ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ
ಪುತ್ತೂರು, ಎ.15: ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಆರೋಪಿ ಸರ್ವೆ ಗ್ರಾಮದ ಬೈರರಗುರಿ ನಿವಾಸಿ ವಿಜಯ ಎಂಬಾತನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ವಿಜಯ ತನ್ನ ಪತ್ನಿ ಭಾಗೀರಥಿಯನ್ನು ಗುರುವಾರ ಕತ್ತಿಯಿಂದ ಕಡಿದು ಕೊಲೆಗೈದಿದ್ದ. ಮದ್ಯವ್ಯಸನಿಯಾಗಿದ್ದ ಈತ ಶೀಲ ಶಂಕಿಸಿ ಪತ್ನಿಯ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದ ಎನ್ನಲಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿ ಪತಿ ಪತ್ನಿಯ ನಡುವೆ ಜಗಳ ನಡೆದು ಕೊಲೆ ಸಂಭವಿಸಿತ್ತು. ಆರೋಪಿಯನ್ನು ಬಂಧಿಸಿದ್ದ ಸಂಪ್ಯ ಠಾಣಾ ಪೊಲೀಸರು ಆರೋಪಿ ವಿಜಯನನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story





