ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ

ಮಂಗಳೂರು, ಎ.10: ಶ್ರೀದೇವಿ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವವು ನಗರದ ಪುರಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಎ.ಸದಾನಂದ ಶೆಟ್ಟಿಯ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರಗಿತು.
ಮುಖ್ಯ ಅತಿಥಿಯಾಗಿ ಭಾಗವವಹಿಸಿ ಮಾತನಾಡಿದ ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿಯ ಡೀನ್ ಡಾ. ಬಿ. ಸತೀಶ್ ಕುಮಾರ್ ಭಂಡಾರಿ, ವಿದ್ಯಾರ್ಥಿಗಳು ನಮ್ಮ ದೇಶದ ಆಸ್ತಿಯಾಗಿರುತ್ತಾರೆ. ಗುರುಗಳಾದ ನಾವು ಅವರಿಗೆ ಸರಿಯಾದ ಮಾರ್ಗವನ್ನು ತೋರಿದರೆ ಅದನ್ನೇ ಅನುಸರಿಸಿ ಮುಂದುವರಿಸುತ್ತಾರೆ. ಬದ್ಧತೆ ಮತ್ತು ಸಂರಕ್ಷಣೆ ಗುರಿಯನ್ನು ಸಾಧಿಸುವ ಮಾರ್ಗವಾಗಿದೆ ಎಂದು ಹೇಳಿದರು.
ಉಪಾಧ್ಯಕ್ಷ ನಿಧೀಶ್ ಎಸ್. ಶೆಟ್ಟಿ, ಕಾರ್ಯದರ್ಶಿ ಮೈನಾ ಎಸ್. ಶೆಟ್ಟಿ, ಟ್ರಸ್ಟಿ ಶೀಮತಿ ಪ್ರಿಯಾಂಕಾ ಎನ್. ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಆರೋಲ್ ಡಿಸೋಜ, ಅಜಿನ್ ಚಾಕೊ ಕಾರ್ಯಕ್ರಮ ನಿರೂಪಿಸಿದರು. ಶರೋನ್ ಡಿಕುನ್ಹ ವಂದಿಸಿದರು.
ಕಾಲೇಜಿನಲ್ಲಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.





