ಆರ್‌ಟಿಇ ಲೋಪದೋಷ ಸರಿಪಡಿಸಲು ಕಾಲಾವಕಾಶ
ಬೆಂಗಳೂರು, ಎ.12: ಪ್ರಸಕ್ತ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಕೋಟಾದಡಿ ಆನ್‌ಲೈನ್ ಮೂಲಕ ಸ್ವೀಕರಿಸಲಾಗಿರುವ ಅರ್ಜಿಗಳಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಲು ಎ.15ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಲೋಪದೋಷ ಸರಿಪಡಿಸಲು ಪೋಷಕರಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗಿತ್ತು. ಆದರೂ, ಬಹುತೇಕ ಪೋಷಕರು ಲೋಪದೋಷ ಸರಿಪಡಿಸಿಲ್ಲ. ಹೀಗಾಗಿ ತಂತ್ರಾಂಶದಲ್ಲಿನ ಲೋಪದೋಷ ಸರಿಪಡಿಸಲು ಕಾಲಾವಕಾಶ ನೀಡಲಾಗಿದೆ.
ವೆಬ್‌ಸೈಟ್ http://202.138.101/schregrte/RTE2015/RTEUpdatelogin.aspx ಗೆ ಭೇಟಿ ನೀಡಿ ತಿದ್ದುಪಡಿ ಮಾಡಬಹುದು. ಪೋಷಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಲಾಗಿದೆ.
ಲಾಟರಿ ಪ್ರಕ್ರಿಯೆ ಮುಂದೂಡಿಕೆ: ಆರ್‌ಟಿಇ ಕೋಟಾದಡಿ ಲಾಟರಿ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆಯನ್ನು ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಪೊನ್ನುರಾಜ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





