ದ.ಕ., ಉಡುಪಿ ಜಿಲ್ಲೆ: ತಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟ
ಮಂಗಳೂರು/ಉಡುಪಿ, ಎ. 11: ದ.ಕ. ಜಿಲ್ಲೆಯ ಐದು ಹಾಗೂ ಉಡುಪಿ ಜಿಲ್ಲೆಯ ಮೂರು ತಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾಗಿದೆ.
ಬಂಟ್ವಾಳ ತಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಅ), ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ (ಮ) ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಮ) ವರ್ಗ, ಮಂಗಳೂರು ತಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಮ), ಪುತ್ತೂರು ತಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ (ಮ) ಹಾಗೂ ಸುಳ್ಯ ತಾಪಂ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಮ)ವರ್ಗಕ್ಕೆ ಮೀಸಲಾಗಿದೆ.
ಉಡುಪಿ: ಕಾರ್ಕಳ ತಾಲೂಕಿನ ಅಧ್ಯಕ್ಷ ಸ್ಥಾನ ಸಾಮಾನ್ಯ(ಮ) ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಕುಂದಾಪುರ ತಾಲೂಕು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ(ಮ) ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಬ), ಉಡುಪಿ ತಾಲೂಕು ಅಧ್ಯಕ್ಷ ಸ್ಥಾನ ಸಾಮಾನ್ಯ(ಮ) ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.