Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಬೇಡ್ಕರ್ ಜಗತ್ತು ಕಂಡ ಮಾನವ ಹಕ್ಕುಗಳ...

ಅಂಬೇಡ್ಕರ್ ಜಗತ್ತು ಕಂಡ ಮಾನವ ಹಕ್ಕುಗಳ ಪ್ರತಿಪಾದಕ-ಕೇಶವ ಬಂಗೇರ

ದಾಸನಕಜೆಯಲ್ಲಿ ಅಂಬೇಡ್ಕರ್ ಜಯಂತಿ

ವಾರ್ತಾಭಾರತಿವಾರ್ತಾಭಾರತಿ15 April 2016 5:48 PM IST
share
ಅಂಬೇಡ್ಕರ್ ಜಗತ್ತು ಕಂಡ ಮಾನವ ಹಕ್ಕುಗಳ ಪ್ರತಿಪಾದಕ-ಕೇಶವ ಬಂಗೇರ

ಸುಳ್ಯ: ಅಂಬೇಡ್ಕರ್ ಜಗತ್ತು ಕಂಡ ಮಾನವ ಹಕ್ಕುಗಳ ಪ್ರತಿಪಾದಕ. ಅವರು ದಲಿತ ನಾಯಕರೆಂದು ಒಂದು ವರ್ಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಅವರು ದೇಶದ ನಾಯಕ ಎಂದು ಮಂಗಳೂರು ಶ್ರೀನಾರಾಯಣಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದ್ದಾರೆ.

   ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್, ದಾಸನಕಜೆಯ ದೀನದಯಾಳ್ ಎಜ್ಯುಕೇಶನ್ ಮತ್ತು ರೂರಲ್ ಅರ್ಬನ್ ಡೆವಲಪ್‌ಮೆಂಟ್ ಟ್ರಸ್ಟ್, ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನಗಳ ಆಶ್ರಯದಲ್ಲಿ ದೈವಸ್ಥಾನದ ವಠಾರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ರ 125ನೇ ಜನ್ಮ ಜಯಂತಿ ಆಚರಣಾ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ ಮಾಡಿದರು. ಅಂಬೇಡ್ಕರ್‌ರ ಈ ದೇಶದ ಮಹಾನ್ ವ್ಯಕ್ತಿಯಾಗಿ ಬಾಳಿದವರು. ಸಂವಿಧಾನವನ್ನು ರೂಪಿಸಿ ದೇಶದ ಆಡಳಿತ ವ್ಯವಸ್ಥೆಯನ್ನು ಗಟ್ಟಿಗೊಳಿಸಿದವರು. ಅಪಾರ ಜ್ಞಾನವನ್ನು ಹೊಂದಿದ್ದ ಅಂಬೇಡ್ಕರ್‌ರವರು ಹುಟ್ಟಿದ ದಿನವನ್ನು 100ಕ್ಕೂ ಮಿಕ್ಕಿ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದ ಅವರು ಅಂಬೇಡ್ಕರ್‌ರವರ ಸಾಧನೆಗಳನ್ನು 1 ದಿನ ಅವರ ಫೊಟೋ ಇಟ್ಟು ನೆನಪು ಮಾಡಿಕೊಳ್ಳುವುದಕ್ಕಿಂತ ಅವರು ಪ್ರತಿಪಾದಿಸಿರುವ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ. ಸದಸ್ಯೆ ವಿದ್ಯಾಲಕ್ಷ್ಮಿ ಎರ್ಮೆಟ್ಟಿ, ಗ್ರಾ.ಪಂ. ಅಧ್ಯಕ್ಷ ಈಶ್ವರಪ್ಪ ಗೌಡ ಮುಖ್ಯ ಅತಿಥಿಯಾಗಿದ್ದರು. ದಾಸನಕಜೆ ಶ್ರೀನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಅಧ್ಯಕ್ಷ ಕೃಷ್ಣ ಸುಳ್ಳಿ ವೇದಿಕೆಯಲ್ಲಿದ್ದರು. ನ್ಯಾಯವಾದಿ ಜಗದೀಶ್ ಡಿ.ಪಿ. ಸ್ವಾಗತಿಸಿ, ಬಾಬು ದಾಸನಕಜೆ ವಂದಿಸಿದರು. ಪ್ರಶಾಂತ್ ಮತ್ತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಅಂಬೇಡ್ಕರ್ ಜನ್ಮ ದಿನಾಚರಣೆ ಸಭಾ ಕಾರ್ಯಕ್ರಮಕ್ಕೂ ಮೊದಲು ದುಗಲಡ್ಕದಿಂದ ವಾಹನ ಜಾಥಾ ನಡೆಯಿತು. ದುಗಲಡ್ಕ ದುಗ್ಗಲಾಯ ದೈವಸ್ಥಾನದ ಅಧ್ಯಕ್ಷ ದಯಾನಂದ ಸಾಲಿಯಾನ್ ಜಾಥಾಕ್ಕೆ ಚಾಲನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X