Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಸಾಮಾಜಿಕ ಸಮಾನತೆಗಾಗಿ...

ಪುತ್ತೂರು : ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕರಲ್ಲಿ ಬಿ.ಆರ್. ಅಂಬೇಡ್ಕರ್ ಹೆಸರು ಚಿರಸ್ಥಾಯಿ-ಸೀತಾರಾಮ

ಡಾ| ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 April 2016 7:37 PM IST
share
ಪುತ್ತೂರು : ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕರಲ್ಲಿ ಬಿ.ಆರ್. ಅಂಬೇಡ್ಕರ್ ಹೆಸರು ಚಿರಸ್ಥಾಯಿ-ಸೀತಾರಾಮ

ಪುತ್ತೂರು: ಭಾರತದ ಸಂವಿಧಾನದ ರಚನೆಯಲ್ಲಿ ಗಣನೀಯ ಕೊಡುಗೆ ನೀಡಿದ ಅಂಬೇಡ್ಕರ್‌ರವರು ಸಂವಿಧಾನ ಶಿಲ್ಪಿ. ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕರಲ್ಲಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಕೆ.ಸೀತಾರಾಮ ಕೇವಳ ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ತಾ.ಪಂ ಸಭಾಂಗಣದಲ್ಲಿನಡೆದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್‌ರವರ 125ನೇ ಜನ್ಮ ದಿನಾಚರಣಾ ಕಾರ‍್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಅಂಬೇಡ್ಕರ್ ತಮ್ಮ ಬದುಕಿನಲ್ಲಿ ಎಲ್ಲಾ ಬಗೆಯ ನೋವು ಮತ್ತು ಶೋಷಣೆಯನ್ನು ಅನುಭವಿಸಿದ್ದರು. ಸಮಾಜದಲ್ಲಿನ ಕಟ್ಟಕಡೆಯ ಜನರ ನೋವು ಮತ್ತು ಶೋಷಣೆಯನ್ನು ಹೋಗಲಾಡಿಸಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಸಾರಿದರಲ್ಲದೆ ಅದನ್ನು ಅವರು ಮಾಡಿ ತೋರಿಸಿದರು.

ಅಧ್ಯಕ್ಷತೆ ವಹಿಸಿದ ರಾಜ್ಯ ಸಂಸದೀಯ ಕಾರ‍್ಯದರ್ಶಿ ಶಾಸಕಿ ಶಕುಂತಳಾ ಶೆಟ್ಟಿಯವರು ಮಾತನಾಡಿ ಭಾರತ ರತ್ನದ ಅಪೂರ್ವ ವ್ಯಕ್ತಿ ಡಾ| ಬಿ.ಆರ್ ಅಂಬೇಡ್ಕರ್‌ರವರು ಅನೇಕ ನೋವುಗಳ ನಡುವೆ ಭಾರತಕ್ಕೆ ಸಂವಿಧಾನ ಕಲ್ಪಿಸಿಕೊಟ್ಟ ಮಹಾನ್ ವ್ಯಕ್ತಿಯಾಗಿದ್ದಾರೆ. ಪುತ್ತೂರಿಗೆ ಅಂಬೇಡ್ಕರ್ ಭವನಕ್ಕಾಗಿ ರೂ..5 ಕೋಟಿ ಮಂಜೂರಾಗಿದೆ. ಕಂದಾಯ ಇಲಾಖೆಯಿಂದ ಸ್ಥಳ ತೋರಿಸಿದರೆ ಭವ್ಯ ಕಟ್ಟಡ ನಿರ್ಮಾಣವಾಗಲಿದೆ ಎಂದು ಹೇಳಿದರು. ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೆಟ್ಟ ಪಿ. ಈಶ್ವರ ಭಟ್‌ರವರು ಮಾತನಾಡಿ ಭಾರತಕ್ಕೆ ಪ್ರಥಮ ಸ್ಥಾನವನ್ನು ಸಂವಿಧಾನದಿಂದ ತಂದು ಕೊಟ್ಟವರು ಡಾ| ಬಿ.ಆರ್.ಅಂಬೇಡ್ಕರ್‌ರವರು. ಭಗವದ್ಗೀತೆಯಂತೆ ಪವಿತ್ರವಾಗಿರುವ ಭಾರತದ ಸಂವಿಧಾನಕ್ಕೆ ಜಗತ್ತಿನಲ್ಲೂ ವಿಶೇಷ ಗೌರವವಿದೆ. ಗೌರವಕ್ಕೆ ಮೂಲ ಕಾರಣಕರ್ತರಾದವರನ್ನು ನೆನಪಿಸುವುದು ನಮ್ಮ ಕರ್ತವ್ಯದಂತೆ ಅವರ ಜೀವನವನ್ನು ನಾವೆಲ್ಲ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಮಾರಂಭದ ಕೊನೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಡಬ ಪರಿಶಿಷ್ಟ ಜಾತಿ ಪಂಗಡದ ವಿದ್ಯಾರ್ಥಿನಿ ನಿಲಯದ ಅಡುಗೆ ಕೆಲಸ ನಿರ್ವಹಿಸುವ ಮೋನಪ್ಪ ಗೌಡರಿಗೆ ಸನ್ಮಾನ ಕಾರ‍್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಮನೇಜರ್ ಶರತ್, ಅನ್ನಪೂರ್ಣೇಶ್ವರಿ, ಸಿ.ಡಿ.ಪಿ.ಓ ಶಾಂತಿ ಹೆಗ್ಡೆ, ಕಂದಾಯ ಇಲಾಖೆಯ ನಾಗೇಶ್, ಹರೀಶ್ ಅತಿಥಿಗಳನ್ನು ಗೌರವಿಸಿದರು. ಉಪ ತಹಸೀಲ್ದಾರ್ ಶ್ರೀಧರ್ ಕೆ. ನಾಡಗೀತೆ ಹಾಡಿದರು. ಕೊಂಬೆಟ್ಟು ನಿಲಯ ಮೇಲ್ವಿಚಾರಕ ಕೃಷ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್ ವಂದಿಸಿದರು. ಕಾರ್ಮಿಕ ಇಲಾಖೆಯ ಚಿದಾನಂದ ಕಾಮತ್ ಕಾರ‍್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X