Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ದಲಿತರು ಮತ್ತು ಮಾಧ್ಯಮ

ದಲಿತರು ಮತ್ತು ಮಾಧ್ಯಮ

ರಾಜಶೇಖರ ಕೋಟಿ.ರಾಜಶೇಖರ ಕೋಟಿ.17 April 2016 11:57 PM IST
share
ದಲಿತರು ಮತ್ತು ಮಾಧ್ಯಮ

 ನೋವುಂಡವರ ನೋವು ನೋವುಂಡವರಿಗೆ ಮಾತ್ರ ಗೊತ್ತಾಗುತ್ತದೆ ಎಂಬ ಮಾತಿದೆ. ಇದು ಈ ದೇಶದ ದಲಿತರ ವಿಷಯದಲ್ಲಿ ಅಕ್ಷರಶಃ ಸತ್ಯವಾದ ಮಾತು. ಸಹಸ್ರಾರು ವರ್ಷಗಳಿಂದ ನಮ್ಮ ಸಮಾಜದಲ್ಲಿ ದಲಿತರನ್ನು ಪ್ರಾಣಿಗಿಂತಲೂ ಕಡೆಯಾಗಿ ಕಂಡು ಅವರ ಮೇಲೆ ನಿರಂತರವಾಗಿ ನಡೆಸುತ್ತಾ ಬಂದಿರುವ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಇತ್ಯಾದಿ ಮನುಷ್ಯ ವಿರೋಧಿ ನಡವಳಿಕೆಗಳು ಸ್ವಾತಂತ್ರಾ ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನದಲ್ಲಿ ದಲಿತರನ್ನು ಶೋಷಣೆಯಿಂದ ಮುಕ್ತ ಮಾಡಲು ಹಾಗೂ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಮೀಸಲಾತಿ ಸೌಲಭ್ಯ ಸೇರಿದಂತೆ ಹಲವಾರು ಪ್ರಗತಿಪರ ಕ್ರಮಗಳಿಗೆ ಆದ್ಯತೆ ನೀಡಿದರೂ ಇನ್ನೂ ಒಂದಿಲ್ಲೊಂದು ರೀತಿಯಲ್ಲಿ ಮುಂದುವರಿಯುತ್ತಲೇ ಇವೆ.

ಈ ನಿಟ್ಟಿನಲ್ಲಿ ಮಾಧ್ಯಮಗಳು ಎಷ್ಟು ಗಮನ ಕೊಡಬೇಕಿತ್ತೋ, ಸರಕಾರ ಹಾಗೂ ಸಮಾಜದ ಕಿವಿ ಹಿಂಡಬೇಕಿತ್ತೋ ಅದರಲ್ಲಿ ಅವು ವಿಫಲವಾಗಿವೆ ಎಂಬುವುದು ವಿಷಾದದ ಸಂಗತಿ. ಇದಕ್ಕೆ ಪ್ರಮುಖ ಕಾರಣ ಬಹುಪಾಲು ಮಾಧ್ಯಮಗಳು ಉಳ್ಳವರ ಹಾಗೂ ಮೇಲ್ಜಾತಿಯವರ ಹಿಡಿತದಲ್ಲಿರುವುದು ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ದಲಿತರು ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಇರುವುದೇ ಆಗಿದೆ. ದಲಿತರನ್ನು ಹಾಗೂ ಸಮಾನತೆ ಬಯಸುವ ಜನರನ್ನು ಕಾಡುತ್ತಿರುವ ಈ ಸಂಗತಿಯನ್ನು ಸ್ವತಃ ಮಾಧ್ಯಮ ಕ್ಷೇತ್ರದಲ್ಲಿದ್ದು ಪಿಎಚ್‌ಡಿಗಾಗಿ ಸಂಶೋಧನೆ ನಡೆಸುತ್ತಿರುವ ದಿಲೀಪ್ ಕುಮಾರ್ ಎಂ. (ದಿಲೀಪ್ ನರಸಯ್ಯ) ಅವರು ‘ ದಲಿತರು ಮತ್ತು ಮಾಧ್ಯಮ’ ಎಂಬ ತಮ್ಮ ಕೃತಿಯ ಲೇಖನದಲ್ಲಿ ಬಹು ಪರಿಣಾಮಕಾರಿಯಾಗಿ ವಿಶ್ಲೇಷಿಸಿ ನಮ್ಮ ಮುಂದೆ ತೆರೆದಿಟ್ಟಿದ್ದಾರೆ. ಹಾಗೂ ದಲಿತರು ಮಾಧ್ಯಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಅಗತ್ಯವನ್ನು ಮನಗಾಣಿಸಿದ್ದಾರೆ. ಇದಲ್ಲದೆ ದೇಶವನ್ನು ಕಿತ್ತು ತಿನ್ನುತ್ತಿರುವ ಹಲವಾರು ವಿಷಯಗಳ ಬಗ್ಗೆ ಸಂಶೋಧನೆ ನಡೆಸಿ ಅಂಕಿ-ಅಂಶಗಳ ಸಮೇತ ಅವರು ಬರೆದಿರುವ ಲೇಖನಗಳನ್ನು ಈ ಕೃತಿ ಒಳಗೊಂಡಿವೆೆ. ನಮ್ಮ ದೇಶದ ಬಹು ಸಂಖ್ಯೆಯ ದಲಿತರ ಸ್ಥಿತಿಗತಿಗಳ ಬಗೆಗಿನ ಹಾಗೂ ಒಟ್ಟಾರೆ ದೇಶದ ಒಳಿತಿನ ಬಗೆಗಿನ ಅವರ ಚಿಂತನೆ ಹಾಗೂ ಕಾಳಜಿಗಾಗಿ ಅವರನ್ನು ಅಭಿನಂದಿಸುತ್ತೇನೆ.

share
ರಾಜಶೇಖರ ಕೋಟಿ.
ರಾಜಶೇಖರ ಕೋಟಿ.
Next Story
X