Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ...

ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಬೆಂಗಳೂರಿನಲ್ಲಿ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ18 April 2016 9:56 PM IST
share

ಶಿವಮೊಗ್ಗ, ಎ. 18: ರೈಲ್ವೆಯಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ನಿರುದ್ಯೋಗಿಗಳಿಂದ ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ನಿವಾಸಿಗಳಾದ ಲೋಕೇಶ್ (50), ಮೀನಾಕ್ಷಮ್ಮ (51), ಪ್ರಕಾಶ್ (40) ಹಾಗೂ ಯಶವಂತಪ್ಪ (45) ಬಂಧಿತ ಆರೋಪಿ ಗಳೆಂದು ಗುರುತಿಸಲಾಗಿದೆ. ಇತ್ತೀಚೆಗೆ ಇದೇ ಜಾಲದ ಓರ್ವ ಆರೋಪಿ ಯನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ಒಟ್ಟಾರೆ ಇಲ್ಲಿಯವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದಂತಾಗಿದೆ. ಸಬ್ ಇನ್‌ಸ್ಪೆಕ್ಟರ್ ಉಮೇಶ್‌ಕುಮಾರ್ ನೇತೃತ್ವದ ಪೊಲೀಸ್ ತಂಡ ಈ ಎಲ್ಲ ಆರೋಪಿಗಳನ್ನು ಬಂಧಿಸಿ ಕರೆತರುವಲ್ಲಿ ಯಶಸ್ವಿ ಯಾಗಿದೆ. ಈ ವಂಚನಾ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಕೆಲವರು ತಲೆಮರೆಸಿ ಕೊಂಡಿ ದ್ದಾರೆನ್ನಲಾಗಿದೆ. ಮತ್ತೊಂದೆಡೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವ್ಯಾಪಕ ಜಾಲ ಬೀಸಿದ್ದಾರೆ. ಹಲವೆಡೆ ವಂಚನೆ:

<ರೈಲ್ವೆ ಇಲಾಖೆ ಯಲ್ಲಿ ‘ಸಿ’ ಹಾಗೂ ‘ಡಿ’ ಗ್ರೂಪ್ ಹುದ್ದೆ ಕೊಡಿಸುವುದಾಗಿ ನಿರುದ್ಯೋಗಿಗಳು ಹಾಗೂ ಅವರ ಪೋಷಕರಿಗೆ ಆಮಿಷವೊಡ್ಡುತ್ತಿದ್ದ ವಂಚಕರು, ಲಕ್ಷಾಂತರ ರೂ. ಪಡೆದು ಕೊಳ್ಳು ತ್ತಿದ್ದರು. ಹಣ ಪಡೆದುಕೊಂಡ ನಂತರ ಕೆಲಸ ಕೊಡಿಸದೆ ವಂಚಿಸಿ ಪರಾರಿಯಾಗುತ್ತಿದ್ದರು. ಶಿವಮೊಗ್ಗ ಮಾತ್ರವಲ್ಲದೆ ರಾಜ್ಯದ ಹಲವೆಡೆ ವಂಚನಾ ಜಾಲದವರು ನಾಗರಿಕರಿಗೆ ಮೋಸ ಮಾಡಿರುವ ಮಾಹಿತಿಯಿದ್ದು, ವಂಚನಾ ಮೊತ್ತ ನಾಲ್ಕೈದು ಕೋಟಿ ರೂ. ಮೀರಿರುವ ಸಾಧ್ಯತೆ ಯಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡುತ್ತಿದ್ದು, ಉನ್ನತ ಮಟ್ಟದ ತನಿಖೆಯ ನಂತರವಷ್ಟೆ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಾಗಿದೆ. ಕೇಸ್ ದಾಖಲು: ಪ್ರಸ್ತುತ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಂಚನಾ ಜಾಲದ ವಿರುದ್ಧ ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ವಂಚನಾ ಮೊತ್ತ 45 ಲಕ್ಷ ರೂ.ಗಳಿಗೂ ಅಧಿಕ ಎನ್ನಲಾಗಿದೆ. ಉಳಿದಂತೆ ನಗರದ ದೊಡ್ಡಪೇಟೆ, ಜಯನಗರ, ಕೋಟೆ ಪೊಲೀಸ್ ಠಾಣೆಗಳಲ್ಲಿಯೂ ವಂಚನಾ ಜಾಲದ ವಿರುದ್ಧ ದೂರುಗಳು ದಾಖಲಾಗಿವೆ.

ಈ ನಡುವೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ, ಚೆನ್ನಗಿರಿ ಪೊಲೀಸ್ ಠಾಣೆ ಗಳ ಲ್ಲಿಯೂ ವಂಚನಾ ಜಾಲದ ವಿರುದ್ಧ ಕೇಸ್‌ಗಳು ದಾಖಲಾಗಿವೆ ಎಂದು ಸ್ಥಳೀಯ ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡುತ್ತವೆ. ಪ್ರಸ್ತುತ ವಂಚನೆಗೊಳಗಾದ ಹಲವು ವ್ಯಕ್ತಿಗಳು ಪೊಲೀಸರಿಗೆ ದೂರು ನೀಡಲು ಮುಂದಾಗುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X