ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಸಾಂಸ್ಕೃತಿಕ ಉತ್ಸವ
ಮಂಗಳೂರು, ಎ.15: ಲಕ್ಷೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ಎಲ್‌ಎಂಇಟಿ), ಮಂಗಳೂರು ಇದರ ಅಂಗಸಂಸ್ಥೆಯಾದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಸಾಂಸ್ಕೃತಿಕ ಉತ್ಸವವನ್ನು ಆಚರಿಸಲಾಯಿತು. ಲೀಲಾವತಿ ಶೆಟ್ಟಿ ಕಾಲೇಜಿನ ಪ್ರಾಂಶುಪಾಲೆ ಡಾ.ಆರತಿ ಎಚ್. ಶೆಟ್ಟಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ನಿರ್ದೇಶಕ ಡಾ.ಟಿ.ಜಯಪ್ರಕಾಶ್ ರಾವ್ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಸಂಘಟಕರಾದ ನಿಶ್ಮಿತಾ ಮತ್ತು ನಿಝಾಮುದ್ದೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಘಟಕ ಪ್ರೊ.ಲಹರಿ ಎನ್. ಮೂರ್ತಿ ಸ್ವಾಗತಿ ಸಿದರು. ಸುಪ್ರೀತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾ ವಂದಿಸಿದರು.
Next Story





