Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತ ಹೈಮದ್‌ರ ಮೃತದೇಹ ಹಸ್ತಾಂತರ

ಪತ್ರಕರ್ತ ಹೈಮದ್‌ರ ಮೃತದೇಹ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ9 April 2016 11:03 PM IST
share

ಮಂಗಳೂರು, ಎ. 9: ಶುಕ್ರವಾರ ಬೆಳಗ್ಗೆ ಚಾರ್ಮಾಡಿ ಘಾಟ್‌ಗೆ ಪತ್ರಕರ್ತರರ ಜೊತೆ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ರಾಯಚೂರು ಜಿಲ್ಲೆಯ ಎರಮರಸ್ ಗ್ರಾಮದ ನಿವಾಸಿ ಹಾಗೂ ‘ಪ್ರಜಾವಾಣಿ’ ಪತ್ರಿಕೆಯ ಮಂಗಳೂರು ವರದಿಗಾರ ಹೈಮದ್ ಹುಸೈನ್ ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆ ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು.

ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ಹೃದಯಾಘಾತದಿಂದ ಮೃತಪಟ್ಟ ಬಳಿಕ ಅವರ ಮೃತದೇಹವನ್ನು ಸಂಜೆ ಮಂಗಳೂರಿಗೆ ತರಲಾಗಿತ್ತು. ಈ ಬಗ್ಗೆ ಅವರ ಹೆತ್ತವರು ಮತ್ತು ಸಹೋದರಿಗೆ ಮಾಹಿತಿ ನೀಡಲಾಗಿತ್ತು. ನಿನ್ನೆ ರಾತ್ರಿ ಸುಮಾರು 10:30ಕ್ಕೆ ಅವರ ಹಿರಿಯ ಸಹೋದರ ಮಂಗಳೂರಿಗೆ ಆಗಮಿಸಿದ್ದರು. ಹಿರಿಯ ಸಹೋದರನ ಅನುಮತಿಯೊಂದಿಗೆ ರಾತ್ರಿ 1 ಗಂಟೆಗೆ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಇನ್ನೋರ್ವ ಸಹೋದರ ಬೆಳಗ್ಗೆ ಸುಮಾರು 5 ಗಂಟೆಗೆ ಮಂಗಳೂರು ತಲುಪಿದ್ದರು. ಅಂತ್ಯ ಸಂಸ್ಕಾರ

ಶನಿವಾರ ಮುಂಜಾನೆ ನಗರದ ಬಂದರ್‌ನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಹೈಮದ್ ಅವರ ಮೃತದೇಹದ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಿ, ಬೆಳಗ್ಗೆ ಫಜರ್ ನಮಾಝ್‌ನ ಬಳಿಕ ಮಯ್ಯಿತ್ ನಮಾಝ್ ನೆರವೇರಿಸಲಾಯಿತು. ಅನಂತರ ಬೆಳಗ್ಗೆ 6:15ಕ್ಕೆ ಅವರ ಇಬ್ಬರು ಸಹೋದರರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಶನಿವಾರ ಸಂಜೆ ಸುಮಾರು 5:30ಕ್ಕೆ ಮೃತದೇಹ ರಾಯಚೂರಿನ ಎರಮರಸ್‌ಗೆ ತಲುಪಿರುವುದಾಗಿ ಅವರ ಸಹೋದರ ತಿಳಿಸಿದ್ದಾರೆ. ಅಲ್ಲಿ ಒಂದು ಗಂಟೆ ಕಾಲ ಕುಟುಂಬಸ್ಥರ ಹಾಗೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ತದನಂತರ ಅವರ ಮೃತದೇಹವನ್ನು ಎರಮರಸ್ ಗ್ರಾಮದ ಈದ್ಗಾ ಮಸೀದಿಗೆ ಕೊಂಡೊಯ್ದು ಮಗ್ರಿಬ್ ನಮಾಝಿನ ಬಳಿಕ ವೌಲಾನ ಅಬ್ದುಲ್ ಕರೀಂ ನೇತೃತ್ವದಲ್ಲಿ ಮಯ್ಯಿತ್ ನಮಾಝ್ ನೆರವೇರಿಸಲಾಯಿತು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಡಿಸಿಐಬಿ ಅಮಾನುಲ್ಲಾ, ಜಮಾಅತೆ ಇಸ್ಲಾಮೀ ಹಿಂದ್‌ನ ಮಾಧ್ಯಮ ಕಾರ್ಯದರ್ಶಿ ಶಬ್ಬೀರ್ ಅಹ್ಮದ್, ಹಿರಿಯ ಪತ್ರಕರ್ತರಾದ ತಾರನಾಥ, ಬಾಲಕೃಷ್ಣ ಪುತ್ತಿಗೆ, ಮುಹಮ್ಮದ್ ಆರಿಫ್, ಇರ್ಷಾದ್ ಸಹಿತ ಇತರ ಪತ್ರಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X