Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರದ ವಿವಿಧೆಡೆ ಕುಡಿಯುವ ನೀರಿಗಾಗಿ...

ನಗರದ ವಿವಿಧೆಡೆ ಕುಡಿಯುವ ನೀರಿಗಾಗಿ ನಾಗರಿಕರ ಪರದಾಟ

ವಾರ್ತಾಭಾರತಿವಾರ್ತಾಭಾರತಿ14 April 2016 10:10 PM IST
share

ಶಿವಮೊಗ್ಗ, ಎ.14: ಪ್ರಸ್ತುತ ಶಿವಮೊಗ್ಗ ನಗರದಲ್ಲಿ ಸುಡು ಬಿಸಿಲು ಬೀಳುತ್ತಿದೆ. ಅಕ್ಷರಶಃ ಸೂರ್ಯ ನಾಗರಿಕರ ನೆತ್ತಿ ಸುಡುತ್ತಿದ್ದಾನೆ. ಜೀವ ಜಲಕ್ಕೆ ಇನ್ನಿಲ್ಲದ ಬೇಡಿಕೆಯಿದೆ. ಅದರಲ್ಲಿಯೂ ನಗರದ ಪ್ರಮುಖ ಸ್ಥಳಗಳಲ್ಲಿ ಕುಡಿಯುವ ನೀರಿಗಾಗಿ ನಾಗರಿಕರು ಪರದಾಡುವ ಸ್ಥಿತಿಯಿದೆ. ಈ ಪರದಾಟ ತಪ್ಪಿಸುವ ಉದ್ದೇಶದಿಂದಲೇ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರು ಘಟಕಗಳಲ್ಲಿ ಕೆಲವು ನೀರಿಲ್ಲದೆ ಬರಿದಾಗಿವೆ.

ನಾಗರಿಕರಿಗೆ ಕೇವಲ 1 ರೂ. ದರದಲ್ಲಿ 1 ಲೀಟರ್ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಮಹತ್ತರ ಉದ್ದೇಶದಿಂದ ನಗರದ ಜನನಿಬಿಡ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಘಟಕಗಳ ನಿರ್ಮಾಣ ಮಾಡಲಾಗಿತ್ತು. ಆದರೆ ಇದೀಗ ಕೆಲ ಘಟಕಗಳು ಸ್ಥಳೀಯಾಡಳಿತದ ನಿರ್ಲಕ್ಷ್ಯ, ಅಸಮರ್ಪಕ ನಿರ್ವಹಣೆಯಿಂದ ಪ್ರಸ್ತುತ ಮೂಲೋದ್ದೇಶ ಈಡೇರಿಸುವಲ್ಲಿ ವಿಫಲವಾಗಿವೆ. ನಾನಾ ಕಾರಣಗಳಿಂದ ಬಾಗಿಲು ಮುಚ್ಚುವ ಹಂತದಲ್ಲಿವೆ. *

ಮಹತ್ತರ ಯೋಜನೆ: ಶಾಸಕ ಕೆ.ಬಿ.ಪ್ರಸನ್ನಕುಮಾರ್‌ರವರು ಮಹತ್ವಾಕಾಂಕ್ಷೆಯ, ಜನೋಪಯೋಗಿ ಯೋಜನೆ ಇದಾಗಿದೆ. ಶಾಸಕರ ನಿಧಿಯಲ್ಲಿ ಈ ಘಟಕಗಳ ಸ್ಥಾಪನೆಗೆ ಅನುದಾನ ಬಿಡುಗಡೆ ಮಾಡಿದ್ದರು. ಇದಕ್ಕೆ ನಾಗರಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಇತರೆಡೆಯೂ ಘಟಕ ಸ್ಥಾಪನೆ ಮಾಡಬೇಕೆಂಬ ಬೇಡಿಕೆ ಬಂದಿತ್ತು. ಆದರೆ, ಸ್ಥಳೀಯಾಡಳಿತದ ಬೇಜವಾಬ್ದಾರಿ ಧೋರಣೆಯಿಂದ ಪ್ರಸ್ತುತ ಈ ಯೋಜನೆ ಹಳ್ಳ ಹಿಡಿಯುವಂತಾಗಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಆರಂಭವಾ

 ಕೆಲ ಘಟಕಗಳಲ್ಲಿ ನೀರು ಲಭ್ಯವಾಗುತ್ತಿಲ್ಲವಾಗಿದೆ. ಬೇಸಿಗೆಯ ಅವಧಿಯಲ್ಲಿಯೇ ನೀರು ಅಲಭ್ಯವಾಗುತ್ತಿರುವುದಕ್ಕೆ ನಾಗರಿಕರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. *ಸಿಗುತ್ತಿಲ್ಲ ನೀರು:

ಖಾಸಗಿ ಹಾಗೂ ಸರಕಾರಿ ಬಸ್ ನಿಲ್ದಾಣದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭವಾದಾಗ ದೂರದೂರುಗಳ ಪ್ರಯಾಣಿಕರು ಸೇರಿದಂತೆ ಸ್ಥಳೀಯ ಸಾವಿರಾರು ನಾಗರಿಕರಿಗೆ ಸಹಕಾರಿಯಾಗಿತ್ತು. ಕೇವಲ 1 ರೂ. ಪಾವತಿಸಿ ಒಂದು ಲೀಟರ್ ಶುದ್ಧ ಕುಡಿಯುವ ನೀರನ್ನು ನಾಗರಿಕರು ಪಡೆದುಕೊಳ್ಳುತ್ತಿದ್ದರು. ಆದರೆ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿರುವ ಘಟಕ ದುರಸ್ತಿಯಾಗಿದ್ದು, ನಾಗರಿಕರಿಗೆ ನೀರು ಲಭ್ಯವಾಗುತ್ತಿಲ್ಲ. ಇದರಿಂದ ನಾಗರಿಕರ

ು ಸ್ಥಳೀಯ ಅಂಗಡಿಗಳಲ್ಲಿ 15 ರಿಂದ 20 ರೂ. ಪಾವತಿಸಿ ಪ್ಲಾಸ್ಟಿಕ್ ಬಾಟಲಿ ನೀರು ಖರೀದಿಸಿ, ದಾಹ ಇಂಗಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಣ ಬಿಸಿಲು ಬೀಳುತ್ತಿರುವುದರಿಂದ ದಾಹ ಹೆಚ್ಚಾಗುತ್ತಿದೆ. ಅಶುದ್ಧ ಕುಡಿಯುವ ನೀರು ಸೇವನೆಯಿಂದ ನಾನಾ ರೀತಿಯ ರೋಗರುಜಿನಗಳು ಬರುತ್ತಿವೆ. ಇಂತಹ ಸಂದರ್ಭದಲ್ಲಿ ಖಾಸಗಿ ಬಸ್ ನಿಲ್ದಾಣದಲ್ಲಿದ್ದ 1 ರೂ. ಗೆ 1ಲೀಟರ್ ನೀರು ಲಭ್ಯವಾಗುವ ಶುದ್ಧ ಕುಡಿಯುವ ನೀರು ಘಟಕದಿಂದ ನಾಗರಿಕರಿಗೆ ಸಾಕಷ್ಟು ಅ

ನುಕೂಲವಾಗಿತ್ತು. ಆದರೆ ಬೇಸಿಗೆಯ ಅವಧಿಯಲ್ಲಿಯೇ ಈ ಘಟಕ ದುರಸ್ತಿಗೀಡಾಗಿದೆ. ಇದರಿಂದ ಸಾವಿರಾರು ಜನರಿಗೆ ತೊಂದರೆಯಾಗಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಘಟಕ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ವಾಹನ ಹಿತರಕ್ಷಣಾ ವೇದಿಕೆಯ ಮುಖಂಡ ಅಲ್ಲಾಭಕ್ಷ್‌ರವರು ಮನವಿ ಮಾಡುತ್ತಾರೆ. ಬಾಗಿಲು:

ಮತ್ತೊಂದೆಡೆ ನಗರದ ನೆಹರೂ ಕ್ರೀಡಾಂಗಣದ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಪೂರ್ಣಗೊಂಡು, ಲೋಕಾರ್ಪಣೆ ಕೂಡ ಆಗಿದೆ ಎನ್ನಲಾಗಿದೆ. ಆದರೆ ಇದೀಗ ಆ ಘಟಕ ಬಾಗಿಲು ಮುಚ್ಚಿದೆ. ಇಲ್ಲೂ ಕೂಡ ನೀರು ಲಭ್ಯವಾಗುತ್ತಿಲ್ಲ. ಪ್ರತಿನಿತ್ಯ ಕ್ರೀಡಾಂಗಣಕ್ಕೆ ಕ್ರೀಡಾಪಟುಗಳು ಸೇರಿದಂತೆ ನೂರಾರು ಜನ ಆಗಮಿಸುತ್ತಾರೆ. ಕ್ರೀಡಾಕೂಟಗಳು ನಡೆದ ವೇಳೆ ಅಪಾರ ಸಂಖ್ಯೆಯ ಕ್ರೀಡಾಪಟುಗಳಿರುತ್ತಾರೆ. ಈ ಘಟಕ ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡಿದ್ದರೆ ಕ್ರೀಡಾಪಟುಗಳಿಗೆ ಕೇವಲ 1 ರೂ. ದರದಲ್ಲಿ ಗುಣಮಟ್ಟದ ನೀರು ಲಭ್ಯವಾಗುತ್ತಿತ್ತು. ಪ್ರಸ್ತುತ ಬೇಸಿಗೆಯ ಸಮಯವಾಗಿರುವುದರಿಂದ ಸಾಕಷ್ಟು ಸಹಕಾರಿಯಾಗುತ್ತಿತ್ತು ಎಂದು ಕ್ರೀಡಾಪಟು ದಯಾನಂದ ಎಂಬವರು ಅಭಿಪ್ರಾಯಪಡುತ್ತಾರೆ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕಾಗಿದೆ. ಘಟಕಗಳ ಸಮರ್ಪಕ ಕಾರ್ಯನಿರ್ವಹಣೆಯತ್ತ ಗಮನಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌ರವರು ಸಂಬಂಧಿಸಿದ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಮಾಡಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ. ಬೇಸಿಗೆಯ ವೇಳೆ ನಿರ್ಲಕ್ಷ್ಯ ಸರಿಯಲ್ಲ

ಬೇಸಿಗೆಯ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರು ಲಭ್ಯವಾಗುವುದೆ ದುಸ್ತರವಾಗಿದೆ. ಕೇವಲ 1 ರೂ. ದರದಲ್ಲಿ ಲೀಟರ್ ಶುದ್ಧ ಕುಡಿಯುವ ನೀರು ಲಭ್ಯವಾಗುತ್ತಿತ್ತು. ಆದರೆ ಕುಡಿಯುವ ನೀರಿನ ತುರ್ತು ಅಗತ್ಯವಿರುವ ಬೇಸಿಗೆಯ ಅವಧಿಯಲ್ಲಿಯೇ ಈ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡುತ್ತಿಲ್ಲದಿರುವುದರಿಂದ ನಾಗರಿಕರಿಗೆ ತೀವ್ರ ತೊಂದರೆಯಾಗಿದೆ. ದುಬಾರಿ ದರ ತೆತ್ತು ಬಾಟಲಿ ನೀರು ಖರೀದಿಸುವಂತಾಗಿದೆ. ಇನ್ನಾದರೂ ಈ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು.ಅಲ್ಲಾಭಕ್ಷ್, ಯುವ ಮುಖಂಡ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X