ಮಂಗಳೂರು: ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಮಂಗಳೂರು, ಎ. 14: ಸಂವಿಧಾನ ಶಿಲ್ಪಿ,ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುರುವಾರ ನಗರದ ಪುರಭವನದಲ್ಲಿ ಡಾ.ಬಿ.ಆರಂ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ಶಾಸಕ ಜೆ.ಆರ್.ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಜ್ಯೋತಿಯ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಜಾಥಾ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ವಿಶ್ವನಾಥ ಅವರು ಅಂಬೇಡ್ಕರ್ ಅವರ ಬಗ್ಗೆ ಮುಖ್ಯ ಭಾಷಣ ಮಾಡಿದರು.
ಸಮಾರಂಭದಲ್ಲಿ ದ.ಕ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಮಂಗಳೂರು ನಗರ ಪೊಲೀಸ್ ಆಯುಕ್ತ ಚಂದ್ರಶೇಖರ ಎಸ್., ದ.ಕ. ಜಿಪಂ ಸಿಇಒ ಪಿ.ಐ.ಶ್ರೀವಿದ್ಯಾ, ದ.ಕ ಜಿಲ್ಲಾ ಎಸ್ಪಿ ಶರಣಪ್ಪ ಎಸ್.ಡಿ., ಮನಪಾ ಆಯುಕ್ತ ಡಾ.ಎಚ್.ಎಸ್.ಎನ್.ಗೋಪಾಲಕೃಷ್ಣ, ದ.ಕ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಜಿ.ಸಂತೋಷ್ ಕುಮಾರ್, ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್, ಮೂಡ ಆಯುಕ್ತ ಮುಹಮ್ಮದ್ ನಝೀರ್, ಡಿಎಫ್‌ಒ ಡಾ.ಹನುಮಂತಪ್ಪ, ಮಂಗಳೂರು ಸಹಾಯಕ ಕಮೀಷನರ್ ಡಾ.ಅಶೋಕ್‌ಮೊದಲಾದವರು ಉಪಸ್ಥಿತರಿದ್ದರು.





