ಎ18ರಿಂದ ಎಸೆಸೆಲ್ಸಿ ವೌಲ್ಯಮಾಪನ ಬಹಿಷ್ಕಾರ: ಶಿಕ್ಷಕರ ಎಚ್ಚರಿಕೆ
ಪ್ರೌಢಶಾಲಾ ಶಿಕ್ಷಕರ ಬೇಡಿಕೆ ಈಡೇರದಿದ್ದರೆ
ಬೆಂಗಳೂರು, ಎ.12: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎ.18ರಿಂದ ಎಸೆಸೆಲ್ಸಿ ವೌಲ್ಯಮಾಪನ ಬಹಿಷ್ಕರಿಸುವುದಾಗಿ ಪ್ರೌಢಶಾಲಾ ಶಿಕ್ಷಕರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸಚಿವ ಕಿಮ್ಮನೆ ರತ್ನಾಕರ ಇಂದು ಶಿಕ್ಷಕರರೊಂದಿಗೆ ಮಾತುಕತೆ ನಡೆಸಿದರು.
ನಗರದ ಸರ್ವ ಶಿಕ್ಷಣ ಅಭಿಯಾನ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ವೇತನ ಹೆಚ್ಚಳ ಮತ್ತು ಕುಮಾರ್ ನಾಯಕ್ ವರದಿಯನ್ನು ಕೂಡಲೇ ಜಾರಿಗೊಳಿಸಲಾಗುವುದು. ಈ ವಿಚಾರವಾಗಿ ನಾಳೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಪ್ರೌಢಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಸರಕಾರಕ್ಕೆ ಹೆಚ್ಚುವರಿಯಾಗಿ 26 ಕೋಟಿ ರೂ ಹೊರೆಯಾಗಲಿದೆ. ಎ.18ರೊಳಗೆ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸದಿದ್ದರೆ ವೌಲ್ಯಮಾಪನವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Next Story





