ಡಾ.ವೀರೇಂದ್ರ ಹೆಗ್ಗಡೆಗೆ ‘ಎಂಸಿಎಸ್ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ, ಎ.9: ಮೂಡುಬಿದಿರೆ ಕೋ ಆಪ ರೇಟಿವ್ ಸರ್ವಿಸ್ ಬ್ಯಾಂಕ್( ಎಂಸಿಎಸ್ ಬ್ಯಾಂಕ್) ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ‘ಎಂಸಿಎಸ್ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ, ರಾಜಕೀಯ ಮತ್ತು ವಾಣಿಜ್ಯ ರಂಗದಲ್ಲಿ ರಾಷ್ಟ್ರದ ಗಮನಸೆಳೆದ ತುಳುನಾಡು, ಇತ್ತೀಚಿನ ವರ್ಷಗಳಲ್ಲಿ ಸಹಕಾರಿ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದೆ. ಜಿಲ್ಲೆಯ ಸಹ ಕಾರಿ ಬ್ಯಾಂಕ್‌ಗಳು ರಾಜ್ಯಕ್ಕೆ ಮಾದರಿಯಾಗಿವೆ. ಮಾಜಿ ಸಚಿವ ಅಮರನಾಥ ಶೆಟ್ಟಿ ನೇತೃತ್ವದಲ್ಲಿ ಎಂಸಿಎಸ್ ಬ್ಯಾಂಕ್ ಉತ್ತಮ ಬ್ಯಾಂಕ್ ಆಗಿ ಹೆಸರು ಗಳಿಸಿದೆ ಎಂದರು.
ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರು ಕೀರ್ತಿ ಸ್ವಾಮೀಜಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ ರೈತರು ಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಸರಕಾರದ ಜೊತೆಗೆ ಸಹಕಾರಿ ಬ್ಯಾಂಕ್‌ಗಳು ಸ್ಪಂದಿಸಬೇಕಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಯುವಜನ ಸಬಲೀಕರಣ ಮತ್ತು ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ ಜೈನ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಶೇಖರ ಗೌಡ ಮಾಲಿ ಪಾಟೀಲ್, ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ ಸಲೀಂ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪುರಸಭೆ ಅಧ್ಯಕ್ಷೆ ರೂಪಾ ಎಸ್. ಶೆಟ್ಟಿ, ಜಿಲ್ಲಾ ಸಹಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಆಚಾರ್ಯ ಹಾಗೂ ಬ್ಯಾಂಕ್‌ನ ನಿರ್ದೇಶಕರು ಉಪಸ್ಥಿತರಿದ್ದರು.
ಬ್ಯಾಂಕ್‌ನ ಅಧ್ಯಕ್ಷ ಅಮರನಾಥ ಶೆಟ್ಟಿ, ಕಾರ್ಯನಿರ್ವಹಣಾ ಅಧಿಕಾರಿ ಚಂದ್ರಶೇಖರ್‌ರನ್ನು ಬ್ಯಾಂಕ್‌ನ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವತಿಯಿಂದ ಗೌರವಿಸಲಾಯಿತು. ಸದಸ್ಯರಿಗೆ ಬೋನಸ್ ಷೇರು ವಿತರಣೆ, ರೈತರಿಗೆ ಕಿಟ್, ವಿಕಲಚೇತನ ಮಕ್ಕಳಿಗೆ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ದತ್ತಿನಿಧಿ ಬಿಡುಗಡೆ ಮಾಡ ಲಾಯಿತು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ವರದಿ ವಾಚಿಸಿದರು. ಬ್ಯಾಂಕ್‌ನ ಸಿಇಒ ಚಂದ್ರಶೇಖರ ಎಂ. ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಬಾಹುಬಲಿ ಪ್ರಸಾದ್ ವಂದಿಸಿದರು.







