ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರೇತರ ನಿರ್ದೇಶಕರಾಗಿ ಹಾಡುವಳ್ಳಿಯ ಶೈಲೇಂದ್ರ ಪಾರ್ಶ್ವನಾಥ ಗೌಡ ಆಯ್ಕೆ

ಭಟ್ಕಳ: ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹಾಡುವಳ್ಳಿಯ ಶೈಲೇಂದ್ರ ಪಾರ್ಶ್ವನಾಥ ಗೌಡ ಇವರನ್ನು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರೇತರ ನಿರ್ದೇಶಕರನ್ನಾಗಿ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸರಕಾರದ ಜಂಟಿ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ ಇಲಾಖೆಯ ಎಂ. ನಾಗರತ್ನ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಎಂ.ಪಿ. ಶೈಲೇಂದ್ರ ಅವರು ಕಾಂಗ್ರೆಸ್‌ನ ನಿಷ್ಟಾವಂತ ಕಾರ್ಯಕರ್ತರಾಗಿದ್ದು, ಇತ್ತೀಚೆಗೆ ಬೆಳಕೆ ತಾಲ್ಲೂಕು ಪಂಚಾಯತ್ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಅಲ್ಪಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇವರು ಪ್ರಸ್ತುತ ತಾಲ್ಲೂಕು ಭೂ ನ್ಯಾಯ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ಹಾಗೂ ಮಾರುಕೇರಿಯ ಶಿವಶಾಂತಿಕಾ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
Next Story





