Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚರಿತ್ರೆ ಬೆಳಕನ್ನು ಹರಡುವ ಸಕಾರಾತ್ಮಕ...

ಚರಿತ್ರೆ ಬೆಳಕನ್ನು ಹರಡುವ ಸಕಾರಾತ್ಮಕ ಕ್ರಿಯೆಯಾಗಬೇಕು: ಸಚಿವ ಅಭಯ

ವಾರ್ತಾಭಾರತಿವಾರ್ತಾಭಾರತಿ12 April 2016 4:29 PM IST
share
ಚರಿತ್ರೆ ಬೆಳಕನ್ನು ಹರಡುವ ಸಕಾರಾತ್ಮಕ ಕ್ರಿಯೆಯಾಗಬೇಕು: ಸಚಿವ ಅಭಯ

ಮಂಗಳೂರು, ಎ. 12: ಚರಿತ್ರೆಯನ್ನು ಜನ ತಲೆತಲಾಂತರಗಳಿಂದ ಸತ್ಯವೆಂದು ನಂಬಿಕೊಂಡು ಬಂದಿದ್ದಾರೆ. ಹಾಗಾಗಿ ಚರಿತ್ರೆ ಯಾವತ್ತೂ ಅನುಮಾನದ ಕತ್ತಲನ್ನು ಹರಡದೆ ಬೆಳಕನ್ನು ಹರಡುವ ಸಕಾರಾತ್ಮಕ ಕ್ರಿಯೆಯಾಗಿರಬೇಕು ಎಂದು ರಾಜ್ಯದ ಕ್ರೀಡಾ ಮತ್ತು ಯುವ ಸಬಲೀಕರಣ ಹಾಗೂ ಮೀನುಗಾರಿಕಾ ಸಚಿವರಾದ ಅಭಯಚಂದ್ರಜೈನ್ ಅಭಿಪ್ರಾಯಿಸಿದ್ದಾರೆ.

ಅವರು ಇಂದು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ‘ವಯಸ್ಸಿನ ಮೂಲಕ ಕರ್ನಾಟಕ- ಹೊಸ ಚಾರಿತ್ರಿಕ ದೃಷ್ಟಿಕೋನ’ ಎಂಬ ವಿಷಯದಲ್ಲಿ ಆಯೋಜಿಸಲಾದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಹಿಂದಿನ ತಲೆಮಾರಿನ ಸಾಮಾಜಿಕ, ಧಾರ್ಮಿಕ, ಚಾರಿತ್ರಿಕ, ಆರ್ಥಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳ ಬಗ್ಗೆ ಅರಿಯಲು ಇತಿಹಾಸ ಅತೀ ಅಗತ್ಯ. ಆದರೆ ಈ ಇತಿಹಾಸ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳಿಗೆ ಕಟ್ಟಿಹಾಕುವಂತಿರಬಾರದು. ಸಹಬಾಳ್ವೆಗೆ ಪೂರಕವಾದ ಇತಿಹಾಸ ನಮ್ಮದಾಗಿರಬೇಕು ಎಂದು ಅವರು ಹೇಳಿದರು.
ಕರ್ನಾಟಕದ ಇತಿಹಾಸದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಅಭಯ, ಉತ್ತರ ಕರ್ನಾಟಕದವರು ಬೇರೆ ರಾಜ್ಯ ಕೇಳುತ್ತಿರುವ ಹಿನ್ನೆಲೆಯಲ್ಲಿ ಸರಕಾರದಿಂದ ಹೆಚ್ಚಿನ ಅನುದಾನದ ಅಲ್ಲಿಗೆ ಹರಿದು ಅಲ್ಲಿನ ಜಿಲ್ಲೆಗಳು ಅಭಿವೃದ್ದಿಯತ್ತ ಸಾಗುತ್ತಿವೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯವರು ಬುದ್ಧಿವಂತರು ಎಂಬ ಲೇಪನದೊಂದಿಗೆ ನಮ್ಮಲ್ಲಿ ಅಭಿವೃದ್ದಿ ಆಗುತ್ತಿಲ್ಲ ಎಂದವರು ವಿಷಾದಿಸಿದರು.

ಇಂದಿನ ದಿನಗಳಲ್ಲಿ ಇತಿಹಾಸವನ್ನು ತಿರುಚುವ ಸಾಕಷ್ಟು ವಿದ್ಯಮಾನಗಳು ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಇತಿಹಾಸದ ಸತ್ಯವನ್ನು ಮನವರಿಕೆ ಮಾಡುವ ಕಾರ್ಯ ಶಾಲಾ ಕಾಲೇಜುಗಳಿಂದ ಆಗಬೇಕು ಎಂದು ಸಲಹೆ ನೀಡಿದರು.
ಉದ್ಘಾಟನಾ ಸಮಾರಂಭದಲ್ಲಿ ಕೆನಡಾ ಒಟ್ಟಾವಾದ ಸ್ಟಾಟಿಸ್ಟಿಕ್ಸ್ ಕೆನರಾಡ ಸಂಸ್ಥೆಯ ಮಾಜಿ ಹಿರಿಯ ಅಂಕಿಶಾಸ್ತ್ರ ಸಲಹೆಗಾರರಾದ ಡಾ. ಬಿ. ನಂಜಮ್ಮ ಚಿನ್ನಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಂಗಳೂರು ವಿವಿಯ ಇತಿಹಾಸ ವಿಭಾಗದ ಅಧ್ಯಕ್ಷ ಪ್ರೊ. ಉದಯ ಬಿ., ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿ ಡಾ. ಮೀನಾಕ್ಷಿ ಎಂ.ಎಂ. ಉಪಸ್ಥಿತರಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಉದಯ ಕುಮಾರ್ ಸ್ವಾಗತಿಸಿದರು. ವಿಶ್ವವಿದ್ಯಾಲಯ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ರಾಜೇಶ್ವರಿ ಸಿ. ವಂದಿಸಿದರು. 

ಇತಿಹಾಸ ತಜ್ಞರು ಒತ್ತಡದಲ್ಲಿದ್ದಾರೆ!
ಇತಿಹಾಸದ ಬರವಣಿಗೆಗಳು ಇಂದು ಸಮಾಜದಲ್ಲಿ ತಲ್ಲಣಕ್ಕೆ ಕಾರಣವಾಗುತ್ತಿರುವುದರಿಂದ ಇತಿಹಾಸ ತಜ್ಞರು ಅಪಾಯವನ್ನು ಎದುರಿಸುವಂತಾಗಿದೆ. ನಿರ್ಭೀತವಾಗಿ ವಿತಿಹಾಸ ಬರೆಯಲು ಇತಿಹಾಸಕಾರರಿಂದ ಸಾಧ್ಯವಾಗುತ್ತಿಲ್ಲ. ಇತಿಹಾಸ ತಜ್ಞ ಒತ್ತಡದಲ್ಲಿದ್ದಾನೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ವಿವಿಯ ಇತಿಹಾಸ ವಿಭಾಗದ ಪ್ರೊ. ಲೋಕೇಶ್ ಕೆ.ಎಂ. ಆತಂಕ ವ್ಯಕ್ತಪಡಿಸಿದರು.
ಇತಿಹಾಸದ ತಜ್ಞರ ಈ ತಲ್ಲಣಗಳು, ಆತಂಕಗಳ ಕುರಿತಂತೆ ಎರಡು ದಿನಗಳ ಕಾರ್ಯಾಗಾರದಲ್ಲಿ ಚರ್ಚೆಯಾಗುವ ಜತೆಗೆ 23 ಇತಿಹಾಸ ಪ್ರಬಂಧಗಳು ಮಂಡನೆಯಾಗಲಿವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X