Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ:...

ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಐಡಿಯಿಂದ ಸರಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ9 April 2016 11:48 PM IST
share
ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಐಡಿಯಿಂದ ಸರಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ಬೆಂಗಳೂರು, ಎ.9: ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಪ್ರಕರಣದಲ್ಲಿ ಲಭ್ಯವಾಗಿರುವ ಮಾಹಿತಿಗಳನ್ನು ಉಲ್ಲೇಖಿಸಿ ರಾಜ್ಯ ಸರಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದಾರೆ.

ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇದುವರೆಗೆ ಸಚಿವರ ವಿಶೇಷಾಧಿಕಾರಿ ಓಬಳರಾಜು ಸೇರಿ ಐವರು ಬಂಧನವಾಗಿದ್ದು, ಇಬ್ಬರು ವಿಚಾರಣೆ ಎದುರಿಸುತ್ತಿದ್ದಾರೆ. ಆದರೆ, ಈ ಗಂಭೀರ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ಇಲಾಖೆ, ಪಿಯು ಮಂಡಳಿ ಹಾಗೂ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳ ಹೆಸರುಗಳು ಕೇಳಿಬರುತ್ತಿದೆ. ಅಲ್ಲದೆ, ಹಿರಿಯ ಅಧಿಕಾರಿಗಳ ವಿಚಾರಣೆಗೆ ಹೋದಾಗ ಸಿಐಡಿಗೆ ಒತ್ತಡ ಬಂದಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಸಿಐಡಿ ಸರಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಲು ನಿರ್ಧಾರ ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈಗಾಗಲೇ ಸಿಐಡಿ ವಶದಲ್ಲಿರುವ ಆರೋಪಿಗಳು ಕೆಲವು ಸೂಕ್ಷ್ಮ ಮಾಹಿತಿ ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿ ಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಹಿರಿಯ ಅಧಿಕಾರಿಗಳು ಮತ್ತು ನಿವೃತ್ತ ಅಧಿಕಾರಿಗಳು ಸೋರಿಕೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನಲಾಗಿದೆ.

ಅಲ್ಲದೆ, ಇವರನ್ನು ವಿಚಾರಣೆಗೆ ಒಳಪಡಿಸುವ ಸಂದರ್ಭದಲ್ಲಿ ಪ್ರಭಾವಿ ಸಚಿವರ ಒತ್ತಡಗಳು ಸಿಐಡಿ ಅಧಿಕಾರಿಗಳಿಗೆ ಬಂದಿವೆ ಎಂದು ಹೇಳಲಾಗುತ್ತಿದೆ.

ಪ್ರಕರಣದಲ್ಲಿ ಬಂಧಿತವಾಗಿರುವ ಪ್ರಮುಖರು ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣದಲ್ಲಿ ಮಧ್ಯವರ್ತಿಗಳಾಗಿದ್ದಾರೆ. ಆದರೆ, ಪ್ರಮುಖವಾಗಿ ಎಲ್ಲಿ ಸೋರಿಕೆ ಆಯಿತು ಹಾಗೂ ಇದರಲ್ಲಿರುವ ಪ್ರಮುಖ ವ್ಯಕ್ತಿಗಳು ಯಾರೆಂದು ಇದುವರೆಗೂ ಎಲ್ಲೂ ಬಹಿರಂಗಗೊಂಡಿಲ್ಲ. ಇದೆನ್ನೆಲ್ಲಾ ಗಮನಿಸಿದಾಗ ಕೆಲ ಪ್ರಭಾವಿ ಸಚಿವರು ಸಿಐಡಿ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ಸ್ಫೋಟಕದ ಮಾಹಿತಿ..!

ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹೊಸ ಸ್ಫೋಟಕ ವಿಷಯಗಳು ಬಹಿರಂಗ ಗೊಳ್ಳುತ್ತಿದ್ದು, ಇದೀಗ ಕೇವಲ ಪ್ರಶ್ನೆಪತ್ರಿಕೆ ಸೋರಿಕೆ ಮಾತ್ರವಲ್ಲ ಮೌಲ್ಯಮಾಪನದಲ್ಲೂ ಡೀಲ್ ಮಾಡುತ್ತಿದ್ದ ಆತಂಕಕಾರಿ ವಿಷಯ ಹೊರ ಬಂದಿದೆ. ಹಿರಿಯ ಅಧಿಕಾರಿಗಳು, ರಾಜಕಾರಣಿಗಳ ಮಕ್ಕಳಿಗೆ ಹೆಚ್ಚಿನ ಅಂಕ ಪಡೆಯಲು ಪ್ರಶ್ನೆಪತ್ರಿಕೆ ಸೋರಿಕೆ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಕಾಮೆಡ್ ಕೆ ಪರೀಕ್ಷೆ ಬರೆಯುವ ಅಭ್ಯರ್ಥಿಗೆ 25 ಲಕ್ಷ ರೂ. ನಗದು ನೀಡುತ್ತಿದ್ದರು ಎಂಬ ಮಾಹಿತಿ ವಿಚಾರಣೆಯಲ್ಲಿ ತಿಳಿದುಬಂದಿದೆ ಎನ್ನಲಾಗುತ್ತಿದೆ. ಇಬ್ಬರು ಬಿಲ್ಡರ್‌ಗಳಿಗೆ 10 ಲಕ್ಷ ರೂಪಾಯಿಗೆ ಪ್ರಶ್ನೆಪತ್ರಿಕೆ ಮಾರಿದ್ದಾಗಿ ಆರೋಪಿ ಓಬಳರಾಜು ಹೇಳಿದ್ದಾನೆ ಎಂದು ಶಂಕಿಸಲಾಗಿದೆ.

ಆದರೆ, ಪ್ರಶ್ನೆಪತ್ರಿಕೆ ಖರೀದಿ ಮಾಡಿದ್ದ ಇಬ್ಬರು ಬಿಲ್ಡರ್‌ಗಳು ನಾಪತ್ತೆಯಾಗಿದ್ದು, ಹಳೇ ಮಾಹಿತಿಗೆ ಸಾಕ್ಷಿ ಕಲೆ ಹಾಕೋದು ಹೇಗೆ ಎಂಬ ಪ್ರಶ್ನೆ ಇದೀಗ ಸಿಐಡಿ ಅಧಿಕಾರಿಗಳ ಮುಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X