Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲ್ಯರಿಂದ ರೂ. 950 ಕೋಟಿ ಐಡಿಬಿಐ ಸಾಲದ...

ಮಲ್ಯರಿಂದ ರೂ. 950 ಕೋಟಿ ಐಡಿಬಿಐ ಸಾಲದ ಅರ್ಧದಷ್ಟು ವಿದೇಶಗಳಲ್ಲಿ ಹೂಡಿಕೆ: ಇ.ಡಿ.

ವಾರ್ತಾಭಾರತಿವಾರ್ತಾಭಾರತಿ17 April 2016 9:04 PM IST
share
ಮಲ್ಯರಿಂದ ರೂ. 950 ಕೋಟಿ ಐಡಿಬಿಐ ಸಾಲದ ಅರ್ಧದಷ್ಟು ವಿದೇಶಗಳಲ್ಲಿ ಹೂಡಿಕೆ: ಇ.ಡಿ.

ಮುಂಬೈ, ಎ.17: ವಿಜಯ ಮಲ್ಯ ಐಡಿಬಿಐ ಬ್ಯಾಂಕ್‌ನಿಂದ ಸಾಲ ಪಡೆದಿದ್ದ ರೂ. 950 ಕೋಟಿಗಳಲ್ಲಿ ಸುಮಾರು ಅರ್ಧದಷ್ಟನ್ನು ಭಾರತದ ಹೊರಗೆ ಆಸ್ತಿಗಳಲ್ಲಿ ಹೂಡಿದ್ದಾರೆ. ಅವರ ವಿರುದ್ಧದ ಹಣ ಚೆಲುವೆ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶನಿವಾರ ವಿಶೇಷ ನ್ಯಾಯಾಲಯವೊಂದಕ್ಕೆ ಈ ವಿಷಯ ತಿಳಿಸಿದ್ದಾರೆ.

ಭಾರತದ ವಿವಿಧ ಬ್ಯಾಂಕ್‌ಗಳಿಗೆ ರೂ. 9,400 ಕೋಟಿಯಷ್ಟು ಸಾಲ ಬಾಕಿಯಿರಿಸಿರುವ ರಾಜ್ಯಸಭಾ ಸದಸ್ಯ ಮಲ್ಯರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹಾಗೂ ರೆಡ್ ಕಾರ್ನರ್ ನೋಟಿಸ್ ಹೊರಡಿಸುವಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. ನ್ಯಾಯಾಲಯವು ಆದೇಶವನ್ನು ಸೋಮವಾರದ ತನಕ ಮೀಸಲಿರಿಸಿದೆ.

ಮಲ್ಯ, ವಿಮಾನ ಬಾಡಿಗೆ, ಬಿಡಿಭಾಗಗಳ ಆಮದು ಹಾಗೂ ವಿಮಾನ ದುರಸ್ತಿ ಸೇವೆಗಳ ಹೆಸರಿನಲ್ಲಿ, ಐಡಿಬಿಐ ಸಾಲದಿಂದ ರೂ. 430 ಕೋಟಿಯನ್ನು ಬೇರೆಡೆಗೆ ಸಾಗಿಸಿದ್ದಾರೆಂದು ಜಾರಿ ನಿರ್ದೇಶನಾಲಯದ ವಕೀಲ ಹಿತೇನ್ ವೆನೆಗಾಂವ್ಕರ್ ನ್ಯಾಯಾಲಯಕ್ಕೆ ತಿಳಿಸಿದರು. ಈ ಸಾಲವನ್ನು ಈಗ ನಿಷ್ಕ್ರಿಯಗೊಂಡಿರುವ ಕಿಂಗ್‌ಫಿಶರ್ ಏರ್‌ಲೈನ್ಸ್‌ಗೆ ನೀಡಲಾಗಿತ್ತು.

ಕಿಂಗ್‌ಫಿಶರ್ ಏರ್‌ಲೈನ್ಸ್‌ನ ಹಣದ ವ್ಯವಹಾರದ ಬಗ್ಗೆ ಜಾರಿ ನಿರ್ದೇಶನಾಲಯವು ಬ್ರಿಟನ್, ಫ್ರಾನ್ಸ್, ಅಮೆರಿಕ ಸಚಿವ ಹಲವು ದೇಶಗಳನ್ನು ಸಂಪರ್ಕಿಸಿದೆ. ಹಣವನ್ನು ವಿದೇಶಗಳ ತೆರಿಗೆ ಸ್ವರ್ಗಗಳಲ್ಲಿ ಇರಿಸಲಾಗಿದೆಯೆಂದು ಜಾರಿ ನಿರ್ದೇಶನಾಲಯದ ಕೆಲವು ಅಧಿಕಾರಿಗಳು ಶಂಕಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಹಣದ ಜಾಡಿನ ಬಗ್ಗೆ ತಾವು ಬೆಕ್ಕಸ ಬೆರಗಾಗಿದ್ದೇವೆ. ಸಾಲ ಪಡೆದ ಹಣದಲ್ಲಿ ಒಂದು ಭಾಗವನ್ನು ವಿದೇಶಗಳಲ್ಲಿ ಆಸ್ತಿ ಖರೀದಿಗೆ ಬಳಸಲಾಗಿದೆ. ಹಣವನ್ನು ಪಡೆದಿರುವ ದೊಡ್ಡ ಕುಳಗಳನ್ನು, ಅವರ ಬ್ಯಾಂಕ್ ವಿವರದೊಂದಿಗೆ ಗುರುತಿಸಲಾಗಿದೆ. ವ್ಯಾಪಾರಕ್ಕೆ ಸಂಬಂಧವೇ ಇಲ್ಲದ ಕಂಪೆನಿಗಳಿಗೆ ವಿವಿಧ ಮೊತ್ತಗಳನ್ನು ಪಾವತಿಸಲಾಗಿದೆಯೆಂದು ವೆನೆಗಾಂವ್ಕರ್ ಹೇಳಿದರು.

ಮಲ್ಯ, ಜಾರಿ ನಿರ್ದೇಶನಾಲಯದ ಪ್ರಶ್ನೆಗಳಿಗೆ ವೀಡಿಯೊ ಕಾನ್ಫರೆನ್ಸಿಂಗ್ ಅಥವಾ ಮೇಲ್‌ನ ಮೂಲಕ ಉತ್ತರಿಸುವ ಕೊಡುಗೆ ಮುಂದಿರಿಸಿದ್ದಾರೆ. ಆದರೆ, ಆರೋಪಿಯ ಅನುಕೂಲಕ್ಕೆ ತಕ್ಕಂತೆ ತನಿಖೆಯನ್ನು ಮುಂದುವರಿಸಲಾಗದು. ಆದುದರಿಂದ ಅವರ ಈ ಕೊಡುಗೆ ಅಂಗೀಕಾರಾರ್ಹವಲ್ಲವೆಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X