ಅಪರಿಚಿತ ಮೃತದೇಹ ಪತ್ತೆ
ಬೈಂದೂರು, ಎ.17: ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಸಮುದ್ರ ತೀರದ ಬಳಿ ಎ.16ರಂದು ಸಂಜೆ ವೇಳೆ ಸುಮಾರು 30 ರಿಂದ 50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಸುಮಾರು 25ರಿಂದ 30 ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿದ ಸಮಯದಲ್ಲಿ ಅಥವಾ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story