ಸುಳ್ಯ: ಮಾನಸಿಕ ಪರಿವರ್ತನೆಯಿಂದ ಭಗವಂತನ ಸಾಕ್ಷಾತ್ಕಾರ - ಧರ್ಮಪಾಲನಾಥ ಸ್ವಾಮೀಜಿ
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಸುಳ್ಯ: ಮಾನಸಿಕ ಪರಿವರ್ತನೆ ಮನುಷ್ಯನಿಗೆ ಅತಿ ಅಗತ್ಯ. ಇದರಿಂದ ಭಗವಂತನ ಸಾಕ್ಷಾತ್ಕಾರ ಸಾಧ್ಯ ಎಂದು ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸತೀಶ್ ಕುಮಾರ್ ಧಾರ್ಮಿಕ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಷ್ಟ್ರೀಯ ಸ್ವಯಂಸೇವಕ ಸಂಘ ವಿಭಾಗ ಕಾರ್ಯವಾಹ ನ.ಸೀತಾರಾಮ, ಕರ್ನಾಟಕ ಅಥ್ಲೆಟಿಕ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ, ಕಾವು ಪಂಚಲಿಂಗೇಶ್ವರ ದೇವಸ್ಥಾನ ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಜಿ.ಪಂ. ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಕೇರ್ಪಡ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಪುತ್ತೂರು ರಾಮಜಾಲು ಗರಡಿ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲು, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ನೆಟ್ಟಾರು, ಜ್ಞಾನಗಂಗಾ ವಿದ್ಯಾಸಂಸ್ಥೆಯ ಸಂಚಾಲಕ ಉಮೇಶ್ ಎಂ.ಪಿ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ, ತುಂಬೆ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎನ್.ಮನ್ಮಥ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎಂ.ಬಿ, ಸದಸ್ಯ ರಾಮಣ್ಣ ರೈ ವೈಪಾಲ ಉಪಸ್ಥಿತರಿದ್ದರು.
ಶ್ರೀರಾಮ ಪಾಟಾಜೆ ಸ್ವಾಗತಿಸಿ, ಸುಧಾಕರ ರೈ ಕುಂಜಾಡಿ ವಂದಿಸಿದರು. ಪ್ರಸಾದ್ ಸೇವಿತ ಕಾರ್ಯಕ್ರಮ ನಿರೂಪಿಸಿದರು.





