Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ಸಚಿವ...

ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ17 April 2016 5:08 PM IST
share
ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ಸಚಿವ ದೇಶಪಾಂಡೆ

ಮಂಗಳೂರು, ಎ. 17: ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರವಾಸಿ ಸೌಲಭ್ಯದ ವಿವಿಧ ಕಾಮಗಾರಿಗಳ ಹಾಗೂ ಕೆಎಸ್‌ಟಿಡಿಸಿ ಪ್ರವಾಸಿ ಬಸ್ ಸೌಲಭ್ಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಪ್ರವಾಸಿಗರನ್ನು ಆಕರ್ಷಿಸುವ ನಿಟ್ನಿಟಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ಯೋಜನೆಗಳ ಕಾಮಗಾರಿಗೆ 5 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. ಇಲ್ಲಿ ಪ್ರವಾಸೋದ್ಯಮ ಬೆಳೆಯಲು ಸಾಕಷ್ಟು ಅವಕಾಶಗಳಿದ್ದರೂ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ನಿರೀಕ್ಷಿತ ಮಟ್ಟದಲ್ಲಿ ಬೆಳೆದಿಲ್ಲ. ಇದಕ್ಕೆ ಜನರ ಸಹಕಾರ ಬೇಕು. ಪಿಲಿಕುಳ ನಿಸರ್ಗಧಾಮವು ರಾಜ್ಯಕ್ಕೆ ಮಾತ್ರವಲ್ಲ ಇಡೀ ವಿಶ್ವವನ್ನು ಆಕರ್ಷಿಸುವ ಕೆಲಸ ಆಗಬೇಕು ಎಂದು ಅವರು ನುಡಿದರು.

ಪ್ರವಾಸೋದ್ಯಮಕ್ಕೆ ಸಂಬಂಧಿಸಿ ಶುಚಿತ್ವ, ಭದ್ರತೆ ಮತ್ತು ಕೆಲವು ಮೂಲಭೂತ ಸೌಲಭ್ಯಗಳ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಗೃಹ ಇಲಾಖೆಯ ವತಿಯಿಂದ 175 ಹೋಂಗಾರ್ಡ್‌ಗಳಿಗೆ ತರಬೇತಿ ಸಹಿತ ಹಲವು ಕ್ರಮಗನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಯುವಜನಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ಇಲಾಖೆಯ ಸಚಿವ ಕೆ.ಅಭಯಚಂದ್ರ ಜೈನ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಮೊದಿನ್ ಬಾವ, ಐವನ್ ಡಿಸೋಜ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಎ.ಹುಸೇನ್, ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷ ಅಸಗೋಡು ಜಯಸಿಂಹ ಮೊದಲಾದವರು ಉಪಸ್ಥಿತರಿದ್ದರು. 

ಕೆಎಸ್‌ಟಿಡಿಸಿ ಸೌಲಭ್ಯ

ಪ್ರವಾಸಿಗರ ಈ ಕೆಎಸ್‌ಟಿಡಿಸಿ ಬಸ್ಸು ಬೆಳಗ್ಗೆ 8ಗಂಟೆಯಿಂದ ಲಾಲ್‌ಬಾಗ್‌ನಿಂದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ, 9:15ಕ್ಕೆ ಕದ್ರಿಯ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ, 10:15ಕ್ಕೆ ಮಂಗಳಾದೇವಿ ದೇವಸ್ಥಾನ, 11:15ಕ್ಕೆ ಸೈಂಟ್ ಅಲೋಶಿಯಸ್ ಚಾಪೆಲ್‌ಗೆ ತಲುಪಲಿದೆ. ಅಲ್ಲಿ ಮಧ್ಯಾಹ್ನ 12:30ರಿಂದ 1:30ರವರೆಗೆ ಊಟೋಪಚಾರಕ್ಕೆ ವಿರಾಮ ನೀಡಲಿದೆ. ಬಳಿಕ 2 ಗಂಟೆಗೆ ಹೊರಟು ಪಿಲಿಕುಳ ನಿಸರ್ಗಧಾಮದ ಬಯಾಲಾಜಿಕಲ್ ಪಾರ್ಕ್, ಝೂ, ಸ್ನೇಕ್ ಪಾರ್ಕ್‌ಗೆ ಸಂಜೆ 5 ಗಂಟೆಯಿಂದ 6:30ರವರೆಗೆ ತಣ್ಣೀರು ಬಾವಿ ಟ್ರೀ ಪಾರ್ಕ್‌ಗೆ ಭೇಟಿ ನೀಡಿ ಸಂಜೆ 7 ಗಂಟೆಗೆ ವಾಪಸ್ ಲಾಲ್‌ಬಾಗ್ ತಲುಪಲಿದೆ.

ಈ ಹವಾನಿಯಂತ್ರಿತ ಕೆಎಸ್‌ಟಿಡಿಸಿ ಬಸ್ಸು ಪ್ರವಾಸಿಗರ ನಿತ್ಯ ಲಭ್ಯವಿದೆಯಾದರೂ ಕನಿಷ್ಠ 10 ಮಂದಿ ಪ್ರವಾಸಿಗರು ಇಲ್ಲದಿದ್ದರೆ ಹೊರಡುವಂತಿಲ್ಲ. ಪ್ರತಿಯೋರ್ವ ಸದಸ್ಯನಿಗೆ 190 ರೂ. ಪ್ರಯಾಣ ದರ ವಿಧಿಸಲಾಗಿದೆ. ಉಟೋಪಚಾರ ಸಹಿತ ಇತರ ಖರ್ಚುಗಳು ಪ್ರವಾಸಿಗರೇ ಭರಿಸಬೇಕು. ಈ ಪ್ರಯಾಣ ದರದಲ್ಲಿ ಶಾಲಾ ಮಕ್ಕಳಿಗೆ ಶೇ. 10 ರಿಯಾಯತಿಯನ್ನು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X