ಸರಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ ಬೇಡ

ಉಳ್ಳಾಲ, ಎ:10 ಸರಕಾರಿ ಶಾಲೆಯಲ್ಲಿ ಕಲಿಯುವುದು ದಡ್ಡತನವಲ್ಲ, ಅದು ದೊಡ್ಡತನ ಎನ್ನುವುದು ಇಂದಿನ ಪೋಷಕರು ಅರಿತುಕೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಪಿಲಾರು ಜಿಪಂ ಹಿ.ಪ್ರಾ. ಶಾಲೆ ಹಾಗೂ ಲಯನ್ಸ್ ಮತ್ತು ಲಯನೆಸ್ ಕ್ಲಬ್ ಛೋಟಾ ಮಂಗಳೂರು ಇವರ ಸಹಭಾಗಿತ್ವದಲ್ಲಿ ನೂತನ ಕಟ್ಟಡ ಶಂಕುಸ್ಥಾಪನೆ ಹಾಗೂ ಲಯನ್ಸ್ ಆರೋಗ್ಯ ಕೇಂದ್ರವನ್ನು ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳ, ಆಂಗ್ಲ ಮಾಧ್ಯಮ ಶಿಕ್ಷಣಗಳ ವ್ಯಾಮೋಹದಿಂದ ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ದೇಶವನ್ನು ಈ ಹಿಂದೆ ಮುನ್ನಡೆಸಿದವರು, ಈಗ ಮುನ್ನಡೆಸುವವರು ಎಲ್ಲರೂ ಸರಕಾರಿ ಶಿಕ್ಷಣ ಸಂಸ್ಥೆಗಳಿಂದ ಕಲಿತು ಬಂದವರು ಎನ್ನುವುದನ್ನು ಹೆತ್ತವರು ಅರಿತುಕೊಳ್ಳಬೇಕಾದ ಅಗತ್ಯ ಇದೆ ಎಂದು ನಳಿನ್ ತಿಳಿಸಿದರು.
ಸಚಿವ ಯು.ಟಿ. ಖಾದರ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಲಯನ್ಸ್ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮೇಶ್ವರ ಗ್ರಾಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್ ವಹಿಸಿದ್ದರು. ನವೀಕೃತ ಕಟ್ಟಡವನ್ನು ಲಯನ್ಸ್ ಜಿಲ್ಲೆ 317ಡಿ ಜಿಲ್ಲಾ ರಾಜ್ಯಪಾಲೆ ಕವಿತಾ ಶಾಸ್ತ್ರಿ ಉದ್ಘಾಟಿಸಿದರು. ತಾಪಂ ಸದಸ್ಯ ರಾಮಚಂದ್ರ ಕುಂಪಲ ಆರೋಗ್ಯ ಶಿಬಿರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಸೋಮೇಶ್ವರ ಗ್ರಾಪಂ ಸದಸ್ಯರಾದ ದೀಪಕ್ ಪಿಲಾರ್, ಉದಯ ಗಟ್ಟಿ, ಸದಸ್ಯೆ ಫರ್ವೀನ್ ಸಾಜಿದ್, ಪಿಲಾರು ಶಾಲೆಯ ಸ್ಥಳದಾನಿ ಶಾಂತಾರಾಮ ಸರಳಾಯ, ಪಿಲಾರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಇಮ್ತಿಯಾಝ್ ಪಿ.ಸಿ., ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ, ಹರೀಶ್ ರಂಗೋಲಿ, ವೈದ್ಯಾಧಿಕಾರಿ ಯಶವಂತಿ, ಪಿಲಾರು ಸಮೂಹ ಸಂಪನ್ಮೂಲ ಕೇಂದ್ರ ಸಿಆರ್‌ಪಿ ಕವಿತಾ, ಪಿಲಾರು ಶಾಲಾ ವಜ್ರ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ ಗಟ್ಟಿ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ಮುಖ್ಯಶಿಕ್ಷಕ ರೋಹಿತ್ ಉಚ್ಚಿಲ್ ಪ್ರಾಸ್ತಾವಿಸಿದರು. ವಿದ್ಯಾಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ನಮಿತಾ ಶ್ಯಾಮ್ ವಂದಿಸಿದರು.





