Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೌಲ್ಯಮಾಪನಕ್ಕೆ ಪರ್ಯಾಯ ವ್ಯವಸ್ಥೆ: 7...

ಮೌಲ್ಯಮಾಪನಕ್ಕೆ ಪರ್ಯಾಯ ವ್ಯವಸ್ಥೆ: 7 ಸಾವಿರ ಖಾಸಗಿ ಉಪನ್ಯಾಸಕರು

ವಾರ್ತಾಭಾರತಿವಾರ್ತಾಭಾರತಿ16 April 2016 11:43 PM IST
share
ಮೌಲ್ಯಮಾಪನಕ್ಕೆ ಪರ್ಯಾಯ ವ್ಯವಸ್ಥೆ: 7 ಸಾವಿರ ಖಾಸಗಿ ಉಪನ್ಯಾಸಕರು

ಬೆಂಗಳೂರು, ಎ.16: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಯ ವೌಲ್ಯಮಾಪನ ಮಾಡಲು ಖಾಸಗಿ ಉಪನ್ಯಾಸಕರು ಸಿದ್ಧರಿದ್ದು, ನಿಗದಿತ ಅವಧಿಯೊಳಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪಿಯು ಮಂಡಳಿಯ ನಿರ್ದೇಶಕ ಡಾ.ರಾಮೇಗೌಡ ತಿಳಿಸಿದ್ದಾರೆ.

ನಗರದ ಪಿಯು ಮಂಡಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಏಳು ಸಾವಿರ ಖಾಸಗಿ ಉಪನ್ಯಾಸಕರು ಮೌಲ್ಯಮಾಪನಕ್ಕೆ ಸಿದ್ಧರಿದ್ದು, ಕೋಡಿಂಗ್, ಡಿಕೋಡಿಂಗ್ ಪ್ರಕ್ರಿಯೆ ಮುಗಿದ ತಕ್ಷಣ ವೌಲ್ಯಮಾಪನ ನಡೆಸಲಾಗುವುದು ಎಂದು ಹೇಳಿದರು.

ಪಿಯು ಮಂಡಳಿ ಹಾಗೂ ಡಿಸಿಇಆರ್‌ಟಿ ಸಿಬ್ಬಂದಿಗೆ ಕೋಡಿಂಗ್ ತರಬೇತಿ ನೀಡಲಾಗುತ್ತಿದ್ದು, ಈ ಕಾರ್ಯಕ್ಕೆ 10 ಸಿಬ್ಬಂದಿಯ 46 ತಂಡಗಳನ್ನು ರಚಿಸಲಾಗಿದೆ. ಎರಡರಿಂದ ಮೂರು ದಿನದ ಒಳಗಾಗಿ ಕೋಡಿಂಗ್ ಪ್ರಕ್ರಿಯೆ ಮುಗಿಯಲಿದ್ದು, ಮೌಲ್ಯಮಾಪನ ಸಾಂಗವಾಗಿ ನಡೆಯಲಿದೆ ಎಂದು ಡಾ.ರಾಮೇಗೌಡ ಹೇಳಿದರು.

ಮೌಲ್ಯಮಾಪನಕ್ಕೆ ಪಿಯು ಮಂಡಳಿಯ ಕೆಲವು ಸಿಬ್ಬಂದಿ ಸಮರ್ಥರಿದ್ದು, ಅವರನ್ನು ತೊಡಗಿಸಿಕೊಳ್ಳಲು ಸೂಚಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ಆತಂಕ ಪಡಬೇಕಾಗಿಲ್ಲ. ನಿಗದಿತ ವೇಳೆಗೆ ಫಲಿತಾಂಶ ಹೊರಬೀಳಲಿದೆ ಎಂದು ಅವರು ಖಚಿತ ಪಡಿಸಿದರು.

ಮೌಲ್ಯಮಾಪನ ಪರ್ಯಾಯ ವ್ಯವಸ್ಥೆ ಅವೈಜ್ಞಾನಿಕ: ಪುರ್ಲೆ

ಬೆಂಗಳೂರು, ಎ.16: ಸರಕಾರ ಪಿಯು ಮೌಲ್ಯಮಾಪನಕ್ಕೆ ಖಾಸಗಿ ಉಪನ್ಯಾಸಕರನ್ನು ನೇಮಿಸಿಕೊಂಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.

ಪಿಯು ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗಾಗಿ ನಗರದ ಸ್ವಾತಂತ್ರ ಉದ್ಯಾನವನದಲ್ಲಿ 16 ದಿನಗಳಿಂದ ಕೈಗೊಂಡಿರುವ ಪ್ರತಿಭಟನೆಯಲ್ಲಿ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರಕಾರ ಪಿಯು ಉತ್ತರ ಪತ್ರಿಕೆಯನ್ನು ವೌಲ್ಯಮಾಪನ ಮಾಡಬೇಕಾದವರನ್ನು ನಿರ್ಲಕ್ಷಿಸಿ ಪರ್ಯಾಯ ಮಾರ್ಗ ಹುಡುಕುವುದು ಸರಿಯಾದ ಕ್ರಮವಲ್ಲ ಎಂದು ಖಂಡಿಸಿದರು.

ಪಿಯು ಉತ್ತರ ಪತ್ರಿಕೆಯ ಕೋಡಿಂಗ್ ಹಾಗೂ ಡಿಕೋಡಿಂಗ್ ಮಾಡಬೇಕಾದ ‘ಲಾಕರ್ ಕೀ’ಗಳು ಪ್ರಾಂಶುಪಾಲರ ಬಳಿಯಿವೆ. ಪ್ರಾಂಶುಪಾಲರ ಅನುಮತಿಯಿಲ್ಲದೆ ವೌಲ್ಯಮಾಪನ ಮಾಡಲು ಸಾಧ್ಯವೇ ಇಲ್ಲ. ಸರಕಾರ ಪಿಯು ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದನ್ನು ಬಿಟ್ಟು, ಕಾನೂನುಬಾಹಿರ ಕಾರ್ಯಕ್ಕೆ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪತ್ರಿಕೆಗಳ ಕೋಡಿಂಗ್, ಡಿಕೋಡಿಂಗ್ ಮಾಡಬೇಕಾದರೆ ಸುಮಾರು 3 ಸಾವಿರಕ್ಕೂ ಹೆಚ್ಚು ಉಪನ್ಯಾಸಕರು ಬೇಕು. ಆದರೆ, ಸರಕಾರ ಕೇವಲ 500 ಮಂದಿಯಿಂದ ಈ ಕೆಲಸವನ್ನು ಮಾಡಿಸಲು ಮುಂದಾಗಿದೆ. ಇದರಿಂದ ಹಲವು ಸಮಸ್ಯೆಗಳು ಉದ್ಭವಿಸಲಿವೆ ಎಂದು ಅವರು ಎಚ್ಚರಿಕೆ ನೀಡಿದರು.

ಕೋಡಿಂಗ್, ಡಿಕೋಡಿಂಗ್ ಪ್ರಕ್ರಿಯೆ ಮಾಡಬೇಕಾದರೆ ಸಾಕಷ್ಟು ಅನುಭವವಿರಬೇಕು. ಆದರೆ, ಸರಕಾರ ಪಿಯು ಮಂಡಳಿಯ ಸಿಬ್ಬಂದಿಯ ಮೂಲಕ ಈ ಕಾರ್ಯವನ್ನು ಮಾಡಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯ ವಾಗುವುದು ಖಾತರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತನಿಖೆ ಎದುರಿಸುತ್ತಿರುವ ಖಾಸಗಿ ಕಾಲೇಜು ಉಪನ್ಯಾಸಕರಿಗೆ ಮೌಲ್ಯಮಾಪನದ ಹೊಣೆ!

ಬೆಂಗಳೂರು, ಎ.16: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಉಪನ್ಯಾಸಕರ ಬೇಜವಾಬ್ದಾರಿ, ವೌಲ್ಯಮಾಪನ ಗೊಂದಲದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದೆ. ಈ ಮಧ್ಯೆ ಪದವಿ ಪೂರ್ವ ಶಿಕ್ಷಣ ಮಂಡಳಿ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಿಲುಕಿ ಸಿಐಡಿ ವಿಚಾರಣೆ ಎದುರಿಸುತ್ತಿರುವ 11 ಖಾಸಗಿ ಕಾಲೇಜು ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಮೌಲ್ಯಮಾಪನದ ಜವಾಬ್ದಾರಿ ನೀಡುವ ಮೂಲಕ ಯಡವಟ್ಟು ಮಾಡಿದೆ.

ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ಇಂದು ಬೆಂಗಳೂರು ಸೇರಿದಂತೆ ರಾಜ್ಯದ 11 ಪ್ರತಿಷ್ಠಿತ ಕಾಲೇಜುಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಆದರೆ, ಅದೇ ಕಾಲೇಜುಗಳ ಉಪನ್ಯಾಸಕರಿಗೆ ವೌಲ್ಯ ಮಾಪನದ ಹೊಣೆ ನೀಡಿರುವುದು ವಿದ್ಯಾರ್ಥಿಗಳ ವಿರೋಧಕ್ಕೂ ಕಾರಣವಾಗಿದೆ.
ಇಲ್ಲಿನ ವಿದ್ಯಾರಣ್ಯಪುರ ನಾರಾಯಣ ಕಾಲೇಜು, ಚೈತನ್ಯ ಕಾಲೇಜು, ಯಲಹಂಕದ ದೀಕ್ಷಾ ಕಾಲೇಜು, ಹೆಬ್ಬಾಳ ಕೆಂಪಾಪುರದ ಪ್ರೆಸಿಡೆನ್ಸಿ ಕಾಲೇಜು, ಸಂಜಯನಗರದ ಬೃಂದಾವನ ಕಾಲೇಜು, ಕಲ್ಯಾಣ ನಗರದ ರಾಯಲ್ ಕಾನ್‌ಕರ್ಡ್, ಬಳ್ಳಾರಿಯ ನಾರಾಯಣ, ಚೈತನ್ಯ ಕಾಲೇಜು, ತುಮಕೂರಿನ ದೀಕ್ಷಾ ಹಾಗೂ ಮಂಗಳೂರಿನ ಎಕ್ಸ್‌ಪರ್ಟ್ ಮತ್ತು ಮಹೇಶ್ ಕಾಲೇಜುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದ ಕಾಲೇಜುಗಳ ಪೈಕಿ ಮಂಗಳೂರಿನ ಇಬ್ಬರು ಉಪನ್ಯಾಸಕರನ್ನು ಸೇರಿದಂತೆ ಹಲವರನ್ನು ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಗೌಪ್ಯ ಸ್ಥಳದಲ್ಲಿ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X