Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ನಿಗಮದ ವಿವಿಧ ಯೋಜನೆಗಳಿಗೆ...

ಅಂಬೇಡ್ಕರ್ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ15 April 2016 10:13 PM IST
share

ಶಿವಮೊಗ್ಗ, ಎ. 15: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗ ಮವು 2016-17ನೆ ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸ್ವಯಂ ಉದ್ಯೋಗ ಯೋಜನೆ, ಹೈನುಗಾರಿಕೆ ಯೋಜನೆ(ಬ್ಯಾಂಕ್‌ಸಾಲ), ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್(ಕಿರುಸಾಲ)ಯೋಜನೆ, ಮಹಿಳಾ ಸಮೃದ್ಧಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ, ತೆರೆದಬಾವಿ ಯೋಜನೆ ಹಾಗೂ ಏತ ನೀರಾವರಿ ಯೋಜನೆಗಳಡಿಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬ ಹುದಾಗಿದೆ.

ಸೌಲಭ್ಯ ಪಡೆಯಲಿಚ್ಛಿಸುವ ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, 18ರಿಂದ 60ವರ್ಷ ವಯೋಮಿತಿ ಯೊಳಗಿನವ ರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ 98,000 ರೂ. ಹಾಗೂ ನಗರ ಪ್ರದೇಶದವರಿಗೆ 1,20,000 ರೂ. ಮೀರಿರಬಾರದು.

ಕುಟುಂಬದ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರ ಬಾರದು. ನೋಂದಾಯಿತ ಅಂಗವಿಕಲ ಫಲಾನುಭವಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಅಭ್ಯರ್ಥಿಯು ಸಣ್ಣ ಮತ್ತು ಅತಿಸಣ್ಣ ರೈತನಾಗಿರಬೇಕು. ಭೂಒಡೆತನ ಯೋಜನೆಯಡಿ ಸೌಲಭ್ಯ ಪಡೆಯಲು ಪಲಾಪೇಕ್ಷಿಯು ಪರಿಶಿಷ್ಟ ಜಾತಿಯ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಾಗಿರಬೇಕು. ಜಮೀನು ಮಾರಾಟ ಮಾಡುವ ಭೂಮಾಲಕರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬಾರದು. ವಾಹನಗಳಿಗೆ ಸೌಲಭ್ಯ ಪಡೆಯುವ ಅಭ್ಯರ್ಥಿಗಳು ವಾಹನ ಚಾಲನಾ ಪರವಾನಿಗೆಯೊಂದಿಗೆ ಬ್ಯಾಡ್ಜನ್ನು ಹೊಂದಿರಬೇಕು.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ನಿರುದ್ಯೋಗಿ ಪರಿಶಿಷ್ಟ ಜಾತಿಯವರು ನಡೆಸಲು ಇಚ್ಛಿಸುವ ವಿವಿಧ ಉದ್ಯಮ ಶೀಲತಾ ಚಟುವಟಿಕೆಗಳಾದ ಸಣ್ಣ ಕೈಗಾರಿಕೆ, ಕಾರು ಟ್ಯಾಕ್ಸಿ, ಆಟೋರಿಕ್ಷಾ, ಟ್ರಾಕ್ಟರ್, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ, ಚರ್ಮಗಾರಿಕೆ, ವಕೀಲರ ಕಚೇರಿ, ಬ್ಯೂಟಿ ಪಾರ್ಲರ್, ರೆಡಿಮೇಡ್ ಗಾರ್ಮೆಂಟ್ಸ್, ಡಿ.ಟಿ.ಪಿ. ಸೆಂಟರ್ ಇತ್ಯಾದಿ ಉದ್ದೇಶಗಳಿಗೆ ನಿಗಮದಿಂದ ನೀಡಲಾಗುತ್ತಿದ್ದ ಸಹಾಯಧನವನ್ನು ಪರಿಷ್ಕರಿಸಲಾಗಿದೆ.

1ಲಕ್ಷದಿಂದ 5ಲಕ್ಷದ ವರೆಗಿನ ಘಟಕವೆಚ್ಚಕ್ಕೆ ಶೇ.70ರಷ್ಟು ಅಥವಾ ಗರಿಷ್ಟ 3ಲಕ್ಷ ಸಹಾಯಧನ, 5ರಿಂದ 10ಲಕ್ಷದವರೆಗಿನ ಘಟಕ ವೆಚ್ಚಕ್ಕೆ ಶೇ.60ರಷ್ಟು ಅಥವಾ ಗರಿಷ್ಟ 5ಲಕ್ಷ ಸಹಾಯಧನ ಹಾಗೂ 10ರಿಂದ 20ಲಕ್ಷದವರೆಗಿನ ಘಟಕವೆಚ್ಚಕ್ಕೆ ಶೇ.50ರಷ್ಟು ಅಥವಾ ಗರಿಷ್ಟ 5ಲಕ್ಷ ಸಹಾಯಧನ ಉಳಿದ ಮೊತ್ತ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

 ಕೃಷಿ ಮತ್ತು ಕೃಷಿ ಆಧಾರಿತ ಚಟುವಟಿಕೆಗಳನ್ನು ನಿರ್ವಹಿಸುವ ಅಭ್ಯರ್ಥಿಯು 60ವರ್ಷ ವಯೋಮಿತಿಯೊಳಗೆ ಹಾಗೂ ಕೃಷಿಯೇತರ ಚಟುವಟಿಕೆಗಳನ್ನು ನಿರ್ವಹಿಸುವ ಅಭ್ಯರ್ಥಿಯು 50ವರ್ಷ ವಯೋಮಿತಿಯೊಳಗಿರಬೇಕು. ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಗ್ರಾಮಾಂತರ ಪ್ರದೇಶದ ಅಭ್ಯರ್ಥಿಯ ವಾರ್ಷಿಕ ಆದಾಯ 1,50,000 ರೂ. ಮತ್ತು ನಗರ ಪ್ರದೇಶದ ಅ್ಯರ್ಥಿಗೆ 2.00ಲಕ್ಷ ರೂ. ಮೀರಿರಬಾರದು. ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಅಚ್ಯುತರಾವ್ ಲೇಔಟ್, ಹಳೆ ಶಾಂತ ನರ್ಸಿಂಗ್ ಹೋಂ ಪಕ್ಕ, ಶಿವಮೊಗ್ಗ ಇವರಿಂದ ಅಥವಾ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ 2016ರ ಮೇ 16ರೊಳಗಾಗಿ ಸಲ್ಲಿಸುವಂತೆ ಸೂಚಿಸಿದೆ. ವಿವರಗಳಿಗಾಗಿ ದೂರವಾಣಿ ಸಂಖ್ಯೆ 08182-224349ನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X