ಕೊಲ್ಲಂ ಅಗ್ನಿ ದುರಂತ...
ಕೇರಳದ ಕೊಲ್ಲಂ ಸಮೀಪದ ಪರವೂರ್ ಪುಟ್ಟಿಂಗಲ್ ದೇವಿ ದೇವಸ್ಥಾನದ ಉತ್ಸವದ ಅಂಗವಾಗಿ ರವಿವಾರ ಏರ್ಪಡಿಸಲಾಗಿದ್ದ ಸಿಡಿಮದ್ದು ಪ್ರದರ್ಶನದ ವೇಳೆ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ 110 ಮಂದಿ ಮೃತಪಟ್ಟಿದ್ದು, 350ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಿಡಿಮದ್ದು ಸ್ಫೋಟದ ತೀವ್ರತೆಗೆ ಸುತ್ತಲಿನ ಕಟ್ಟಡಗಳು ಕುಸಿದುಬಿದ್ದಿರುವುದೇ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವೆನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಘಟನಾಸ್ಥಳಕ್ಕೆ ಭೇಟಿನೀಡಿ, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡ ಕೊಲ್ಲಂಗೆ ಭೇಟಿ ನೀಡಿದ್ದಾರೆ.
Next Story





