Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾತ್ರಿವೇಳೆ ಸಿಡಿಮದ್ದು ಪ್ರದರ್ಶನಕ್ಕೆ...

ರಾತ್ರಿವೇಳೆ ಸಿಡಿಮದ್ದು ಪ್ರದರ್ಶನಕ್ಕೆ ಹೈಕೋರ್ಟ್ ನಿಷೇಧ

ಕೊಲ್ಲಂ ದುರಂತ ಸಿಬಿಐಗೆ ಹಸ್ತಾಂತರಿಸಲು ಸಲಹೆ

ವಾರ್ತಾಭಾರತಿವಾರ್ತಾಭಾರತಿ12 April 2016 10:49 PM IST
share
ರಾತ್ರಿವೇಳೆ ಸಿಡಿಮದ್ದು ಪ್ರದರ್ಶನಕ್ಕೆ ಹೈಕೋರ್ಟ್ ನಿಷೇಧ

ತಿರುವನಂತಪುರ, ಎ.12: ರಾಜ್ಯದ ದೇವಾಲಯ ಗಳಲ್ಲಿ ರಾತ್ರಿ ಕಾಲದಲ್ಲಿ ದೊಡ್ಡ ಪ್ರಮಾಣದಲ್ಲಿ ಶಬ್ದ ಮಾಡುವ ಸಿಡಿಮದ್ದು ಪ್ರದರ್ಶನವನ್ನು ಕೇರಳ ಹೈಕೋರ್ಟ್ ನಿಷೇಧಿಸಿದೆ. ಈ ಸಂಬಂಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ಮೇಲೆ ಮಂಗಳವಾರ ಅದು ಈ ತೀರ್ಪು ನೀಡಿದೆ.

ಕೊಲ್ಲಂ ಜಿಲ್ಲೆಯ ಪುಟ್ಟಿಂಗಲ್ ದೇವಾಲಯದ ಸಂಕೀರ್ಣದಲ್ಲಿ ರವಿವಾರ 111 ಮಂದಿಯ ಸಾವು ಹಾಗೂ 300ಕ್ಕೂ ಹೆಚ್ಚು ಮಂದಿ ಗಾಯಗೊಳ್ಳಲು ಕಾರಣವಾದ ಮಾರಕ ಬೆಂಕಿ ಅನಾಹುತದ ಬಳಿಕ ಹೈಕೋರ್ಟ್‌ನ ಈ ಆದೇಶ ಹೊರ ಬಿದ್ದಿದೆ. ದುರಂತದ ಕುರಿತು ಉಮ್ಮನ್ ಚಾಂಡಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೈಕೋರ್ಟ್, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಲಹೆ ನೀಡಿದೆ.

 ದೇವಾಲಯ ಸಂಕೀರ್ಣದೊಳಗೆ ಸಿಡಿಮದ್ದು ಸಿಡಿಸಲು ತಾನು ಅನುಮತಿ ನೀಡಿರಲಿಲ್ಲವೆಂಬ ರಾಜ್ಯ ಸರಕಾರದ ಪ್ರತಿಪಾದನೆಗೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅನುಮತಿಯ ಹೊರತಾಗಿ ಸಿಡಿಮದ್ದು ಪ್ರದರ್ಶನ ಹೇಗೆ ನಡೆಯಿತೆಂದು ಪ್ರಶ್ನಿಸಿತು.ಮನವಿಯನ್ನು ಆಲಿಸುತ್ತಿದ್ದ ನ್ಯಾಯಾಲಯ, ದುರಂತಕ್ಕೆ ದೇವಳದ ಅಧಿಕಾರಿಗಳಲ್ಲದೆ ಕಂದಾಯ ಇಲಾಖೆಯೂ ಹೊಣೆಯೆಂದು ಆರೋಪಿಸಿತು.

ಸಿಡಿಮದ್ದು ದುರಂತದಲ್ಲಿ ಗಾಯಗೊಂಡವರಿಗೆ ಧರ್ಮಾರ್ಥ ಚಿಕಿತ್ಸೆ ಒದಗಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿರುವ ಹೈಕೋರ್ಟ್, ಈ ವಿಷಯದಲ್ಲಿ ಪ್ರತ್ಯೇಕ ಅಫಿದಾವಿತ್‌ಗಳನ್ನು ಸಲ್ಲಿಸುವಂತೆ ಪೊಲೀಸ್ ಹಾಗೂ ಜಿಲ್ಲಾಡಳಿತಗಳಿಗೆ ಆದೇಶ ನೀಡಿದೆ.  ದುರ್ಘಟನೆ ಸಂಭವಿಸಿದ ಬಳಿಕ ಜಿಲ್ಲಾಡಳಿತವು, ತಾನು ಸಿಡಿಮದ್ದು ಪ್ರದರ್ಶನ ನಡೆಸಲು ದೇವಾಲಯದ ಆಡಳಿತಕ್ಕೆ ಅನುಮತಿ ನಿರಾಕರಿಸಿದ್ದೆನೆಂದು ಸ್ಪಷ್ಟಪಡಿಸಿತ್ತು.

13 ಮಂದಿಯ ಬಂಧನ

ಕೊಲ್ಲಂ, ಎ.12: ಇಲ್ಲಿನ ಪುಟ್ಟಿಂಗಲ್ ದೇವಾಲಯದಲ್ಲಿ 111 ಮಂದಿಯ ಸಾವಿಗೆ ಕಾರಣವಾದ ಸಿಡಿಮದ್ದು ಪ್ರದರ್ಶನದ ಬೆಂಕಿ ಅನಾಹುತದ ಸಂಬಂಧ ದೇವಾಲಯದ ಆಡಳಿತ ಮಂಡಳಿಯ ಸದಸ್ಯರೂ ಸೇರಿದಂತೆ 13 ಮಂದಿಯನ್ನು ಇಂದು ಬಂಧಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ಆಡಳಿತ ಮಂಡಳಿಯ 7 ಸದಸ್ಯರು ಹಾಗೂ ಸಿಡಿಮದ್ದು ಪ್ರದರ್ಶನದ ಇಬ್ಬರು ಗುತ್ತಿಗೆದಾರರ 6 ಮಂದಿ ಕೆಲಸಗಾರರು ಸೇರಿದ್ದಾರೆ. ದೀರ್ಘಕಾಲದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆಯೆಂದು ಮೂಲಗಳು ಹೇಳಿವೆ.

ನಾಟಕೀಯ ನಡೆಯೊಂದರಲ್ಲಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಜಯಲಾಲ್, ಕಾರ್ಯದರ್ಶಿ ಕೆ. ಕೃಷ್ಣನ್‌ಕುಟ್ಟಿ ಹಾಗೂ ಸದಸ್ಯರಾದ ಶಿವಪ್ರಸಾದ್, ಸುರೇಂದ್ರನ್ ಪಿಳ್ಳೈ, ರವೀಂದ್ರನ್ ಪಿಳ್ಳೈ ಎಂಬವರು ಇಂದು ನಸುಕಿನ ವೇಳೆ ಕ್ರೈಂ ಬ್ರಾಂಚ್ ಪೊಲೀಸರ ಮುಂದೆ ಶರಣಾಗಿದ್ದಾರೆ. ಸುರೇಂದ್ರನಾಥನ್ ಪಿಳ್ಳೈ ಹಾಗೂ ಮುರುಗೇಶನ್ ಎಂಬಿಬ್ಬರು ಸದಸ್ಯರನ್ನು ಇಂದು ಮುಂಜಾನೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.ದುರಂತದ ಬಳಿಕ, ಇಬ್ಬರು ಗುತ್ತಿಗೆದಾರರ 6 ಮಂದಿ ಕೆಲಸಗಾರರನ್ನು ಸಹ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.ದುರ್ಘಟನೆಯ ಕುರಿತು ಕ್ರೈಂ ಬ್ರಾಂಚ್‌ನ ತನಿಖೆ ಪ್ರಗತಿಯಲ್ಲಿದೆ.ದೇವಾಲಯದ ಆಡಳಿತ ಮಂಡಳಿಯ ವಿರುದ್ಧ ಕೊಲೆ ಯತ್ನ, ಅನುದ್ದೇಶಿತ ಮಾನವ ಹತ್ಯೆ ಮತ್ತಿತರ ಆರೋಪಗಳನ್ವಯ ಪ್ರಕರಣ ದಾಖಲಿಸಿರುವ ಅಪರಾಧ ವಿಭಾಗವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X