ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಅಶ್ರಫ್ ಅಡ್ಯಾರ್ ಆಯ್ಕೆ

ಮಂಗಳೂರು,ಎ.12: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಅಶ್ರಫ್ ಅಡ್ಯಾರ್ ಅವರನ್ನು ನೇಮಿಸಲಾಗಿದೆ.
ದ.ಕ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸೂಚನೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ ಈ ನೇಮಕ ಮಾಡಿದ್ದಾರೆ.
ಅಶ್ರಫ್ ಅಡ್ಯಾರ್ ಅವರು ಅಲ್ ಅನ್ಸಾರ್ ಯಂಗ್‌ಮೇನ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಲ್ ಝರಿಯ ಕ್ರಿಕೆಟ್ ತಂಡದ ಕಾರ್ಯಧ್ಯಕ್ಷರಾಗಿ ಹಾಗೂ ಇನ್ನಿತರ ಸಂಘಸಂಸ್ಥೆಯಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Next Story





