‘ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರ ವಹಿಸಿ’
ಚಿಕ್ಕಮಗಳೂರು, ಎ. 14: ಬೇಸಿಗೆ ಕಾಲದಲ್ಲಿ ಬಿಸಿಲ ಬೇಗೆ ಹೆಚ್ಚಾ ಗಿರುವ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾ ರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಸಾಲಿನಲ್ಲಿ ವಾಡಿಕೆ ಮಳೆ ನಿಗದಿತ ಪ್ರಮಾಣದಲ್ಲಿ ಆಗದೆ ಜಿಲ್ಲೆಯ ಮೂರು ತಾಲೂಕು ಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಜಿಲ್ಲೆಯ ಯಾವುದೇ ಭಾಗದಲ್ಲಿ ತೊಂದರೆಯಾಗದಂತೆ ಮುಂಜಾಗ್ರತ ಕ್ರಮವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
39 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ಕೆಲವು ಗ್ರಾಮಗಳಲ್ಲಿ ಅಗತ್ಯದ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ. ಶಾಶ್ವತವಾಗಿ ನೀರು ಸರಬರಾಜು ಮಾಡುವ ಸಂಬಂಧ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು. ುಡಿಯುವ ನೀರಿಗೆ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಅವರು, ಬಾಕಿ ಉಳಿದ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗಳನ್ನು ವಿಶೇಷ ಆದ್ಯತೆ ನೀಡಿ ಕೂಡಲೇ ಪೂರ್ಣಗೊಳಿಸಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳು ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆಗಳನ್ನು ನಡೆಸಬೇಕು. ಸಂಬಂಧಪಟ್ಟ ಪಿಡಿಒಗಳು ಹಾಗೂ ಗ್ರಾಪಂ ಸದ
್ಯರು ಭಾಗವಹಿಸುವಂತೆ ನೋಡಿಕೊಳ್ಳಲು ಸೂಚಿಸಿದರು. ಜಿಲ್ಲೆಯ ಜಾನುವಾರುಗಳ ಅಂಕಿ-ಸಂಖ್ಯೆ ಹಾಗೂ ಮೇವು ಲಭ್ಯತೆ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು. ಅಗತ್ಯ ಕಂಡು ಬಂದಲ್ಲಿ ಗೋಶಾಲೆಗಳನ್ನು ತೆರೆಯಬೇಕು. ಉದ್ಯೋಗ ಇಲ್ಲದೆ ಜನರು ಗ್ರಾಮಗಳಿಂದ ಗುಳೆ ಹೋಗದಂತೆ ತಡೆಯಲು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ನೀಡಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಸೃಜಿಸಬೇಕೆಂದು ತಿಳಿಸಿದರು. ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್. ಪಿ.ಷಡಕ್ಷರಿಸ್ವಾಮಿ, ಜಿಪಂ ಸಿಇಒ ಡಾ.ಆರ್.ರಾಗಪ್ರಿಯ, ಎಸ್ಪಿ ಕೆ.ಸಂತೋಷ್‌ಬಾಬು, ಸಿಡಿಎ ಅಧ್ಯಕ್ಷ ಡಿ.ಎಸ್.ಚಂದ್ರೇಗೌಡ, ತೆಂಗಿನ ನಾರಿನ ಅಭಿವೃದ್ಧಿ ನಿಗಮ ಅಧ್ಯಕ್ಷ ಕಡೂರು ಸಿ.ನಂಜಪ್ಪ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.







