ಉಡುಪಿ: ಸರಕಾರಿ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಉಡುಪಿ, ಎ.16: ವೈಯಕ್ತಿಕ ಆರೋಗ್ಯದ ರಕ್ಷಣೆಗೆ ಒತ್ತು ಕೊಡುವ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಪ್ರತಿಯೊಬ್ಬರೂ ತಮ್ಮ ಕೊಡುಗೆ ನೀಡಬೇಕು ಎಂದು ಕೇಂದ್ರ ಸರಕಾರದ ಆಯುಷ್ ಇಲಾಖೆಯ ಯೋಗ ಸಮಿತಿ ಸದಸ್ಯ ಡಾ ತನ್ಮಯ್ ಗೋಸ್ವಾಮಿ ಹೇಳಿದ್ದಾರೆ.
ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ತೆಂಕ ನಿಡಿಯೂರು ಗ್ರಾಪಂ ಹಾಗೂ ಸ್ವಚ್ಛ ಭಾರತ್ ಫ್ರೆಂಡ್ಸ್ ಆಶ್ರಯದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಸಂಪ ನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಲೆ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಪ್ರೊ.ಬಾಲಕ್ರಷ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಡಾ. ದುಗ್ಗಪ್ಪ ಕಜೆಕಾರ್ ಸ್ವಾಗತಿಸಿದರು. ದರ್ಶಿನಿ ಕಾರ್ಯಕ್ರಮ ನಿರೂಪಿಸಿದರು.
Next Story





