Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯಾ ಕುಮಾರ್‌ ಹಾಸ್ಟೆಲ್‌ಮೇಟ್ ...

ಕನ್ಹಯ್ಯಾ ಕುಮಾರ್‌ ಹಾಸ್ಟೆಲ್‌ಮೇಟ್ ಮೊಯ್ಸಿನ್‌ ಪಟ್ಟಾಂಬಿ ಕ್ಷೇತ್ರಕ್ಕೆ ಸಿಪಿಐ ಅಭ್ಯರ್ಥಿ

ಸಮಸ್ತ ಕೇರಳ ಶಿಕ್ಷಣ ಮಂಡಳಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿವಂಗತ ಕೆ.ಟಿ. ಮಾನು ಮುಸ್ಲಿಯಾರ್‌ ಮೊಮ್ಮಗ

ವಾರ್ತಾಭಾರತಿವಾರ್ತಾಭಾರತಿ18 April 2016 1:43 PM IST
share
ಕನ್ಹಯ್ಯಾ ಕುಮಾರ್‌  ಹಾಸ್ಟೆಲ್‌ಮೇಟ್  ಮೊಯ್ಸಿನ್‌  ಪಟ್ಟಾಂಬಿ ಕ್ಷೇತ್ರಕ್ಕೆ ಸಿಪಿಐ ಅಭ್ಯರ್ಥಿ

ಹೊಸದಿಲ್ಲಿ, ಎ.18: ಜೆಎನ್ ವಿವಿ ವಿದ್ಯಾರ್ಥಿ ಸಂಘದ ನಾಯಕ ಕನ್ಹೇಯಾ ಕುಮಾರ್‌ ಅವರ  ಹಾಸ್ಟೆಲ್‌ಮೇಟ್  ಮುಹಮ್ಮದ್‌ ಮೊಯ್ಸಿನ್‌  ಅವರು ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಾಲಕ್ಕಾಡ್ ಜಿಲ್ಲೆಯ ಪಟ್ಟಾಂಬಿ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಕೇರಳ ಸರಕಾರದ ಮೊದಲ ಮುಖ್ಯಮಂತ್ರಿ ಇಎಂಎಸ್ ನಂಬೂದರಿಪಾಡ್ ಅವರು 1960ರಿಂದ ನಾಲ್ಕು ಬಾರಿ ಪಟ್ಟಾಂಬಿ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.

1957ರಿಂದ ಈ ತನಕ ನಡೆದ 14 ಚುನಾವಣೆಗಳಲ್ಲಿ 2001ರ ತನಕ ಎಡರಂಗ ಈ ಕ್ಷೇತ್ರದಲ್ಲಿ  ಪ್ರಾಬಲ್ಯವನ್ನು  ಹೊಂದಿತ್ತು. 9 ಬಾರಿ ಎಡರಂಗದ  ಅಭ್ಯರ್ಥಿಗಳು ಚುನಾಯಿತರಾಗಿದ್ದರು. ಸಿಪಿಐ ಪಕ್ಷದಿಂದ 1996ರಲ್ಲಿ  ಕೆಇ ಇಸ್ಮಾಯೀಲ್‌(1996-2001)  ಕೊನೆಯ ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದರು.  ಬಳಿಕ ಅವರು ಎರಡು ಬಾರಿ ಕಾಂಗ್ರೆಸ್‌ನ ಸಿ.ಪಿ. ಮುಹಮ್ಮದ್‌ ವಿರುದ್ಧ ಸೋತಿದ್ದರು. 

2011ರಲ್ಲಿ ಇಸ್ಮಾಯೀಲ್‌ ಬದಲಿಗೆ ಕೆ.ಪಿ.ಸುರೇಶ್‌ ರಾಜ್‌ ಸಿಪಿಐನಿಂದ  ಕಣಕ್ಕಿಳಿದರೂ ಅವರಿಗೆ  ಗೆಲ್ಲಲು ಸಾಧ್ಯವಾಗಲಿಲ್ಲ. 2001ರಿಂದ  ಕ್ರಾಂಗ್ರೆಸ್‌ನ ಸಿ.ಪಿ. ಮುಹಮ್ಮದ್‌ ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಕೈ ತಪ್ಪಿರುವ ಈ ಕ್ಷೇತ್ರವನ್ನು ಮರಳಿ ಪಡೆಯಲು  ಎಡರಂಗದ ಧುರೀಣರು ಸತತ ಪ್ರಯತ್ನ ನಡೆಸುತ್ತಿದ್ದಾರೆ.  ಈ ಬಾರಿ ಜೆಎನ್ ವಿವಿ ವಿದ್ಯಾರ್ಥಿ ಮುಹಮ್ಮದ್‌ ಮೊಯ್ಸಿನ್‌ಗೆ ಟಿಕೆಟ್‌ ನೀಡಲು  ಎಡರಂಗದ ನಾಯಕರು ನಿರ್ಧರಿಸಿದ್ದಾರೆ.
ಮೊಯ್ಸಿನ್‌ ಅವರು ಖ್ಯಾತ ಧಾರ್ಮಿಕ ವಿದ್ವಾಂಸ ಸಮಸ್ತ ಕೇರಳ ಶಿಕ್ಷಣ ಮಂಡಳಿಯ  ಪ್ರಧಾನ ಕಾರ್ಯದರ್ಶಿಯಾಗಿದ್ದ  ದಿವಂಗತ ಕೆ.ಟಿ. ಮಾನು ಮುಸ್ಲಿಯಾರ್‌ (ಕೆಟಿ ಮುಹಮ್ಮದ್‌ ಮುಸ್ಲಿಯಾರ್‌) ಅವರ ಮೊಮ್ಮಗ. ಈ ಕಾರಣದಿಂದಾಗಿ ಮೊಯ್ಸಿನ್‌ಗೆ ಟಿಕೆಟ್‌ ನೀಡಿದರೆ ಲಾಭವಾಗಬಹುದು ಎನ್ನುವುದು ಎಡರಂಗದ ಲೆಕ್ಕಚಾರ.
30ರ ಹರೆಯದ ಮೊಯ್ಸಿನ್‌  ಜೆಎನ್ ವಿವಿಯಲ್ಲಿ ಸಿಪಿಐ ವಿದ್ಯಾರ್ಥಿ ಸಂಘಟನೆ ಎಐಎಸ್‌ಎಫ್‌ನ ಉಪಾಧ್ಯಕ್ಷರಾಗಿದ್ದಾರೆ.  ಮೇ 16ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಮೊಯ್ಸಿನ್‌ ಸ್ಪರ್ಧಾ ಕಣಕ್ಕೆ ಧುಮುಕಿದರೆ ಕನ್ಹೇಯ ಕುಮಾರ್‌ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X