ಬಜ್ಪೆ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ; ಮಹಿಳೆ ಮೃತ್ಯು

ಸುರತ್ಕಲ್, ಎ.18: ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬಜ್ಪೆಯ ಕೆಂಜಾರು ಕ್ರಾಸ್ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಪೆರ್ಮುದೆಯ ಬಟ್ರಕೆರೆಯ ಎಂಬಲ್ಲಿನ ನಿವಾಸಿ ಶಬಾನಾ ಖಾನ್ (26) ಮೃತಪಟ್ಟವರಾಗಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್‌ನ ಉದ್ಯೋಗಿಯಾಗಿದ್ದ ಶಬಾನಾ ಕೆಲಸಕ್ಕಾಗಿ ಪೆರ್ಮುದೆಯಿಂದ ಮಂಗಳೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಶಬಾನಾ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಅತೀ ವೇಗದಿಂದ ಬಂದು ಹಿಂದುಗಡೆಯಿಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಶಬಾನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬೆನ್ನಲ್ಲೇ ಟಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಲಾರಿಯನ್ನು ವಶಕ್ಕೆ ಪಡೆದುಕೊಂಡ ಸುರತ್ಕಲ್ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Next Story





