ಮಂಗಳೂರು : ರಾಷ್ಟ್ರಮಟ್ಟದ ಆಹ್ವಾನಿತ ಕಬ್ಬಡ್ಡಿ ಪಂದ್ಯಾಟಕ್ಕೆ ಚಾಲನೆ
ಮಂಗಳೂರು, ಎ. 15: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಮತ್ತು ದ.ಕ. ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಆಶ್ರಯದಲ್ಲಿ ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ಗಳ ಸಹಕಾರದೊಂದಿಗೆ ಪಣಂಬೂರಿನಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಅಖಿಲ ಭಾರತ ಆಹ್ವಾನಿತ ಬೀಚ್ ಮ್ಯಾಟ್ ಪುರುಷರ ಕಬಡ್ಡಿ ಪಂದ್ಯಾಟಕ್ಕೆ ಇಂದು ಚಾಲನೆ ನೀಡಲಾಯಿತು.
ಸಂಜೆ 5 ತೆಂಗಿನ ಕಾಯಿ ಒಡೆಯುವ ಮೂಲಕ ಕಬಡ್ಡಿ ಕೋರ್ಟ್‌ನ ಉದ್ಘಾಟನೆ ನಡೆಯಿತು. ಇದಕ್ಕೂ ಮುನ್ನ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಕಾಲವಿದರಿಂದ ಮೆರವಣಿಗೆ ನಡೆಯಿತು. ರಾತ್ರಿ 8 ಗಂಟೆಗೆ ನಡೆದ ಸಭಾ ಕಾರ್ಯಕ್ರಮದಲ್ಲಿ ಸಚಿವ ಅಭಯಚಂದ್ರ ಜೈನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಶಾಸಕರಾದ ಮೊದಿನ್ ಬಾವ, ಐವನ್ ಡಿಸೋಜ, ಮೇಯರ್ ಕೆ.ಹರಿನಾಥ್, ಆಳ್ವಾಸ್ ಎಜುಕೇಶನ್‌ನ ಅಧ್ಯಕ್ಷ ಡಾ.ಮೋಹನ್ ಆಳ್ವ, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ರಾಕೇಶ್ ಮಲ್ಲಿ, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ನ ಅಧ್ಯಕ್ಷ ಅಮರನಾಥ ರೈ ಬಿ. ಮೊದಲಾದವರು ಉಪಸ್ಥಿತರಿದ್ದರು.





