ಅಬುಧಾಬಿಯಲ್ಲಿ ಕಾಸರಗೋಡು ಮೂಲದ ವ್ಯಕ್ತಿ ಸಾವು

ಕಾಸರಗೋಡು, ಎ.8: ಅಬುಧಾಬಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಂತ್ರಕ್ಕೆ ಸಿಲುಕಿ ಕಾಸರಗೋಡು ಮೂಲದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ.
ತುರುತ್ತಿ ಮಸೀದಿ ಸಮೀಪದ ನಿವಾಸಿ ಅಹ್ಮದ್ (60) ಮೃತಪಟ್ಟ ದುರ್ದೈವಿ. ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿರುವುದಾಗಿ ಸಂಬಂಧಿಕರಿಗೆ ಮಾಹಿತಿ ಲಭಿಸಿದೆ. ಅಹ್ಮದ್ ಮೂರು ದಶಕಗಳಿಂದ ಅಬುಧಾಬಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 6 ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಮರಳಿದ್ದರು. ಮೃತದೇಹವನ್ನು ಅಬುಧಾಬಿಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ.
Next Story





