Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಲಿಕುಳದ ಗುತ್ತಿನ ಮನೆಯಲ್ಲಿ ಜಾನಪದ ಲೋಕ...

ಪಿಲಿಕುಳದ ಗುತ್ತಿನ ಮನೆಯಲ್ಲಿ ಜಾನಪದ ಲೋಕ ಎ.15ರಿಂದ ಸಾರ್ವಜನಿಕ ವೀಕ್ಷಣೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ12 April 2016 11:48 PM IST
share

ಮಂಗಳೂರು, ಎ.12: ಪಿಲಿಕುಳದ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಗುತ್ತಿನಮನೆ ಇದೀಗ ಜಾನಪದ ಲೋಕವಾಗಿ ಪರಿವರ್ತನೆಗೊಳ್ಳುತ್ತಿದೆ. ಈಗಿರುವ ಗುತ್ತಿನ ಮನೆ ತುಳುನಾಡಿನ ವೈಭವಕ್ಕೆ ಪೂರಕವಾಗಿ ಹೊಸ ರೂಪ, ಹೊಸ ಆಕರ್ಷಣೆಯೊಂದಿಗೆ ಪ್ರವಾಸಿಗರನ್ನು ಸೆಳೆಯಲು ಸಿದ್ಧಗೊಳ್ಳುತ್ತಿವೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 498 ಲಕ್ಷ ರೂ. ವೆಚ್ಚದಲ್ಲಿ ಪಿಲಿಕುಳದಲ್ಲಿ ಜಾನಪದ ಲೋಕ ಯೋಜನೆಗೆ ಮುಂದಾಗಿದ್ದು, ‘ತುಳು ಸಂಸ್ಕೃತಿ ಗ್ರಾಮ’ ಯೋಜನೆಯಡಿ ಪ್ರಥಮ ಹಂತವಾಗಿ ಗುತ್ತಿನ ಮನೆ ಒಳಾಂಗಣ ವಸ್ತು ಸಂಗ್ರಹಾಲಯವನ್ನು ರೂಪಿಸಲಾಗಿದೆ. ಎ.15ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ. ಗುತ್ತಿನ ಮನೆ ವಸ್ತು ಸಂಗ್ರಹಾಲಯದ ಪ್ರವೇಶಕ್ಕೆ ಹಿರಿಯರಿಗೆ 30 ರೂ., ಕಿರಿಯರಿಗೆ 20 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಮಂಜೂರಾದ 498 ಲಕ್ಷ ರೂ. ಪೈಕಿ 2015-16ನೆ ಸಾಲಿಗೆ 149 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ ಒಳಾಂಗಣ ವಸ್ತು ಸಂಗ್ರಹಾಲಯವನ್ನು ತುಳುನಾಡಿನ ಪರಂಪರೆ ಮತ್ತು ಸಂಸ್ಕೃತಿಯ ಹಿನ್ನೆಲೆಯಲ್ಲಿ ನಿರ್ಮಿಸಲಾಗಿದೆ. ಈಗಾಗಲೇ ತುಳುನಾಡಿನ ವೈಭವವನ್ನು ಸಾರುವ ಯಕ್ಷಗಾನದ ಚೌಕಿಯ ವೇಷ ಭೂಷಣ, ಬಣ್ಣ ಹಚ್ಚುವ ಸನ್ನಿವೇಶದ ಸ್ತಬ್ಧಚಿತ್ರಗಳನ್ನು ರೂಪಿಸಲಾಗಿದೆ. ತುಳುನಾಡಿನ ವೀರರೆಂದೇ ಕರೆಯಲ್ಪಡುವ ಕೋಟಿ ಚೆನ್ನಯರು, ಅಜ್ಜಿ ಹೇಳುವ ಕಥೆಯನ್ನು ಮೊಮ್ಮಕ್ಕಳು ಕೇಳುತ್ತಿರುವ ಸ್ತಬ್ಧಚಿತ್ರಗಳು, ಮೇನೆ, ಗೊರಬು, ಗುತ್ತಿನ ಮನೆಯ ಯಜಮಾನನ ಹಾಸಿಗೆ (ಮಂಚ), ಗೊರಬು, ಅಡುಗೆ ಮನೆಯ ಚಿತ್ರಣ, ದೇವರ ಕೋಣೆ ಮೊದಲಾದವುಗಳು ಗುತ್ತಿನ ಮನೆಯ ಆಕರ್ಷಣೆಯನ್ನು ಹೆಚ್ಚಿಸಿವೆ. ಗುತ್ತಿನ ಮನೆಯನ್ನು ಸಂಪೂರ್ಣ ತುಳುನಾಡಿನ ವಸ್ತುಸಂಗ್ರಹಾಲಯವಾಗಿ ರೂಪಿಸುವ ಪ್ರಕ್ರಿಯೆ ಸದ್ಯ ಹಂತಹಂತವಾಗಿ ನಡೆಯುತ್ತಿದೆ. ಜಾನಪದ ಲೋಕ ಯೋಜನೆಯ ಮುಂದಿನ ಹಂತವಾಗಿ ಹೊರಾಂಗಣ ವಸ್ತು ಸಂಗ್ರಹಾಲಯ, ಕರಾವಳಿ ಜನಪದ ವಸ್ತು ಸಂಗ್ರಹಾಲಯ, ಮೂರು ಕುಟೀರಗಳ ನಿರ್ಮಾಣ, ರಸ್ತೆ, ನೀರು, ಶೌಚಾಲಯ ಹಾಗೂ ವಾಹನ ನಿಲುಗಡೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಹೇಳಿದರು.
ತುಳು ಸಂಸ್ಕೃತಿ ಗ್ರಾಮ ಒಂದು ಭಿನ್ನವಾದ ಪ್ರಯತ್ನ. ಇಲ್ಲಿ ಸಂಸ್ಕೃತಿ ರಕ್ಷಣೆಯ ಜತೆಗೆ ಕಲಿಕೆಗೂ ಅವಕಾಶವಿದೆ. ಕೆಲವೊಂದು ಸಂಗತಿಗಳನ್ನು ಸ್ವಯಂ ಆಗಿ ಅನುಭವಿಸುವುದಕ್ಕೆ ಪೂರಕವಾಗಿ ಗುತ್ತಿನ ಮನೆಯೊಳಗೆ ವಸ್ತುಗಳನ್ನು ಜೋಡಿಸಲಾಗಿದೆ ಎಂದು ತುಳು ಸಂಸ್ಕೃತಿ ಗ್ರಾಮ ಯೋಜನೆಯ ಉಪ ಸಮಿತಿ ಅಧ್ಯಕ್ಷ ಪ್ರೊ.ಬಿ.ಎ.ವಿವೇಕ ರೈ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಪಿಲಿಕುಳ ನಿಸರ್ಗಧಾಮದ ಕಾರ್ಯ ನಿರ್ವಾಹಕ ನಿರ್ದೇಶಕ ಎಸ್.ಎ.ಪ್ರಭಾಕರ ಶರ್ಮ, ಎನ್. ಜಿ.ಮೋಹನ್, ಕಲಾವಿದ ಶಶಿಧರ ಅಡಪ, ಅಂಚೆ ಇಲಾಖೆಯ ಹಿರಿಯ ಅಂಚೆ ಅಧೀೀಕ್ಷಕ ಜಗದೀಶ ಪೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X