ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಪುತ್ತೂರು, ಎ.18: ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಬಾಯಂಬಾಡಿ ಎಂಬಲ್ಲಿ ಸೋಮವಾರ ನಡೆದಿದೆ.
ಬಾಯಂಬಾಡಿ ಅಟೋಳಿ ನಿವಾಸಿ ಕೆಎಫ್‌ಡಿಸಿ ಸಿಬ್ಬಂದಿ ಹೊನ್ನಪ್ಪ ಗೌಡ ಎಂಬವರ ಪುತ್ರ ಪುನೀತ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪುತ್ತೂರಿನ ಖಾಸಗಿ ಪದವಿಪೂರ್ವ ಕಾಲೇಜ್‌ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿದ್ದ ಪುನೀತ್ ಕಳೆದ ಕೆಲ ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಸೋಮವಾರ ಮನೆಯ ಪಕ್ಕದಲ್ಲಿರುವ ಬಚ್ಚಲು ಮನೆಯ ಛಾವಣಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





