ಲಾಟರಿ ಟಿಕೆಟ್ ಮಾರಾಟ ಮಾಡಿದರೆ ಕಠಿಣ ಕ್ರಮ: ಡಿಸಿ ಎಚ್ಚರಿಕೆ
ಮಡಿಕೇರಿ, ಎ.18: ಜಿಲ್ಲೆ ಯಲ್ಲಿ ಅನಧಿಕೃತವಾಗಿ ಲಾಟರಿ ಟಿಕೆಟ್ ಮಾರಾಟ ಮಾಡು ವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮ್ಮದ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಲಾಟರಿ ವಿಚಕ್ಷಣಾ ದಳ ಸಭೆಯಲ್ಲಿ ಅವರು ಮಾತನಾಡಿದರು. ಅನಧಿಕೃತ ಲಾಟರಿ ಟಿಕೆಟ್ ಮಾರಾಟದ ಬಗ್ಗೆ ದೂರುಗಳು ಬಂದಲ್ಲಿ, ಅನಿರೀಕ್ಷಿತ ಭೇಟಿ ನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಮತ್ತು ಪೋಲೀಸ್ ಇಲಾಖೆ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ (ಸಿದ್ದಾಪುರ, ಗೋಣಿಕೊಪ್ಪ, ಕುಟ್ಟ, ವೀರಾಜಪೇಟೆ, ಪೊನ್ನಂಪೇಟೆ, ಶ್ರೀಮಂಗಲ) ಹಮ್ಮಿಕೊಂಡು ಪರಿಶೀಲಿ ಸಲಾಗುವುು ಮತ್ತು ದೂರುಗಳು ಬಂದಲ್ಲಿ ತಕ್ಷಣ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿ
Next Story





