ್ಥೆಗಳು, ದೇಶ ಹಾಗೂ ಸಮುದಾಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ವಿಷಯಗಳ ಬಗ್ಗೆ ಫತ್ವಾಗಳನ್ನು ಹೊರಡಿಸುವುದರಿಂದ ದೂರ ಉಳಿಯಬೇಕೆಂದು ಆಗ್ರಹಿಸಿದ್ದಾರೆ.

ಲಕ್ನೋದಲ್ಲಿ ಶುಕ್ರವಾರ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡುತ್ತಿದ್ದ ಅವರು ‘‘ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಎರಡು ಸಮುದಾಯಗಳ ಕೋಮುವಾದಿ ಶಕ್ತಿಗಳು ಈ ವಿವಾದವನ್ನು ಕೆದಕುತ್ತಿವೆ. ಇಂತಹ ಸೂಕ್ಷ್ಮ ಹಾಗೂ ರಾಜಕೀಯ ವಿಷಯದ ಬಗ್ಗೆ ಯಾವುದೇ ಧಾರ್ಮಿಕ ಸಂಸ್ಥೆಯು ಫತ್ವಾ ಹೊರಡಿಸಿದಲ್ಲಿ ಅದರಿಂದ ಕೋಮುವಾದಿ ಶಕ್ತಿಗಳಿಗೆ ಪ್ರಯೋಜನವಾಗಲಿದೆ. ನಾವು ಯಾಕೆ ಇಂತಹ ಸ್ಥಾಪಿತ ಹಿತಾಸಕ್ತಿಗಳ ಕೈಗಳಿಗೆ ಸಾಧನಗಳಾಗಬೇಕು’’ ಎಂದು ಅವರು ಹೇಳಿದ್ದಾರೆ.

    ಯಾವುದೇ ಧಾರ್ಮಿಕ ಸಂಸ್ಥೆ ಕೂಡಾ ತನ್ನ ಮುಂದೆ ಪ್ರಸ್ತಾಪಿಸಲಾದ ಪ್ರತಿಯೊಂದು ವಿಷಯಕ್ಕೂ ಫತ್ವಾವನ್ನು ಹೊರಡಿಸಬೇಕೆಂದೇನಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರೂ ಆದ ರಶೀದ್ ಫರಂಗಿಮಹಲ್ ಹೇಳಿದ್ದಾರೆ. ಸ್ವಾತಂತ್ರ ಸಂಗ್ರಾಮದ ಕಾಲದಲ್ಲಿ ಮುಸ್ಲಿಮರು ‘ಇಂಕ್ವಿಲಾಬ್ ಝಿಂದಾಬಾದ್’ ಹಾಗೂ ‘ಜೈ ಹಿಂದ್’ ಘೋಷಣೆಗಳನ್ನು ಕೂಗಿದ್ದರೆಂದು ನೆನಪಿಸಿದ ಅವರು ‘ಭಾರತ್ ಮಾತಾ ಕಿ ಜೈ’ ಕೂಡಾ ಅಂತಹದೇ ಅರ್ಥವನ್ನು ಧ್ವನಿಸುತ್ತದೆ ಎಂದಿದ್ದಾರೆ. ಈ ಘೋಷಣೆಯನ್ನು ಕೂಗಿದಾಗ ಯಾರಿಗೂ ವಿಗ್ರಹದ ನೆನಪಾಗುವುದಿಲ್ಲ, ಬದಲಿಗೆ ದೇಶದ ಭೂಪಟವು ಮನಸ್ಸಿನಲ್ಲಿ ಮೂಡುತ್ತದೆಯೆಂದವರು ಹೇಳಿದರು.

  ಭಾರತ್ ಮಾತಾ ಕಿ ಜೈ ಘೋಷಣೆಯು ಇಸ್ಲಾಂ ಧರ್ಮದ ಮೂಲಭೂತ ತತ್ವಗಳಿಗೆ ವಿರುದ್ಧವಾದುದರಿಂದ, ಮುಸ್ಲಿಮರು ಆ ಘೋಷಣೆಯನ್ನು ಕೂಗಬಾರದೆಂದು ಭಾರತದ ಅತಿ ದೊಡ್ಡ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಸಂಸ್ಥೆಯಾದ ದಾರುಲ್ ಉಲೂಮ್ ದೇವ್ ಬಂದ್ ಕಳೆದ ವಾರ ಫತ್ವಾ ಹೊರಡಿಸಿತ್ತು. ಇಸ್ಲಾಂನ ಪ್ರಧಾನ ತತ್ವವಾದ ‘ಅಲ್ಲಾಹು ಒಬ್ಬನೇ ದೇವರು’ ಎಂಬ ಸಿದ್ಧಾಂತಕ್ಕೆ ಆ ಘೋಷಣೆಯು ವಿರುದ್ಧವಾಗಿದೆಯೆಂದು ಫತ್ವಾ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X