Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದು ಬೃಹತ್ ಬಾಂಬ್ ಸ್ಫೋಟದಂತಿತ್ತು:...

ಅದು ಬೃಹತ್ ಬಾಂಬ್ ಸ್ಫೋಟದಂತಿತ್ತು: ಪ್ರತ್ಯಕ್ಷದರ್ಶಿ

ವಾರ್ತಾಭಾರತಿವಾರ್ತಾಭಾರತಿ10 April 2016 11:42 PM IST
share
ಅದು ಬೃಹತ್ ಬಾಂಬ್ ಸ್ಫೋಟದಂತಿತ್ತು: ಪ್ರತ್ಯಕ್ಷದರ್ಶಿ

ಕೊಲ್ಲಂ,ಎ.10: ಅದು ಮನೆಯೊಳಗೆ ಯಾರೋ ಭಾರೀ ಬಾಂಬ್‌ನ್ನು ಎಸೆದಂತಿತ್ತು. ಸ್ಫೋಟದ ಪರಿಣಾಮವಾಗಿ ನಮ್ಮ ಮನೆಯ ಛಾವಣಿಯೇ ಕುಸಿದು ಬಿದ್ದಿದೆ. ನಾವು ಮರಳಿದಾಗ ನಮ್ಮ ಕಣ್ಣಿಗೆ ಬಿದ್ದಿದ್ದು ಅತ್ಯಂತ ಭೀಕರ ದೃಶ್ಯ. ನಮ್ಮ ಹೃದಯಗಳು ಒಡೆದು ಹೋಗಿದ್ದವು...ಮಾತುಗಳೇ ಹೊರಡುತ್ತಿರಲಿಲ್ಲ. ಸುತ್ತಮುತ್ತಲೂ ಎಲ್ಲೆಂದರಲ್ಲಿ ಮಾನವ ದೇಹಗಳ ಅಂಗಾಂಗಗಳು ಹರಡಿ ಬಿದ್ದಿದ್ದವು. ಕುಸಿದು ಬಿದ್ದ ಗೋಡೆಗೆ ಕಾಲೊಂದು ನೇತಾಡುತ್ತಿತ್ತು. ಅಲ್ಲಿ ಏನೂ ಇರಲಿಲ್ಲ,ಎಲ್ಲವೂ ನಾಶಗೊಂಡಿತ್ತು : ಇವು ಇಲ್ಲಿಯ ಪುಟ್ಟಿಂಗಾಲ್ ದೇವಸ್ಥಾನದಲ್ಲಿ ರವಿವಾರ ನಸುಕಿನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದ ಪ್ರತ್ಯಕ್ಷದರ್ಶಿಯಾಗಿರುವ ಅನಿತಾ ಪ್ರಕಾಶ್ ಅವರ ನೋವಿನ ಮಾತುಗಳು.

ಬ್ರಿಟನ್ ಪ್ರಜೆಯಾಗಿರುವ ಅನಿತಾ ರಜೆಯಲ್ಲಿ ತನ್ನೂರಿಗೆ ಬಂದಿದ್ದಾರೆ. 102ಕ್ಕೂ ಅಧಿಕ ಜನರನ್ನು ಬಲಿ ತೆಗೆದುಕೊಂಂಡಿರುವ ದುರಂತ ಸಂಭವಿಸಿದ ದೇವಸ್ಥಾನಕ್ಕೆ ಹೊಂದಿಕೊಂಡೇ ಅವರ ಮನೆಯಿದೆ.

ಇದೊಂದು ಮಾನವ ನಿರ್ಮಿತ ದುರಂತ ಎಂದು ಬಣ್ಣಿಸಿದ ಅನಿತಾ, ಸ್ಥಳೀಯ ನಿವಾಸಿಗಳು ಹಲವಾರು ವರ್ಷಗಳಿಂದಲೂ ಸಿಡಿಮದ್ದು ಪ್ರದರ್ಶನವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಆದರೆ ಅವರಿಗೆ ಬೆದರಿಕೆಗಳನ್ನು ಒಡ್ಡಲಾಗುತ್ತಿತ್ತು. ಇದನ್ನು ನಿಲ್ಲಿಸಲು ಸರಕಾರವು ಏನನ್ನೂ ಮಾಡಲೇ ಇಲ್ಲ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತ ಹೇಳಿದರು.

ಅಂದ ಹಾಗೆ ಅನಿತಾರ ತಾಯಿ ಈ ಉತ್ಸವದ ವಿರುದ್ಧ ಕೊಲ್ಲಂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು,ಅವರು ಸ್ಥಳಕ್ಕೆ ಭೇಟಿಯನ್ನೂ ನೀಡಿದ್ದರು. ಸುಡುಮದ್ದು ಪ್ರದರ್ಶನವನ್ನು ನಿಷೇಧಿಸಲಾಗಿದೆ ಎಂಬ ಮಾಹಿತಿಯೂ ಆ ಕುಟುಂಬಕ್ಕೆ ಲಭಿಸಿತ್ತು. ಶನಿವಾರ ಮಧ್ಯಾಹ್ನ ದೇವಸ್ಥಾನದಿಂದ 10-12 ಕುಪಿತ ಯುವಕರ ಗುಂಪೊಂದು ಅನಿತಾರ ಮನೆಗೆ ಬಂದು ವಾಚಾಮಗೋಚರವಾಗಿ ನಿಂದಿಸಿತ್ತು. ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ತಕರಾರನ್ನು ಹಿಂದೆಗೆದುಕೊಳ್ಳುವಂತೆ ಆ ಗುಂಪು ಬೆದರಿಕೆಯನ್ನೊಡ್ಡಿತ್ತು. ಆದರೆ ಅನಿತಾರ ಕುಟುಂಬ ಅದಕ್ಕೆ ಮಣಿದಿರಲಿಲ್ಲ.

ಸುರಕ್ಷತಾ ಕ್ರಮವಾಗಿ ಅನಿತಾ ಮತ್ತು ಕುಟುಂಬದವರು ಶನಿವಾರ ಸಂಜೆ ತಮ್ಮ ಮನೆಗಳಿಂದ ದೂರವಿರುವಂತೆ ಸೂಚಿಸಲಾಗಿತ್ತು. ದೇವಳದ ಅಧಿಕಾರಿಗಳೊಂದಿಗೆ ವಾದಕ್ಕಿಳಿಯದೆ ಅವರೆಲ್ಲ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದರು ಮತ್ತು ಇದು ಅವರ ಪ್ರಾಣಗಳನ್ನು ಉಳಿಸಿತ್ತು.

ಭಾರೀ ಸ್ಫೋಟ ಸಂಭವಿಸುವ ಎರಡು ಗಂಟೆ ಮೊದಲು ವ್ಯಕ್ತಿಯೋರ್ವ ಗಾಯಗೊಂಡಿದ್ದಾಗಲೇ ಸುಡುಮದ್ದು ಪ್ರದರ್ಶನವನ್ನು ನಿಲ್ಲಿಸಿದ್ದರೆ ಈ ಭೀಕರ ಅನಾಹುತ ಸುಲಭದಲ್ಲಿ ತಪ್ಪುತ್ತಿತ್ತು ಎಂದು ಅನಿತಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X