Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಎಲ್ಲರಿಂದಲೂ ಓಲೈಕೆ ಬಯಸುವ ಸುಂದರ...

ಭಾರತ ಎಲ್ಲರಿಂದಲೂ ಓಲೈಕೆ ಬಯಸುವ ಸುಂದರ ಮಹಿಳೆಯಂತೆ : ಚೀನಾದ ‘ಗ್ಲೋಬಲ್ ಟೈಮ್ಸ್’

ವಾರ್ತಾಭಾರತಿವಾರ್ತಾಭಾರತಿ18 April 2016 5:44 PM IST
share
ಭಾರತ ಎಲ್ಲರಿಂದಲೂ ಓಲೈಕೆ ಬಯಸುವ ಸುಂದರ ಮಹಿಳೆಯಂತೆ : ಚೀನಾದ ‘ಗ್ಲೋಬಲ್ ಟೈಮ್ಸ್’

ಬೀಜಿಂಗ್, ಎ. 18: ‘ಭಾರತ ಓರ್ವ ಅತ್ಯಾಕರ್ಷಕ ಮಹಿಳೆಯಿದ್ದಂತೆ; ಮುಖ್ಯವಾಗಿ ಅಮೆರಿಕ ಮತ್ತು ಚೀನಾ ಸೇರಿದಂತೆ ಎಲ್ಲ ಪುರುಷರು ಆಕೆಯನ್ನು ಓಲೈಸಲು ಯತ್ನಿಸುತ್ತಾರೆ’ ಎಂದು ಚೀನಾದ ಸರಕಾರಿ ಒಡೆತನದ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ ಬಣ್ಣಿಸಿದೆ.

ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್‌ರ ಮುಂಬರುವ ಚೀನಾ ಭೇಟಿಯ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಪತ್ರಿಕೆಯಲ್ಲಿ ಪ್ರಕಟಗೊಂಡ ‘‘ಇಂಡೋ-ಯುಎಸ್ ಸ್ಟ್ರಾಟಜಿಕ್ ಡಿಸ್ಟ್ರಸ್ಟ್ ಸ್ಟಾಲ್ಸ್ ಎಲ್‌ಎಸ್‌ಎ ಸೈನಿಂಗ್’’ ಎಂಬ ತಲೆಬರಹದ ಲೇಖನದಲ್ಲಿ ಈ ಮೇಲಿನ ಸಾಲು ಬರುತ್ತದೆ.

ಆ ಲೇಖನದ ಸಾರಾಂಶ ಇಲ್ಲಿದೆ:

‘‘ಪರಸ್ಪರ ಸಾಂಪ್ರದಾಯಿಕ ಅಪನಂಬಿಕೆಗಳ ಹೊರತಾಗಿಯೂ, ಭಾರತ ಮತ್ತು ಅಮೆರಿಕಗಳ ನಡುವಿನ ಮೈತ್ರಿಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ. ಆದರೆ, ಈ ಊಹಾಪೋಹಗಳೂ ಸೂಪರ್-ಪವರ್‌ಗಳ ನಡುವಿನ ಮಧ್ಯವರ್ತಿಯ ಪಾತ್ರವಹಿಸಲು ಹೊರಟಿರುವ ಭಾರತದ ಮಹತ್ವಾಕಾಂಕ್ಷೆಯನ್ನು ಕಡಗಣಿಸಿದಂತೆ. ಇದು ಭಾರತಕ್ಕೆ ಅಪರಿಚಿತ ಪಾತ್ರವೇನಲ್ಲ. ಅದರ ರಾಜತಾಂತ್ರಿಕ ಚಾಕಚಕ್ಯತೆ ಶೀತಲ ಯುದ್ಧದ ಅವಧಿಯಲ್ಲಿ ಜಗತ್ತಿನ ಎರಡು ಬಣಗಳ ನಡುವೆ ತನಗೊಂದು ವಿಶೇಷ ಸ್ಥಾನವನ್ನು ಪಡೆದುಕೊಳ್ಳಲು ಹೇಗೆ ಸಹಾಯ ಮಾಡಿತ್ತು ಎಂಬುದನ್ನು ಸ್ಮರಿಸಿಕೊಳ್ಳಬಹುದಾಗಿದೆ’’.

 ‘‘ಎಲ್ಲ ಗಂಡಸರಿಂದ, ಅದರಲ್ಲೂ ಮುಖ್ಯವಾಗಿ ಬಲಿಷ್ಠ ಅಮೆರಿಕ ಮತ್ತು ಚೀನಾಗಳಿಂದ ಓಲೈಸಿಕೊಳ್ಳಲು ಬಯಸುವ ಅತ್ಯಂತ ಸುಂದರ ಮಹಿಳೆಯಾಗಿಯೇ ಮುಂದುವರಿಯಲು ಭಾರತ ಬಯಸುತ್ತಿದೆ’’.

ಕಳೆದ ವಾರ, ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಶ್ಟನ್ ಕಾರ್ಟರ್ ಭಾರತಕ್ಕೆ ಮೂರು ದಿನಗಳ ಭೇಟಿ ನೀಡಿದ್ದರು. ಲಾಜಿಸ್ಟಿಕ್ಸ್ ಸಪೋರ್ಟ್ ಒಪ್ಪಂದ (ಎಲ್‌ಎಸ್‌ಎ)ಕ್ಕೆ ಸಂಗಂಧಿಸಿದ ಎಲ್ಲ ಅಂಶಗಳು ಬಗೆಹರಿದಿವೆ ಹಾಗೂ ಉಭಯ ಬಣಗಳು ಮುಂಬರುವ ವಾರಗಳಲ್ಲಿ ಒಪ್ಪಂದದ ಬರಹವನ್ನು ಅಂತಿಮಗೊಳಿಸುತ್ತವೆ ಎಂಬ ನಿರ್ಣಯಕ್ಕೆ ತಾನು ಮತ್ತು ಭಾರತೀಯ ರಕ್ಷಣಾ ಸಚಿವ ತಾತ್ವಿಕವಾಗಿ ಬಂದಿದ್ದೇವೆ ಎಂದು ಅವರು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X