ಉಡುಪಿ, ಎ.13: ಜಿಲ್ಲೆಯ ಕುಂದಾಪುರ, ಉಡುಪಿ ಹಾಗೂ ಕಾರ್ಕಳ ತಾಲೂಕುಗಳ ಒಟ್ಟು 21 ಗ್ರಾಪಂಗಳ 28 ಸ್ಥಾನಗಳಿಗೆ ಎ.17ರಂದು ಮತದಾನ ನಡೆಯಲಿದೆ. ಈ ವೇಳೆ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಗುರುತು ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.