Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಭರವಸೆಯ ಗ್ರಾಮೀಣ ಯುವ...

ಪುತ್ತೂರು : ಭರವಸೆಯ ಗ್ರಾಮೀಣ ಯುವ ವೇಯ್ಟಾ ಲಿಫ್ಟರ್ ಸ್ವಸ್ತಿಕ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ11 April 2016 6:43 PM IST
share
ಪುತ್ತೂರು : ಭರವಸೆಯ ಗ್ರಾಮೀಣ ಯುವ ವೇಯ್ಟಾ ಲಿಫ್ಟರ್ ಸ್ವಸ್ತಿಕ್ ಶೆಟ್ಟಿ

    ಪುತ್ತೂರು ತಾಲೂಕು ಕೌಕ್ರಾಡಿ ಗ್ರಾಮದ ದೋಂತಿಲ ಪೂವಪ್ಪ ಶೆಟ್ಟಿ ಮತ್ತು ಶಶಿಕಲಾ ಶೆಟ್ಟಿ ದಂಪತಿಗಳ ಸುಪುತ್ರ ರಾಷ್ಟ್ರೀಯ ಕ್ರೀಡಾಪಟು ಸ್ವಸ್ತಿಕ್ ಶೆಟ್ಟಿ ಅಪ್ಪಟ ಗ್ರಾಮೀಣ ಪ್ರತಿಭೆ. ಇದೀಗ ರಾಷ್ಟ್ರೀಯ ವೇಯ್ಟಾ ಲಿಫ್ಟರ್ ಆಗಿ ಮೂಡಿ ಬರುತ್ತಿದ್ದಾರೆ. ಗ್ರಾಮೀಣ ಪ್ರದೇಶ ಜೊತೆಗೆ ಬಡತನ ಇದ್ದರೂ ಅವಕಾಶ ಸಿಕ್ಕರೆ ಹೇಗೆ ಗ್ರಾಮೀಣ ಪ್ರತಿಭೆಗಳು ರಾಷ್ಟ್ರಮಟ್ಟದ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
         ಸ್ವಸ್ತಿಕ್ ಶೆಟ್ಟಿ ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮತ್ತು ಪ್ರೌಢಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಪಡುಬೆಟ್ಟುವಿನಲ್ಲಿ ಮುಗಿಸಿರುತ್ತಾರೆ. ನೆಲ್ಯಾಡಿಯ ಹೋಟೆಲ್ ಸುಬ್ರಹ್ಮಣ್ಯ ವಿಲಾಸದ ಮಾಲೀಕರಾದ  ದಿ. ಸೂರ್ಯನಾರಾಯಣ ಆಚಾರ್ಯರು ಈತನ ಮನೆಯ ಆರ್ಥಿಕ ಪರಿಸ್ಥಿತಿ, ಕ್ರೀಡಾ ಆಸಕ್ತಿಯನ್ನು ಮನಗಂಡು ಈತನನ್ನು ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಕ್ರೀಡಾಕ್ಷೇತ್ರದ ಉಚಿತ ಶಿಕ್ಷಣಕ್ಕೆ ಸೇರಿಸಿದರು.
    ಸಿಕ್ಕಿದ ಅವಕಾಶವನ್ನು ಸದುಪಯೋಗ ಮಾಡಿಕೊಂಡ ಸ್ವಸ್ತಿಕ್ ಶೆಟ್ಟಿ ಕಠಿಣ ತರಬೇತಿಯೊಂದಿಗೆ ಉತ್ತಮ ಕ್ರೀಡಾ ಸಾಧನೆಯನ್ನು ದಾಖಲಿಸಿಕೊಂಡು ಬಂದರು. ಹಲವು ಜಿಲ್ಲಾ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡರು. ಉತ್ತಮ ಅಂಕದೊಂದಿಗೆ ಪಿಯುಸಿ ತೇರ್ಗಡೆ ಹೊಂದಿ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ ಪದವಿಗೆ ಸೇರಿಕೊಂಡರು.
    ನವೆಂಬರ್ 2015ರಲ್ಲಿ ಮೂಡಬಿದ್ರೆಯಲ್ಲಿ ಜರುಗಿದ ರಾಜ್ಯ ಜೂನಿಯರ್ ವಿಭಾಗದಲ್ಲಿ ನೂತನ ದಾಖಲೆಯೊಂದಿಗೆ ಚಿನ್ನದ ಪದಕ ಜೊತೆಗೆ ಬೆಸ್ಟ್ ಲಿಫ್ಟರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು.
    2015ರ ಸೀನಿಯರ್ ವಿಭಾಗದಲ್ಲೂ ಚಿನ್ನದ ಪದಕವನ್ನು ಪಡೆದು ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದರು. ಮಂಗಳೂರು ವಿ.ವಿ. ಅಂತರ್ ಕಾಲೇಜು ಚಾಂಪಿಯನ್ ಶಿಪ್‌ನಲ್ಲಿ ಸತತ ಚಿನ್ನದ ಪದಕ ಪಡೆದ ಸ್ವಸ್ತಿಕ್ ಶೆಟ್ಟಿ ಜನವರಿಯಲ್ಲಿ ಆಂದ್ರಪ್ರದೇಶದ ಗುಂಟೂರಿನಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ನಿರ್ವಹಣೆ ತೋರಿರುತ್ತಾರೆ.
    ಮಾರ್ಚ್ ತಿಂಗಳಲ್ಲಿ ಬಿಹಾರದ ಪಾಟ್ನಾದಲ್ಲಿ ಜರುಗಿದ ರಾಷ್ಟ್ರೀಯ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ 5ನೇ ಸ್ಥಾನವನ್ನು ಪಡೆದರು. ಇದೀಗ ಆಳ್ವಾಸ್ ಕಾಲೇಜಿನಲ್ಲಿ ಉಚಿತ ಶಿಕ್ಷಣದಡಿಯಲ್ಲಿ ಅಂತಿಮ ಬಿಕಾಂ ಓದುತ್ತಿದ್ದು ವೇಯ್ಟಿಲಿಫ್ಟಿಂಗ್‌ನಲ್ಲಿ ಇನ್ನೂ ಹೆಚ್ಚಿನ ಸಾಧನೆಗಾಗಿ ಕಠಿಣ ತರಬೇತಿಯಲ್ಲಿದ್ದಾರೆ. ರಾಷ್ಟ್ರೀಯ ವೇಯ್ಟಾ ಲಿಫ್ಟಿಂಗ್ ತರಬೇತುದಾರರಾದ ಪ್ರಮೋದ್ ಕುಮಾರ್ ಶೆಟ್ಟಿ ನೆಲ್ಯಾಡಿ ಇವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X