Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಕ್ಷಿಣ ಆಫ್ರಿಕ ತಂಡದ ಮೂಲಕ ಕ್ರಿಕೆಟ್‌ಗೆ...

ದಕ್ಷಿಣ ಆಫ್ರಿಕ ತಂಡದ ಮೂಲಕ ಕ್ರಿಕೆಟ್‌ಗೆ ಮರಳುವತ್ತ ಪೀಟರ್ಸನ್ ಚಿತ್ತ

ವಾರ್ತಾಭಾರತಿವಾರ್ತಾಭಾರತಿ10 April 2016 11:49 PM IST
share
ದಕ್ಷಿಣ ಆಫ್ರಿಕ ತಂಡದ ಮೂಲಕ ಕ್ರಿಕೆಟ್‌ಗೆ ಮರಳುವತ್ತ ಪೀಟರ್ಸನ್ ಚಿತ್ತ

  ಮುಂಬೈ, ಎ.10: ಇಂಗ್ಲೆಂಡ್‌ನ ಮಾಜಿ ಆಟಗಾರ ಕೇವಿನ್‌ಪೀಟರ್ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಆಡುವ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಆದರೆ, ಅವರು ತಾಯ್ನಾಡು ದಕ್ಷಿಣ ಆಫ್ರಿಕ ತಂಡದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವತ್ತ ದೃಷ್ಟಿ ನೆಟ್ಟಿದ್ದಾರೆ.

2013-14ರಲ್ಲಿ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ವೈಟ್‌ವಾಶ್ ಅನುಭವಿಸಿದ್ದಾಗ ಪೀಟರ್ಸನ್‌ರನ್ನು ಇಂಗ್ಲೆಂಡ್ ತಂಡದಿಂದ ಹೊರಗಿಡಲಾಗಿತ್ತು. ಪೀಟರ್ಸನ್ ಇಂಗ್ಲೆಂಡ್ ತಂಡದ ಪರ ಮತ್ತೊಮ್ಮೆ ಆಡಲು ಬಯಸಿದ್ದರೂ ಆಯ್ಕೆ ಸಮಿತಿ ಅವರನ್ನು ತಂಡದಿಂದ ದೂರ ಇಡುತ್ತಾ ಬಂದಿದೆ.

‘‘ಹೌದು, ದಕ್ಷಿಣ ಆಫ್ರಿಕ ತಂಡದಲ್ಲಿ ಆಡುವ ಯೋಚನೆ ನನ್ನಲ್ಲಿದೆ. ಇದು ನಡೆದರೆ ನಡೆಯಲೂಬಹುದು. ನಡೆಯದೇ ಇರಲೂ ಬಹುದು. ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಆಡಬೇಕೆಂಬುದು ನನ್ನ ದೀರ್ಘಕಾಲದ ಕನಸಾಗಿದೆ.ಅಂತಾರಾಷ್ಟ್ರೀಯ ಕ್ರಿಕೆಟ್ ಆಡುವುದರಿಂದ ವಂಚಿತನಾಗಿದ್ದೇನೆ’’ ಎಂದು ಪೀಟರ್ಸನ್ ಹೇಳಿದ್ದಾರೆ.

35ರ ಹರೆಯದ ಪೀಟರ್ಸನ್‌ಗೆ 37 ವರ್ಷವಾದಾಗ ದಕ್ಷಿಣ ಆಫ್ರಿಕ ತಂಡದಲ್ಲಿ ಆಡುವ ಅರ್ಹತೆ ಪಡೆಯುತ್ತಾರೆ. ಅದಕ್ಕಾಗಿ ಅವರು 2018ರ ತನಕ ಕಾಯಬೇಕು.

‘‘ದಕ್ಷಿಣ ಆಫ್ರಿಕ ತಂಡದಲ್ಲಿ ಆಡುವ ಅರ್ಹತೆ ಗಿಟ್ಟಿಸಲು ನನಗೆ ಇನ್ನು ಎರಡು ವರ್ಷ ಬೇಕಾಗಿದೆ. ನಾವು ಅದಕ್ಕಾಗಿ ಕಾದು ನೋಡಬೇಕಾಗಿದೆ. ಖಂಡಿತವಾಗಿಯೂ ಇದು ನನ್ನ ಮುಂದಿರುವ ಒಂದು ಆಯ್ಕೆಯಾಗಿದೆ. ಇದೀಗ ನಾನು ಕ್ರಿಕೆಟ್ ಆಡುವುದನ್ನು ಆನಂದಿಸುತ್ತಿದ್ದೇನೆ. ಈಗಲೂ ಕಠಿಣ ಶ್ರಮಪಡುತ್ತಿರುವೆ. ಬ್ಯಾಟಿಂಗ್ ಮಾಡುವುದೆಂದರೆ ತುಂಬಾ ಇಷ್ಟ. 10 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿ, 100ಕ್ಕೂ ಅಧಿಕ ಟೆಸ್ಟ್ ಪಂದ್ಯಗಳನ್ನು ಆಡುವ ಭಾಗ್ಯ ನನಗೆ ದೊರೆತಿದೆ ಎಂದು ಪೀಟರ್ಸನ್ ನುಡಿದರು.

ಪೀಟರ್ಸನ್ ಪ್ರಸ್ತುತ ಐಪಿಎಲ್‌ನಲ್ಲಿ ಹೊಸ ತಂಡ ರೈಸಿಂಗ್‌ಪುಣೆ ಸೂಪರ್ ಜೈಂಟ್ಸ್‌ನ್ನು ಪ್ರತಿನಿಧಿಸುತ್ತಿದ್ದಾರೆ. ಮುಂಬೈ ವಿರುದ್ಧ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ 14 ಎಸೆತಗಳಲ್ಲಿ ಔಟಾಗದೆ 21 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X