ಹರೇಕಳ: ಸಮಾಲೋಚನಾ ಸಭೆ

ಕೊಣಾಜೆ, ಎ.15: ಹರೇಕಳ ಶ್ರೀರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಸಮಲೋಚನಾ ಸಭೆ ಶಾಲೆಯ ಸಭಾಂಗಣದಲ್ಲಿ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮುದಲೆಮಾರು ಪ್ರಹ್ಲಾದ ರೈಯ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯನ್ನು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಜಿ. ರಘುನಾಥ್ ರೈ ಉದ್ಘಾಟಿಸಿದರು. ಕಾರ್ಯ ಕ್ರಮದಲ್ಲಿ ಪೊಸಕುರಲ್‌ನ ನಿರ್ದೇಶಕ ವಿದ್ಯಾಧರ್ ಶೆಟ್ಟಿ, ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸದಾನಂದ ಕೆ., ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲಕೃಷ್ಣ ಭಂಡಾರಿ, ನಿವೃತ್ತ ಶಿಕ್ಷಕಿ ನಳಿನಿ ಕಜೆ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿಗಳಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಮುಹಮ್ಮದ್ ಮುಸ್ತಫಾ ಪಾವೂರು, ಬಿ.ಎಸ್.ಹಸನಬ್ಬ, ರವೀಂದ್ರ ಶೆಟ್ಟಿ ಉಳಿದೊಟ್ಟು, ಭರತ್‌ರಾಜ್ ಶೆಟ್ಟಿ ಪಜೀರುಗುತ್ತು, ಸತ್ಯಪಾಲ ರೈ ಕಡೆಂಜಗುತ್ತು, ಮಹಾಬಲ ಹೆಗ್ಡೆ ದೆಬ್ಬೇಲಿ, ಮೋಹನ್‌ದಾಸ್‌ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪೂಂಜ ಕಿಲ್ಲೂರು, ಸುರೇಶ್ ಶೆಟ್ಟಿ ಬಂದೋಡಿಗುತ್ತು, ಅಬ್ದುರ್ರಹ್ಮಾನ್ ಕೋಡಿಜಾಲ್, ನಯನಾ ವಿ. ರೈ ಕುದ್ಕಾಡಿ, ರಮೇಶ್ ಐತಾಳ್, ಲಕ್ಷ್ಮೀನಾರಾಯಣ ರೈ ಹರೇಕಳ, ವಿಕ್ಟರ್ ಡಿ.ಸೋಜ, ರಾಜೇಶ್ ಶೆಟ್ಟಿ ಪಜೀರುಗುತ್ತು, ನರಸಿಂಹ ನಾಕ್, ಸಂದೇಶ್ ಶೆಟ್ಟಿ ಕೊಳ್ಕೆ, ಕಮಲಾಕ್ಷ ಶೆಟ್ಟಿಗಾರ್, ಅಬ್ದುಲ್ ಖಾದರ್ ಕಾರ್ಯಕ್ರಮದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಸುವರ್ಣ ಮಹೋತ್ಸವ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಚೌಟರನ್ನು ಅಭಿನಂದಿಸಲಾಯಿತು. ಶಾಲಾ ಸಂಚಾಲಕ ಜಯರಾಮ ಆಳ್ವ ಪೋಡಾರ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ರವೀಂದ್ರ ರೈ ಹರೇಕಳ ಪ್ರಾಸ್ತಾವಿಸಿದರು. ಶಿಕ್ಷಕ ರವಿಶಂಕರ್ ಪ್ರಾರ್ಥಿಸಿದರು. ಕೃಷ್ಣ ಶಾಸ್ತ್ರಿ ವಂದಿಸಿದರು. ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.





